ಬ್ರೇಕಿಂಗ್ ನ್ಯೂಸ್
14-05-26 05:39 pm HK News Staffer ಕರಾವಳಿ
ಮಂಗಳೂರು, ಮೇ 14: ಮಂಗಳೂರಿನ ರಿಯಲ್ ಎಸ್ಟೇಟ್ ಉದ್ಯಮಿ ಹಾಗೂ ‘ಲ್ಯಾನ್ಸಿ ಕನ್ಸ್ಟ್ರಕ್ಷನ್ಸ್’ ಸಂಸ್ಥೆಯ ಸ್ಥಾಪಕ ಲ್ಯಾನ್ಸಿ ಜೋಸೆಫ್ ಮಸ್ಕರೇನಸ್ (77) ಅಲ್ಪಕಾಲದ ಅಸೌಖ್ಯದ ಬಳಿಕ ಬುಧವಾರ ನಿಧನರಾದರು. ಮೃತರು ಪತ್ನಿ , ಮೂವರು ಪುತ್ರಿಯರನ್ನು ಅಗಲಿದ್ದಾರೆ.
1973ರಲ್ಲಿ ಪರವಾನಗಿ ಪಡೆದ ಪ್ಲಂಬರ್ ಆಗಿ ವೃತ್ತಿಜೀವನ ಆರಂಭಿಸಿದ ಅವರು, ಹಂತ ಹಂತವಾಗಿ ಸಿವಿಲ್ ಕಾಂಟ್ರಾಕ್ಟರ್ ಆಗಿ ಬೆಳೆದಿದ್ದರು. 1982 ರಲ್ಲಿ ಹಂಪನಕಟ್ಟೆಯ ‘ಧನ್ಯವಾದ್’ , 1984 ರಲ್ಲಿ ‘ಪಾಂಪೆ ಶೇಡ್ ಅಪಾರ್ಟ್ಮೆಂಟ್’ ನಿರ್ಮಿಸಿದ್ದರು. ಮುಂದೆ ಎಲ್ಜೆನ್ ಪ್ರಮೋಟರ್ಸ್, ನಿಶಾಲ್ ಅಸೋಸಿಯೇಟ್ಸ್ ಸೇರಿದಂತೆ ಹಲವು ಸಂಸ್ಥೆಗಳ ಮೂಲಕ ಸಾವಿರಾರು ಜನರಿಗೆ ಉದ್ಯೋಗ ನೀಡುವ ಬೃಹತ್ ಉದ್ಯಮ ಸಾಮ್ರಾಜ್ಯವನ್ನು ಕಟ್ಟಿದರು.
ಜಿಲ್ಲೆಯಲ್ಲಿ ಎಲ್ಲ ಸಮುದಾಯದವರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ಬಜ್ಪೆ ಚರ್ಚ್, ಬಿಕರ್ನಕಟ್ಟೆಯ ಇನ್ಫೆಂಟ್ ಜೀಸಸ್ ಚರ್ಚ್ ಸೇರಿದಂತೆ 25ಕ್ಕೂ ಹೆಚ್ಚು ಚರ್ಚ್ಗಳು, 4 ಮಸೀದಿಗಳು ಮತ್ತು 3 ದೇವಾಲಯ ಕಟ್ಟಡಗಳನ್ನು ನಿರ್ಮಿಸಿದ್ದಾರೆ. ಆರೆಸ್ಸೆಸ್ ಸಂಘ ನಿಕೇತನದ ಬಹುಮಹಡಿ ಸಭಾಂಗಣ ಸಂಕೀರ್ಣವನ್ನು ಇವರೇ ನಿರ್ಮಿಸಿದ್ದರು.
ಸೈಂಟ್ ಅಲೋಶಿಯಸ್ ಕಾಲೇಜಿನ ಆಡಳಿತ ಮಂಡಳಿ ಬ್ಲಾಕ್, ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜು ಮತ್ತು ಯುನಿಟಿ ಹೆಲ್ತ್ ಕಾಂಪ್ಲೆಕ್ಸ್ನ ನರ್ಸಿಂಗ್ ಸ್ಕೂಲ್ ಇವರ ಸಂಸ್ಥೆಯ ಮೂಲಕ ನಿರ್ಮಾಣಗೊಂಡಿದೆ. ಇವರ ಉದ್ಯಮಶೀಲತೆ ಮತ್ತು ವೃತ್ತಿಪರತೆಯನ್ನು ಗುರುತಿಸಿ 2006 ರಲ್ಲಿ ‘ರಚನಾ ವರ್ಷದ ಉದ್ಯಮಿ’ ಪ್ರಶಸ್ತಿ, 2012 ರಲ್ಲಿ ‘ಎಫ್ಕೆಸಿಎ ವೃತ್ತಿಪರ ಶ್ರೇಷ್ಠತಾ ಪ್ರಶಸ್ತಿ’ ನೀಡಿ ಗೌರವಿಸಲಾಗಿತ್ತು.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am