ಬ್ರೇಕಿಂಗ್ ನ್ಯೂಸ್
19-06-26 12:24 pm HK News Staffer ಕರಾವಳಿ
ಮಂಗಳೂರು, ಜೂನ್ 19: ಅಸ್ಸಾಂ, ಬಿಹಾರ ಮೂಲದ ಕಾರ್ಮಿಕರ ಪೂರ್ವಾಪರ ತಿಳಿದುಕೊಳ್ಳದೆ, ಹಿರಿಯ ಅಧಿಕಾರಿಗಳ ಅನುಮತಿ ಇಲ್ಲದೆ 30ಕ್ಕೂ ಹೆಚ್ಚು ಮಂದಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್ ನೀಡಿರುವ ಆರೋಪದಲ್ಲಿ ಬಜ್ಪೆ ಠಾಣೆಯ ಇಬ್ಬರು ಪೊಲೀಸ್ ಸಿಬಂದಿಯನ್ನು ಕಮಿಷನರ್ ಸುಧೀರ್ ರೆಡ್ಡಿ ಅಮಾನತು ಮಾಡಿದ್ದಾರೆ.
ಮಂಗಳೂರಿನ ಬಜಪೆ ಠಾಣೆಯ ಮಹಿಳಾ ಸಿಬ್ಬಂದಿ ಆಶಾ ಮತ್ತು ಹೆಡ್ ಕಾನ್ಸ್ ಟೇಬಲ್ ಮಂಜುನಾಥ್ ಅಮಾನತು ಆದವರು. ಇವರು ಕಳೆದೊಂದು ವರ್ಷದಲ್ಲಿ 31 ಮಂದಿಗೆ PCC (ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್) ನೀಡಿದ್ದಾರೆಂಬ ಆರೋಪ ಕೇಳಿಬಂದಿದೆ. ಉನ್ನತ ಮಟ್ಟದ ತನಿಖಾ ಏಜನ್ಸಿಯಿಂದ ಈ ರೀತಿಯ ದುರುಪಯೋಗ ಆಗಿರುವ ಬಗ್ಗೆ ಮಾಹಿತಿ ಪಡೆದ ಮಂಗಳೂರಿನ ಪೊಲೀಸ್ ಅಧಿಕಾರಿಗಳು ಪ್ರಾಥಮಿಕ ತನಿಖೆ ನಡೆಸಿ ಇಬ್ಬರು ಸಿಬಂದಿಯನ್ನು ಸಸ್ಪೆಂಡ್ ಮಾಡಿದ್ದಾರೆ.
ಕ್ರಿಮಿನಲ್ ಹಿನ್ನೆಲೆ, ದೇಶ ವಿರೋಧಿ ಕೃತ್ಯಗಳಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಅಸ್ಸಾಂ ಮೂಲದ ಕೆಲವು ಕಾರ್ಮಿಕ ಯುವಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್ ನೀಡಿದ್ದಾರೆಂಬ ವಿಚಾರಗಳಿದ್ದು ಇಲಾಖೆಯ ಘೋರ ವೈಫಲ್ಯದ ಬಗ್ಗೆ ಚರ್ಚೆಗೀಡಾಗಿದೆ. ಇದರ ಬಗ್ಗೆ ಪೊಲೀಸ್ ಕಮಿಷನರ್ ತನಿಖೆಯ ಹೊಣೆಯನ್ನು ಮಂಗಳೂರು ಉತ್ತರ ಎಸಿಪಿ ಶ್ರೀಕಾಂತ್ ಅವರಿಗೆ ವಹಿಸಿದ್ದಾರೆ. ತನಿಖೆಯ ಬಳಿಕ ಖಚಿತ ಮಾಹಿತಿಯನ್ನು ನೀಡುವುದಾಗಿ ಕಮಿಷನರ್ ಸುಧೀರ್ ರೆಡ್ಡಿ ತಿಳಿಸಿದ್ದಾರೆ. ಎಂಆರ್ ಪಿಎಲ್ ಸಂಸ್ಥೆಯಲ್ಲಿ ಗುತ್ತಿಗೆ ಕಾರ್ಮಿಕರಾಗಿ ಬಂದು ತಾತ್ಕಾಲಿಕ ವಿಳಾಸ ಹೊಂದಿದ್ದವರು, ಪಾಸ್ ಪೋರ್ಟ್ ಮಾಡಿಸುವ ಉದ್ದೇಶದಿಂದ ಮಧ್ಯವರ್ತಿಗಳನ್ನು ಬಳಸಿಕೊಂಡು ಬಜಪೆ ಠಾಣೆಯಿಂದ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್ ಪಡೆದಿದ್ದರು ಎನ್ನಲಾಗಿದೆ. ಆದರೆ ಈ ರೀತಿ ಸರ್ಟಿಫಿಕೇಟ್ ಪಡೆದಿರುವ 31 ಮಂದಿಯಲ್ಲಿ ಕ್ರಿಮಿನಲ್ ಹಾಗು ದೇಶ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾವರಿದ್ದಾರೆಂಬ ಮಾಹಿತಿಗಳಿದ್ದು ಕೇಂದ್ರ ತನಿಖಾ ಏಜನ್ಸಿಯೊಂದು ಇಲಾಖೆಯ ಲೋಪದ ಬಗ್ಗೆ ಮಂಗಳೂರು ಪೊಲೀಸರನ್ನು ಪ್ರಶ್ನೆ ಮಾಡಿತ್ತು.
ಇಲಾಖಾ ತನಿಖೆ ಸಂದರ್ಭದಲ್ಲಿ ಬಜ್ಪೆ ಠಾಣಾಧಿಕಾರಿಗೆ ತಿಳಿಸದೆ, ಅವರ ಪಾಸ್ವರ್ಡ್ ದುರುಪಯೋಗ ಪಡಿಸಿ ಸಿಬ್ಬಂದಿಗಳೇ ಕ್ಲಿಯರೆನ್ಸ್ ನೀಡಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ. ಇದಕ್ಕಾಗಿ ಇಬ್ಬರು ಪೊಲೀಸರು ಮಧ್ಯವರ್ತಿ ಭರತ್ ಎಕ್ಕಾರ್ ಹಾಗು ಮಮತಾ ಎಂಬವರಿಂದ ಹಣ ಪಡೆದಿದ್ದಾರೆಂಬ ಮಾಹಿತಿಯಿದೆ. ಪ್ರಕರಣಕ್ಕೆ ಸಂಬಂಧಿಸಿ ಭರತ್ ಹಾಗು ಮಮತಾ ಅವರನ್ನು ಬಜ್ಪೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆ ಬಗ್ಗೆ BNS ಕಲಂ 336(2),(3), 340(2), 316(5),318(4) ಅಡಿ ಪ್ರಕರಣ ದಾಖಲಾಗಿದೆ.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
21-09-26 08:21 pm
HK News Staffer
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm