ಬ್ರೇಕಿಂಗ್ ನ್ಯೂಸ್
23-06-26 03:18 pm HK News Staffer ಕರಾವಳಿ
ಉಳ್ಳಾಲ, ಜೂ.23: ಬಸ್ಸು ಚಲಿಸುತ್ತಿದ್ದಾಗಲೇ ಚಾಲಕನಿಗೆ ಬಿಪಿ ಲೋ ಆದ ಪರಿಣಾಮ ನಿಯಂತ್ರಣ ತಪ್ಪಿದ ಬಸ್ಸು ರಸ್ತೆಯ ಡಿವೈಡರ್ ಏರಿ ನಿಂತಿದ್ದು, ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ಮಂಗಳವಾರ ಬೆಳಗ್ಗೆ ದೇರಳಕಟ್ಟೆಯ ಯೆನೆಪೋಯ ಆಸ್ಪತ್ರೆಯ ಮುಂಭಾಗ ನಡೆದಿದೆ.
ಮುಡಿಪು -ಸ್ಟೇಟ್ ಬ್ಯಾಂಕಿನ ನಡುವೆ ಸಂಚರಿಸುವ ಗೋಪಾಲಕೃಷ್ಣ ಹೆಸರಿನ ಖಾಸಗಿ ಸರ್ವಿಸ್ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯದ ಡಿವೈಡರ್ ಏರಿದೆ. ಬಸ್ಸು ಮುಡಿಪುವಿನಿಂದ ದೇರಳಕಟ್ಟೆ ತಲುಪಿದಾಗ ಚಾಲಕ ಜನಾರ್ಧನ್ ಅವರಿಗೆ ಬಿಪಿ ಲೋ ಆದ ಪರಿಣಾಮ ಅವರು ಸ್ಟೇರಿಂಗ್ ಮೇಲೆಯೇ ಕುಸಿದಿದ್ದರೆನ್ನಲಾಗಿದೆ. ಈ ವೇಳೆ ನಿಯಂತ್ರಣ ತಪ್ಪಿದ ಬಸ್ಸು ರಸ್ತೆ ಮಧ್ಯದ ಡಿವೈಡರ್ ಏರಿ ನಿಂತಿದೆ.



ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಅನಾಹುತ ಸಂಭವಿಸಿಲ್ಲ. ಯೆನೆಪೋಯ ಆಸ್ಪತ್ರೆ ಮುಂಭಾಗದ ರಸ್ತೆಯಲ್ಲಿ ವಾಹನ ಚಾಲಕರು ದಿನನಿತ್ಯಲೂ ವಿರುದ್ಧ ಧಿಕ್ಕಿನಲ್ಲಿ ಚಲಿಸಿ ಯೂ-ಟರ್ನ್ ಹೊಡೆಯುತ್ತಿರುತ್ತಾರೆ. ಆದರೆ ಇಂದು ಘಟನೆ ನಡೆದ ಸಂದರ್ಭದಲ್ಲಿ ಬಸ್ಸಿಗೆ ಯಾವುದೇ ವಾಹನಗಳು ಅಡ್ಡ ಸಿಗದ ಕಾರಣ ಅನಾಹುತ ತಪ್ಪಿದಂತಾಗಿದೆ.
ಬಿಪಿ ಲೋ ಆಗಿ ಗಂಭೀರ ಸ್ಥಿತಿಯಲ್ಲಿದ್ದ ಚಾಲಕ ಜನಾರ್ಧನ ಅವರನ್ನು ಅಲ್ಲೇ ಇದ್ದ ಯೆನೆಪೋಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆಯ ಬಳಿಕ ಅವರು ಚೇತರಿಸಿಕೊಂಡಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm