ಬ್ರೇಕಿಂಗ್ ನ್ಯೂಸ್
20-06-26 04:21 pm HK News Staffer ಕರಾವಳಿ
ಮಂಗಳೂರು, ಜೂನ್ 20: ಮಂಗಳೂರಿನ ಹಳೆ ಬಂದರಿನಲ್ಲಿ ಲಕ್ಷದ್ವೀಪ ಸಂಪರ್ಕಕ್ಕಾಗಿ ನಿರ್ಮಾಣವಾಗಲಿರುವ ಸಮರ್ಪಿತ ಕಾರ್ಗೊ ಮತ್ತು ಕ್ರೂಸ್ ಟರ್ಮಿನಲ್ ಜೆಟ್ಟಿ ಯೋಜನೆಗೆ ಮಹತ್ವದ ಮುನ್ನಡೆ ಸಿಕ್ಕಿದೆ. ಕರ್ನಾಟಕ ರಾಜ್ಯಮಟ್ಟದ ತಜ್ಞರ ಮೌಲ್ಯಮಾಪನ ಸಮಿತಿ (SEAC) ಪರಿಸರ ಅನುಮೋದನೆ ನೀಡಿರುವುದರಿಂದ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಯೋಜನೆಗೆ ಜೀವ ಬಂದಿದೆ.
ಮೇ 30ರಂದು ಬೆಂಗಳೂರಿನಲ್ಲಿ ನಡೆದ ಎಸ್ಇಎಸಿ ಸಭೆಯಲ್ಲಿ ಯೋಜನೆಗೆ ಅನುಮೋದನೆ ದೊರೆತಿದ್ದು, ಅಗತ್ಯ ಒಪ್ಪಂದ ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ಆಗಸ್ಟ್ ತಿಂಗಳಿನಿಂದ ಕಾಮಗಾರಿ ಆರಂಭವಾಗುವ ನಿರೀಕ್ಷೆಯಿದೆ.
14 ವರ್ಷಗಳ ಕನಸಿಗೆ ಸಾಕಾರ ರೂಪ:
ಮಂಗಳೂರಿನಿಂದ ಲಕ್ಷದ್ವೀಪಕ್ಕೆ ನೇರ ಸಮುದ್ರ ಸಂಪರ್ಕ ಕಲ್ಪಿಸುವ ಯೋಜನೆಗೆ ಲಕ್ಷದ್ವೀಪ ಕೇಂದ್ರಾಡಳಿತ ಪ್ರದೇಶವು 2011ರಲ್ಲೇ ಆಸಕ್ತಿ ತೋರಿಸಿತ್ತು. ಬಳಿಕ 2015ರಲ್ಲಿ 50 ಕೋಟಿ ರೂಪಾಯಿ ಮೊತ್ತದ ಯೋಜನೆಗೆ ಒಪ್ಪಂದ ನಡೆದಿತ್ತು.
ನಂತರ ಕರ್ನಾಟಕ ಮೆರಿಟೈಮ್ ಬೋರ್ಡ್ ಯೋಜನೆಯನ್ನು ವಿಸ್ತರಿಸಿ ಸುಮಾರು 350 ಕೋಟಿ ರೂಪಾಯಿ ವೆಚ್ಚದಲ್ಲಿ ಸಮರ್ಪಿತ ಜೆಟ್ಟಿ ನಿರ್ಮಿಸುವ ಪ್ರಸ್ತಾವನೆ ಮುಂದಿಟ್ಟಿತ್ತು. 2022-23ರ ರಾಜ್ಯ ಬಜೆಟ್ನಲ್ಲಿ ಯೋಜನೆ ಘೋಷಣೆಯಾಗಿದ್ದು, ಕೇಂದ್ರ ಸರ್ಕಾರದ ಸಾಗರಮಾಲಾ ಯೋಜನೆಯಡಿ ಮೊದಲ ಹಂತವಾಗಿ 65 ಕೋಟಿ ರೂಪಾಯಿ ಮಂಜೂರಾಗಿದೆ.
