ಬ್ರೇಕಿಂಗ್ ನ್ಯೂಸ್
27-05-26 12:29 pm HK News Desk ಕರಾವಳಿ
ಮಂಗಳೂರು, ಮೇ 27: ಕುದುರೆಮುಖ ಕಬ್ಬಿಣದ ಅದಿರು ಕಂಪನಿಯನ್ನು ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದ (ಎನ್‌ಎಂಡಿಸಿ) ಜೊತೆ ವಿಲೀನಗೊಳಿಸಬೇಕು ಹಾಗೂ ಕುದುರೆಮುಖ ಸಂಸ್ಥೆಯ ಕಾರ್ಮಿಕರ ಬಹುದಿನಗಳ ಬೇಡಿಕೆಗಳನ್ನು ಈಡೇರಿಸಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಡಾ. ಭರತ್ ಶೆಟ್ಟಿ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು.
ಬೆಂಗಳೂರಿನಲ್ಲಿ ಸಚಿವರನ್ನು ಭೇಟಿ ಮಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿನ ಉದ್ಯೋಗ ಅವಕಾಶಗಳನ್ನು ಸೃಷ್ಟಿಸುವ ನಿಟ್ಟಿನಲ್ಲಿ ಬಂಡವಾಳ ಹೂಡಿಕೆ ಮತ್ತು ಹೊಸ ಕೈಗಾರಿಕೆಗಳ ಸ್ಥಾಪನೆಗೆ ವಿಶೇಷ ಒತ್ತು ನೀಡಬೇಕು ಎಂದು ಮನವಿ ಮಾಡಿದರು. ಜಿಲ್ಲೆಗೆ ಭೇಟಿ ನೀಡಿ ಕೇಂದ್ರದ ಅಧೀನದಲ್ಲಿರುವ ಕೈಗಾರಿಕೆಗಳ ಅಭಿವೃದ್ಧಿ ಕಾರ್ಯಗಳನ್ನು ಖುದ್ದು ಪರಿಶೀಲಿಸಿ, ಸ್ಥಳೀಯ ಸಮಸ್ಯೆಗಳ ಇತ್ಯರ್ಥಕ್ಕೆ ಆದ್ಯತೆ ನೀಡಿ ಜಿಲ್ಲಾ ಪ್ರವಾಸ ಕೈಗೊಳ್ಳಬೇಕು ಎಂದು ಕೋರಿದರು.
ರಾಜ್ಯ ಸರಕಾರವು ಕುದುರೆಮುಖ ಕಬ್ಬಿಣದ ಅದಿರು ಕಂಪನಿಗೆ ಗಣಿಗಾರಿಕೆಗೆ ಅನುಮತಿ ನೀಡದಿರುವುದರಿಂದ ಕಂಪನಿಯ ಕಾರ್ಯಾಚರಣೆಗೆ ತೀವ್ರ ತೊಡಕಾಗಿದೆ. ಇದರಿಂದ ಕಾರ್ಮಿಕರ ಭವಿಷ್ಯವೂ ಅತಂತ್ರವಾಗಿದೆ. ಕಳೆದ ವಿಧಾನಸಭಾ ಅಧಿವೇಶನದಲ್ಲಿ ಕುದುರೆಮುಖ ಗಣಿಗಾರಿಕೆ ಸಮಸ್ಯೆ ಕುರಿತಾಗಿ ಗಮನಸೆಳೆದಿದ್ದೆ. ಸರ್ಕಾರ ಮಾತ್ರ ಸ್ಪಂದಿಸಿಲ್ಲ. ಈ ಹಿನ್ನೆಲೆಯಲ್ಲಿ ಗಣಿಗಾರಿಕೆ ಅನುಮತಿ ನೀಡುವಂತೆ ರಾಜ್ಯ ಸರಕಾರದ ಮೇಲೆ ಕೇಂದ್ರವು ಒತ್ತಡ ಹೇರಬೇಕು ಎಂದು ಶಾಸಕರು ಮನವಿಯಲ್ಲಿ ತಿಳಿಸಿದರು.
ಕುದುರೆಮುಖ ಸಂಸ್ಥೆಯನ್ನು ಎನ್‌ಎಂಡಿಸಿಯೊಂದಿಗೆ ವಿಲೀನಗೊಳಿಸುವುದರಿಂದ ಕಂಪನಿಯ ಪುನಶ್ಚೇತನ ಸಾಧ್ಯವಾಗಲಿದೆ ಹಾಗೂ ಕರಾವಳಿ ಭಾಗದ ಕೈಗಾರಿಕಾ ಅಭಿವೃದ್ಧಿಗೆ ಹೊಸ ವೇಗ ದೊರೆಯಲಿದೆ ಎಂದು ಡಾ. ಭರತ್ ಶೆಟ್ಟಿ ಪ್ರತಿಪಾದಿಸಿದರು. ಮತ್ತಿತರ ಕೈಗಾರಿಕಾ ಸಮಸ್ಯೆಗಳ ಕುರಿತು ಸಚಿವರೊಂದಿಗೆ ಚರ್ಚಿಸಿ ವಿವರವಾದ ಮನವಿ ಪತ್ರ ಸಲ್ಲಿಸಿದರು.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am