ಬ್ರೇಕಿಂಗ್ ನ್ಯೂಸ್
17-07-26 07:58 pm HK News Staffer ಕರಾವಳಿ
ಮಂಗಳೂರು, ಜುಲೈ 17: ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ 19 ಬಾಂಗ್ಲಾ ಪ್ರಜೆಗಳ ಬಂಧನವಾಗಿದ್ದು ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ನೇತೃತ್ವದ ಪೊಲೀಸ್ ಇಲಾಖೆಗೆ ಸಮಸ್ತ ಸಾರ್ವಜನಿಕರ ಪರವಾಗಿ ಅಭಿನಂದನೆಗಳು. ಆದರೆ ಕಾಂಗ್ರೆಸ್ ಸರ್ಕಾರ ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ(ಪಿಆರ್ ಸಿ) ಜಾರಿಗೆ ತರುತ್ತಿರುವುದು ಬಾಂಗ್ಲಾ ನಿವಾಸಿಗಳಿಗೆ ವರದಾನವಾಗಲಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ.
ಮಂಗಳೂರಿನಲ್ಲಿ ಬಾಂಗ್ಲಾದೇಶಿ ನಿವಾಸಿಗಳ ಪತ್ತೆ ಕಾರ್ಯ ಸಂಪೂರ್ಣವಾಗಿ ಪೊಲೀಸ್ ಇಲಾಖೆಯ ಕಾರ್ಯಾಚರಣೆಯಾಗಿದ್ದು, ಎಳ್ಳಷ್ಟೂ ರಾಜ್ಯ ಕಾಂಗ್ರೆಸ್ ಸರ್ಕಾರದ ಪಾತ್ರವಿಲ್ಲ ಎಂದು ಹೇಳಿರುವ ಕಾಮತ್, ಆದರೆ ರಾಜ್ಯದಲ್ಲಿ ಎಸ್ಐಆರ್ ಪ್ರಕ್ರಿಯೆ ನಡೆಯುತ್ತಿರುವಾಗ ಕಾಂಗ್ರೆಸ್ ಸರ್ಕಾರ ಶಾಶ್ವತ ನಿವಾಸಿ ಪ್ರಮಾಣಪತ್ರ (ಪಿಆರ್ಸಿ) ಜಾರಿಗೆ ತರುತ್ತಿರುವುದು ಅಕ್ರಮ ವಲಸಿಗರಿಗೆ ವರದಾನವಾಗಲಿದೆ. ಆಮೂಲಕ ಅಧಿಕೃತವಾಗಿ ಮತದಾರರ ಪಟ್ಟಿಗೆ ಸೇರಿಕೊಳ್ಳುವ ಸಾಧ್ಯತೆ ದಟ್ಟವಾಗಿದೆ. ಕೇವಲ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ದೇಶದ ಭದ್ರತೆಯನ್ನೂ ಅಡವಿಡುವ ಮಟ್ಟಕ್ಕೆ ಕಾಂಗ್ರೆಸ್ ತಲುಪಿರುವುದಕ್ಕೆ ಇದು ಸಾಕ್ಷಿ ಎಂದು ಹೇಳಿದ್ದಾರೆ.
ಭವಿಷ್ಯದಲ್ಲಿ ಅವರಿಂದಾಗಿ ಏನೇ ಅನಾಹುತ ನಡೆದರೂ ಅದಕ್ಕೆ ಕಾಂಗ್ರೆಸ್ ಸರಕಾರವೇ ನೇರ ಹೊಣೆ ಹೊರಬೇಕಾಗುತ್ತದೆ. ಕೂಡಲೇ ಎಷ್ಟು ಅಕ್ರಮ ವಲಸಿಗರು ಪಿ.ಆರ್.ಸಿ ಪಡೆದುಕೊಂಡಿದ್ದಾರೆ ಎಂಬುದರ ಬಗ್ಗೆ ತನಿಖೆಯಾಗಲಿ. ಗೃಹ ಸಚಿವರಂತೂ ಆರ್.ಎಸ್.ಎಸ್ ನಂತಹ ದೇಶಭಕ್ತ ಸಂಘಟನೆ ನೋಂದಣಿ ಮಾಡಿಕೊಂಡಿಲ್ಲ, ಅದರ ಪಥಸಂಚಲನಕ್ಕೆ ಅವಕಾಶ ಕೊಡುವುದಿಲ್ಲ ಎಂಬ ಮನಸ್ಥಿತಿಯಲ್ಲೇ ಮುಳುಗಿರುವುದು ನಾಡಿನ ದೌರ್ಭಾಗ್ಯ ಎಂದರು.
ಕಾಂಗ್ರೆಸ್ ಸರ್ಕಾರಕ್ಕೆ ಇದರ ಗಂಭೀರತೆಯ ಅರಿವಿದ್ದರೆ ಈ ಕೂಡಲೇ ರಾಜ್ಯಾದ್ಯಂತ ಅಕ್ರಮ ಬಾಂಗ್ಲಾ ಪ್ರಜೆಗಳನ್ನು ಪತ್ತೆ ಹಚ್ಚಿ ಹೊರದಬ್ಬುವ ತಾಕತ್ತು ಪ್ರದರ್ಶಿಸಲಿ. ಮಂಗಳೂರಿನಲ್ಲಿ ಅಕ್ರಮ ವಲಸಿಗರು ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ನೆಲೆಸಿರುವ ಸಾಧ್ಯತೆಯಿದ್ದು, ಇದು ನಮ್ಮ ಜಿಲ್ಲೆಯ ಭದ್ರತೆಗೆ ಸವಾಲಾಗಿದೆ. ಹಾಗಾಗಿ ನಗರದೆಲ್ಲೆಡೆ ಇರುವ ಬಿಲ್ಡರ್ಗಳು, ಕಟ್ಟಡ ನಿರ್ಮಾಣ ಗುತ್ತಿಗೆದಾರರು, ಹೋಟೆಲ್ ಗಳು, ಸಲೂನ್, ಶಾಪಿಂಗ್ ಮಾಲ್ ಸಹಿತ ಸಾರ್ವಜನಿಕರು ಎಚ್ಚರಿಕೆಯಿಂದ ಇದ್ದು, ಉದ್ಯೋಗ ನೀಡುವ ವೇಳೆ ಹೆಚ್ಚಿನ ದಾಖಲೆಗಳನ್ನು ಪಡೆದುಕೊಳ್ಳುವಂತೆ ಹಾಗೂ ಅನುಮಾನಾಸ್ಪದ ಸಂದರ್ಭಗಳಲ್ಲಿ ಪೊಲೀಸ್ ಇಲಾಖೆಗೆ ದೂರು ನೀಡಬೇಕು ಎಂದು ಶಾಸಕರು ಮನವಿ ಮಾಡಿದರು.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm