ಬ್ರೇಕಿಂಗ್ ನ್ಯೂಸ್
20-07-26 03:14 pm HK News Staffer ಕರಾವಳಿ
ಬಂಟ್ವಾಳ, ಜುಲೈ 20: ಅಪಘಾತದ ಬಳಿಕ ಕಾರಿನೊಳಗೆ ಸಿಲುಕಿದ್ದ ಮಗು, ಮಹಿಳೆ ಹಾಗೂ ಚಾಲಕನನ್ನು ಕ್ಷಿಪ್ರ ಕಾರ್ಯಾಚರಣೆ ಮೂಲಕ ರಕ್ಷಿಸಿ ವಿಟ್ಲ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ರಾಮಕೃಷ್ಣ ಹಾಗೂ ಸಿಬ್ಬಂದಿ ಮಾನವೀಯತೆ ಮತ್ತು ಸಮಯಪ್ರಜ್ಞೆಗೆ ಮಾದರಿಯಾಗಿದ್ದಾರೆ. ಈ ರಕ್ಷಣಾ ಕಾರ್ಯಾಚರಣೆಯ ಸಿಸಿಟಿವಿ ದೃಶ್ಯ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿದ ಕಾರು
ಭಾನುವಾರ ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರು ಪೆಟ್ರೋಲ್ ಬಂಕ್ ಸಮೀಪದ ಹೋಟೆಲ್ ಎದುರು ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಉರುಳಿದೆ. ಅಪಘಾತದ ತೀವ್ರತೆಗೆ ಕಾರಿನೊಳಗೆ ಮಗು, ಮಹಿಳೆ ಹಾಗೂ ಚಾಲಕ ಸಿಲುಕಿಕೊಂಡಿದ್ದು, ತಕ್ಷಣ ನೆರವು ಸಿಗದಿದ್ದರೆ ದೊಡ್ಡ ಅನಾಹುತ ಸಂಭವಿಸುವ ಸಾಧ್ಯತೆ ಎದುರಾಗಿತ್ತು.
ಪ್ರಕರಣದ ತನಿಖೆಗಾಗಿ ಕರ್ತವ್ಯದಲ್ಲಿದ್ದ ವಿಟ್ಲ ಠಾಣೆಯ ಎಸ್ಐ ರಾಮಕೃಷ್ಣ ಹಾಗೂ ಸಿಬ್ಬಂದಿ ಕರುಣಾಕರ ಅವರಿಗೆ ಅಪಘಾತದ ಭಾರೀ ಶಬ್ದ ಕೇಳಿಬಂದಿದೆ. ಯಾವುದೇ ವಿಳಂಬ ಮಾಡದೇ ಅವರು ಸ್ಥಳಕ್ಕೆ ಧಾವಿಸಿ, ಕಾರಿನೊಳಗೆ ಸಿಲುಕಿದ್ದವರನ್ನು ಸುರಕ್ಷಿತವಾಗಿ ಹೊರತೆಗೆದಿದ್ದಾರೆ.
ಅಳುತ್ತಿದ್ದ ಮಗುವನ್ನು ಕೈಯಲ್ಲಿ ಎತ್ತಿಕೊಂಡ ಎಸ್ಐ;
ರಕ್ಷಣಾ ಕಾರ್ಯಾಚರಣೆಯ ವೇಳೆ ಎಸ್ಐ ರಾಮಕೃಷ್ಣ ಅಳುತ್ತಿದ್ದ ಪುಟ್ಟ ಮಗುವನ್ನು ತಮ್ಮ ಕೈಯಲ್ಲಿ ಎತ್ತಿಕೊಂಡು ಸುರಕ್ಷಿತ ಸ್ಥಳಕ್ಕೆ ಕರೆದೊಯ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಕರ್ತವ್ಯನಿಷ್ಠೆ ಮತ್ತು ಮಾನವೀಯತೆ ಪ್ರದರ್ಶಿಸಿದ ಪೊಲೀಸ್ ಅಧಿಕಾರಿಗೆ ಸಾರ್ವಜನಿಕರು ಅಭಿನಂದನೆ ಸಲ್ಲಿಸುತ್ತಿದ್ದಾರೆ.
ಪ್ರಾಣಾಪಾಯದಿಂದ ಪಾರಾದ ಮೂವರು;
ಅಪಘಾತದಲ್ಲಿ ಕಾರಿನಲ್ಲಿದ್ದ ಮಗು, ಮಹಿಳೆ ಹಾಗೂ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದರಿಂದ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತ ತಪ್ಪಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm