ಬ್ರೇಕಿಂಗ್ ನ್ಯೂಸ್
01-06-26 07:05 pm HK News Staffer ಕರಾವಳಿ
ಉಡುಪಿ, ಜೂನ್ 1: ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಚಿವ ಸಂಪುಟದಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಕೆಥೋಲಿಕ್ ಸಭಾ ಉಡುಪಿ ಪ್ರದೇಶ್ ಕಮಿಟಿಯ ಆಗ್ರಹದ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧ ಚರ್ಚೆಗಳು ತೀವ್ರಗೊಂಡಿವೆ. ಜಾಲತಾಣದಲ್ಲಿ ಐವನ್ ಡಿಸೋಜ ಅವರಿಗೆ ಸಚಿವ ಸ್ಥಾನ ನೀಡುವುದಕ್ಕೆ ಕೆಲವರು ಬೆಂಬಲ ಸೂಚಿಸಿದರೆ, ಇನ್ನೂ ಹಲವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಕ್ರೈಸ್ತ ಸಮುದಾಯಕ್ಕೆ ಕೊಡುಗೆ ಏನು?
ಸಚಿವ ಸ್ಥಾನ ನೀಡುವ ಬೇಡಿಕೆಗೆ ವಿರೋಧ ವ್ಯಕ್ತಪಡಿಸಿದ ಹಲವರು, "ಇಷ್ಟು ವರ್ಷ ರಾಜಕೀಯದಲ್ಲಿರುವ ಐವನ್ ಡಿಸೋಜರಿಂದ ಕ್ರೈಸ್ತ ಸಮುದಾಯಕ್ಕೆ ಅವರ ಕೊಡುಗೆ ಏನು?" ಎಂದು ಪ್ರಶ್ನಿಸಿದ್ದಾರೆ. "ಇವರಿಂದ ಕ್ರೈಸ್ತರಿಗೆ ಒಂದು ರೂಪಾಯಿ ಉಪಯೋಗವೂ ಆಗಿಲ್ಲ. ಮಂಗಳೂರು ಮತ್ತು ಉಡುಪಿ ಭಾಗಕ್ಕೆ ಮಾತ್ರ ಸೀಮಿತವಾಗಿದ್ದಾರೆ. ಯಾರಿಗಾದರೂ ಸಚಿವ ಸ್ಥಾನ ಕೊಡಲಿ ಆದರೆ ಇವರಿಗೆ ಮಾತ್ರ ಕೊಡಬಾರದು" ಎಂದು ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮತ್ತೊಬ್ಬರು, "ಎಂಎಲ್ಸಿ ಸ್ಥಾನವೇ ಬುದ್ಧಿವಂತರಿಗೆ ಮೀಸಲಾದ ಹುದ್ದೆ. ನೇರ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲ್ಲುವ ಸಾಮರ್ಥ್ಯ ಇಲ್ಲದವರು ಹೇಗೆ ಜನಪ್ರತಿನಿಧಿಯಾಗುತ್ತಾರೆ?" ಎಂದು ಪ್ರಶ್ನಿಸಿದ್ದಾರೆ. ಕೆಲವರು ಐವನ್ ಡಿಸೋಜ ಅವರ ರಾಜಕೀಯ ಪಯಣವನ್ನು ಪ್ರಶ್ನಿಸಿ, "ಇಷ್ಟು ವರ್ಷಗಳಲ್ಲಿ ಕ್ರೈಸ್ತ ಸಮುದಾಯದಿಂದ ಒಬ್ಬ ಹೊಸ ನಾಯಕನನ್ನಾದರೂ ಬೆಳೆಸಿದ್ದಾರಾ? ಅವರ ನಂತರ ಸಮುದಾಯವನ್ನು ಮುನ್ನಡೆಸುವ ನಾಯಕ ಯಾರು ಎಂಬುದರ ಬಗ್ಗೆ ಯೋಚನೆ ಮಾಡಿದ್ದಾರಾ?" ಎಂದು ಪ್ರಶ್ನಿಸಿದ್ದಾರೆ.