ಮೂರು ವರ್ಷ ಅನುಮತಿಗಳಲ್ಲೇ ವಿಳಂಬ:
ಜೆಟ್ಟಿ ನಿರ್ಮಾಣಕ್ಕೆ 2023ರ ಮಾರ್ಚ್ 29ರಂದು ಚೆನ್ನೈ ಮೂಲದ ರಾಮಲಿಂಗಂ ಕನ್ಸ್ಟ್ರಕ್ಷನ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗೆ ಕಾಮಗಾರಿ ವಹಿಸಲಾಗಿತ್ತು. ಆದರೆ ಸಿಆರ್ಝೆಡ್ ಸೇರಿದಂತೆ ವಿವಿಧ ಅನುಮತಿಗಳನ್ನು ಪಡೆಯುವ ಪ್ರಕ್ರಿಯೆಯಲ್ಲೇ ಸುಮಾರು ಮೂರು ವರ್ಷಗಳ ಕಾಲ ಕಳೆದಿದೆ.
ಕಳೆದ ವರ್ಷ ಸಾರ್ವಜನಿಕ ಅಹವಾಲು ಸಭೆಯೂ ನಡೆದಿದ್ದು, ಇದೀಗ ಪರಿಸರ ಅನುಮೋದನೆ ದೊರಕಿರುವ ಹಿನ್ನೆಲೆಯಲ್ಲಿ ಕಾಮಗಾರಿಗೆ ಅಂತಿಮ ಹಂತದ ಸಿದ್ಧತೆಗಳು ನಡೆಯುತ್ತಿವೆ.
ಯಾವ ಸೌಲಭ್ಯಗಳು ನಿರ್ಮಾಣವಾಗಲಿವೆ?
ಜೆಟ್ಟಿ ನಿರ್ಮಾಣವಾಗುವ ಪ್ರದೇಶದಲ್ಲಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಪೆಟ್ರೋಲ್ ಬಂಕ್ ಹಾಗೂ ಬೆಂಗರೆಗೆ ಸಂಪರ್ಕ ಕಲ್ಪಿಸುವ ಫೆರ್ರಿ ಸೇವೆಯನ್ನು ಸ್ಥಳಾಂತರಿಸಬೇಕಾಗುತ್ತದೆ. ಈ ಜಾಗ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಗೆ ಸೇರಿದೆ.
ಲಕ್ಷದ್ವೀಪ ಸಂಪರ್ಕಕ್ಕೆ ಹೊಸ ದಾರಿ:
ರಾಜ್ಯ ಸರ್ಕಾರ ಜೆಟ್ಟಿ ನಿರ್ಮಿಸಿ ಲಕ್ಷದ್ವೀಪ ಆಡಳಿತಕ್ಕೆ ಹಸ್ತಾಂತರಿಸಲಿದ್ದು, ಬಳಿಕ ಅದರ ನಿರ್ವಹಣೆ ಲಕ್ಷದ್ವೀಪ ಕೇಂದ್ರಾಡಳಿತ ಪ್ರದೇಶದ ಹೊಣೆಗಾರಿಕೆಯಾಗಲಿದೆ. ಮುಂದಿನ ದಿನಗಳಲ್ಲಿ ಮಂಗಳೂರಿನಿಂದ ಲಕ್ಷದ್ವೀಪಕ್ಕೆ ನೇರ ಪ್ರಯಾಣಿಕರ ಹಡಗು ಸೇವೆ ಆರಂಭಿಸುವ ಕುರಿತು ಕರ್ನಾಟಕ ಸರ್ಕಾರ ಹಾಗೂ ಲಕ್ಷದ್ವೀಪ ಆಡಳಿತದ ನಡುವೆ ಪ್ರತ್ಯೇಕ ಒಪ್ಪಂದ ನಡೆಯುವ ಸಾಧ್ಯತೆಯಿದೆ.
ಯೋಜನೆ ನೋಟ
ಮಂಗಳೂರು-ಲಕ್ಷದ್ವೀಪ ಸಮುದ್ರ ಸಂಪರ್ಕಕ್ಕೆ ಹೊಸ ಆಯಾಮ ನೀಡಲಿರುವ ಈ ಯೋಜನೆ ಕರಾವಳಿ ಭಾಗದ ಪ್ರವಾಸೋದ್ಯಮ, ವ್ಯಾಪಾರ ಹಾಗೂ ಸಮುದ್ರ ಸಾರಿಗೆ ಕ್ಷೇತ್ರಕ್ಕೆ ಮಹತ್ವದ ಉತ್ತೇಜನ ನೀಡುವ ನಿರೀಕ್ಷೆಯಿದೆ.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
21-09-26 08:21 pm
HK News Staffer
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm