ಬ್ರೇಕಿಂಗ್ ನ್ಯೂಸ್
06-01-21 12:14 pm Mangalore Correspondent ಕರಾವಳಿ
ಪಡುಬಿದ್ರಿ, ಜ.6 : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಜಮಾಡಿಯಲ್ಲಿ ನಡೆದಿದೆ.
ಶಿವನಗರದ ಭಾಸ್ಕರ ರಾವ್ ಎಂಬವರ ಮನೆಯಲ್ಲಿ ಕಳೆದ 2 ತಿಂಗಳಿಂದ ವಾಸವಿದ್ದ ಅವರ ಸಹೋದರಿ ಕುಸುಮ ಎಚ್.ರಾವ್(70) ಮನೆಯಲ್ಲಿ ಪತ್ರ ಬರೆದಿಟ್ಟು ಪಕ್ಕದ ತೋಟದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೂಲತಃ ಪುತ್ತೂರಿನವರಾದ ಕುಸುಮಾ ಅವರ ಪತಿ 2 ವರ್ಷದ ಹಿಂದೆ ತೀರಿಕೊಂಡಿದ್ದು, ಮಕ್ಕಳಿರಲಿಲ್ಲ. ಪುತ್ತೂರಿನಲ್ಲೇ ವಾಸವಿದ್ದ ಕುಸುಮ, 2 ತಿಂಗಳ ಹಿಂದೆ ಹೆಜಮಾಡಿಯ ಸಹೋದರನ ಮನೆಗೆ ಬಂದಿದ್ದರು. ಅಧಿಕ ರಕ್ತದೊತ್ತಡ, ಮಧುಮೇಹ ಹಾಗೂ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಅವರು ಸೋಮವಾರ ಬೆಳಗ್ಗೆಯಿಂದ ನಾಪತ್ತೆಯಾಗಿದ್ದರು.
ಬಳಿಕ ಮನೆಯವರು ಮತ್ತು ಆಸುಪಾಸಿನವರು ಎಲ್ಲೆಡೆ ಹುಡುಕಾಡಿದ್ದರೂ ಸಿಕ್ಕಿರಲಿಲ್ಲ. ಮಂಗಳವಾರ ಬೆಳಗ್ಗೆ ಶಿವನಗರ ರೋಹಿತ್ ರಾವ್ ಎಂಬವರ ತೋಟದ ಆವರಣವಿಲ್ಲದ ಬಾವಿಯಲ್ಲಿ ಅವರ ಶವ ಕಂಡುಬಂದಿತ್ತು. ಈ ಸಂದರ್ಭ ಮೂಲ್ಕಿಯ ಆಸಿಫ್ ಆಪತ್ಬಾಂಧವ ನೆರವಿನಿಂದ ಶವವನ್ನು ಮೇಲೆತ್ತಲಾಯಿತು. ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Old woman Jumps into well in Padubidri. The deceased has been identified as Kusuma Roa(70).
23-03-25 11:01 pm
Bangalore Correspondent
Basavaraj Horatti: ಹನಿಟ್ರ್ಯಾಪ್ ಸದ್ದು ; ವಿಧಾನ...
23-03-25 09:50 pm
Honey trap, Karnataka, Rajanna: ರಾಜ್ಯ ರಾಜಕೀಯದ...
23-03-25 06:02 pm
Karnataka Bandh Live, Bangalore, Mangalore Ud...
22-03-25 12:28 pm
Koppal, Sslc Exams, Mother death: SSLC ಪರೀಕ್ಷ...
21-03-25 10:41 pm
23-03-25 02:40 pm
HK News Desk
15 ವರ್ಷದ ಹುಡುಗನಿಂದ ಗರ್ಭವತಿ ; ಹರೆಯದಲ್ಲಿ ಮಾಡಿದ...
22-03-25 09:50 pm
ದೆಹಲಿ ಹೈಕೋರ್ಟ್ ಜಡ್ಜ್ ಮನೆಯಲ್ಲಿ ಅಗಣಿತ ನಗದು ಪತ್ತ...
21-03-25 04:46 pm
Rana Daggubati, Vijay Deverakonda, Prakash Ra...
20-03-25 10:40 pm
ಹೆದ್ದಾರಿ ಬಳಕೆದಾರರಿಗೆ ಸಿಹಿಸುದ್ದಿ ; ಟೋಲ್ ಶುಲ್ಕ...
20-03-25 07:19 pm
23-03-25 10:44 pm
Mangalore Correspondent
MP Govinda Karajola, Mangalore, Honey Trap: ಸ...
22-03-25 06:48 pm
Mangalore, BJP protest, MLC Bharathi Shetty,...
22-03-25 05:45 pm
Sullia, Mangalore, Rabies death: ನಾಯಿ ಮರಿ ಕಚ್...
22-03-25 03:15 pm
Belthangady, Baby News, Mangalore: ಬೆಳ್ತಂಗಡಿ...
22-03-25 01:07 pm
23-03-25 03:56 pm
HK News Desk
Mangalore Fraud, Online, Telagram: ಟೆಲಿಗ್ರಾಂನ...
22-03-25 10:51 pm
Bangalore Fake Police, Crime: ಪಾರ್ಕ್ನಲ್ಲಿ ಜೋ...
21-03-25 12:44 pm
Mangalore, Bangalore Airport Drugs; ಮಂಗಳೂರು ಪ...
20-03-25 05:29 pm
Mangalore crime, Kukkeshree PG, Kadri: ಪಿಜಿ ಚ...
20-03-25 04:13 pm