ಇದೇ ವೇಳೆ, ಐವನ್ ಡಿಸೋಜ ಪರವಾಗಿಯೂ ಹಲವರು ಧ್ವನಿ ಎತ್ತಿದ್ದಾರೆ. "ವಿಧಾನಸೌಧ ಮತ್ತು ವಿಧಾನ ಪರಿಷತ್ತಿನಲ್ಲಿ ಕ್ರೈಸ್ತ ಸಮುದಾಯದ ಹಕ್ಕುಗಳಿಗಾಗಿ ಹಲವು ಬಾರಿ ಧ್ವನಿ ಎತ್ತಿದ್ದಾರೆ. ಸಮುದಾಯದ ಸಮಸ್ಯೆಗಳಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಕೆಲಸ ಮಾಡಿದ್ದಾರೆ" ಎಂದು ಬೆಂಬಲಿಗರು ಅಭಿಪ್ರಾಯ ಪಟ್ಟಿದ್ದಾರೆ. ಕೆಲವರು, "ಕ್ರೈಸ್ತ ಸಮುದಾಯಕ್ಕೆ ಪ್ರಾತಿನಿಧ್ಯ ದೊರಕಬೇಕು. ಕರಾವಳಿಯಿಂದ ಒಬ್ಬರಿಗೆ ಸಚಿವ ಸ್ಥಾನ ನೀಡುವುದು ನ್ಯಾಯಸಮ್ಮತ" ಎಂದು ಹೇಳಿದ್ದಾರೆ.
ಕೆಲವರು ಆಂಧ್ರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷೆ ವೈ.ಎಸ್. ಶರ್ಮಿಳಾ ರೆಡ್ಡಿ ಅವರಿಗೆ ರಾಜ್ಯಸಭೆ ಅವಕಾಶ ದೊರೆತಿರುವುದನ್ನು ಉಲ್ಲೇಖಿಸಿ, "ಈಗಾಗಲೇ ಕ್ರೈಸ್ತ ಸಮುದಾಯಕ್ಕೆ ರಾಷ್ಟ್ರೀಯ ಮಟ್ಟದಲ್ಲಿ ಅವಕಾಶ ದೊರೆತಿದೆ. ಸಚಿವ ಸ್ಥಾನಕ್ಕಾಗಿ ಒತ್ತಡ ಹೇರುವುದು ಅಗತ್ಯವಿಲ್ಲ" ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.


ಕರಾವಳಿ ರಾಜಕೀಯದಲ್ಲಿ ಹೊಸ ಚರ್ಚೆ
ಕೆಥೋಲಿಕ್ ಸಭಾ ಬೇಡಿಕೆ ಕರಾವಳಿ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಕ್ರೈಸ್ತ ಸಮುದಾಯದ ರಾಜಕೀಯ ಪ್ರಾತಿನಿಧ್ಯ, ಸಮುದಾಯ ನಾಯಕರ ಪಾತ್ರ ಮತ್ತು ಕಾಂಗ್ರೆಸ್ ಪಕ್ಷದಲ್ಲಿನ ಅವಕಾಶಗಳ ಕುರಿತಂತೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಸಚಿವ ಸಂಪುಟ ರಚನೆಗೆ ಸಂಬಂಧಿಸಿದ ಅಂತಿಮ ನಿರ್ಧಾರ ಪ್ರಕಟವಾಗದಿದ್ದರೂ, ಐವನ್ ಡಿಸೋಜ ಹೆಸರು ಸುತ್ತ ನಡೆಯುತ್ತಿರುವ ಪರ-ವಿರೋಧ ಚರ್ಚೆಗಳು ಕರಾವಳಿ ರಾಜಕೀಯದಲ್ಲಿ ಗಮನ ಸೆಳೆಯುತ್ತಿವೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm