ಬ್ರೇಕಿಂಗ್ ನ್ಯೂಸ್
01-08-26 10:25 pm HK News Staffer ಕರಾವಳಿ
ಮಂಗಳೂರು, ಆ.1: ಕರಾವಳಿ ಭಾಗದಲ್ಲಿ ಕೊನೆಗೂ ಮಳೆ ಬಿರುಸಾಗಿದ್ದು ಮುಂಗಾರಿನ ವೈಭವ ಕಾಣಿಸಿಕೊಂಡಿದೆ. ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಭಾಗದಲ್ಲಿ ಶನಿವಾರ ಇಡೀ ದಿನ ಮಳೆಯಾಗಿದ್ದು ನದಿ ಕೊಳ್ಳಗಳು ತುಂಬಿ ಹರಿಯತೊಡಗಿವೆ. ಬೆಳ್ತಂಗಡಿ, ಸುಳ್ಯ ಭಾಗದಲ್ಲಿ ಈ ಮಳೆಗಾಲದಲ್ಲಿ ಇದೇ ಮೊದಲ ಬಾರಿಗೆ ನದಿಗಳು ಭೋರ್ಗರೆದು ಹರಿದಿದೆ.
ಇದೇ ವೇಳೆ, ಹವಾಮಾನ ಇಲಾಖೆಯಿಂದ ಇನ್ನೊಂದು ವಾರ ಕಾಲ ಇದೇ ರೀತಿ ನಿರಂತರ ಮಳೆಯಾಗುವ ಸಾಧ್ಯತೆ ಬಗ್ಗೆ ಮುನ್ಸೂಚನೆ ನೀಡಲಾಗಿದೆ. ಸಾಮಾನ್ಯವಾಗಿ ಜುಲೈ ತಿಂಗಳಲ್ಲಿ ಜೋರಾದ ಮಳೆ ಬರುವುದು ವಾಡಿಕೆ. ಆದರೆ ಈ ಬಾರಿ ಜೂನ್, ಜುಲೈ ತಿಂಗಳಲ್ಲಿ ನಿರೀಕ್ಷಿತ ಮಳೆ ಆಗಿಲ್ಲ. ಹೆಚ್ಚಿನ ದಿನಗಳಲ್ಲಿ ಬಿಸಿಲಿದ್ದುದರಿಂದ ಭತ್ತ ಕೃಷಿಕರಿಗೆ ನೀರಿಲ್ಲದೆ ತೊಂದರೆಯಾಗಿತ್ತು. ಈಗ ಅಗಸ್ಟ್ ಕಾಲಿಡುತ್ತಿದ್ದಂತೆ ಮರೆಯಾಗಿದ್ದ ಮಳೆರಾಯ ಧುತ್ತನೆ ಬಂದಿದ್ದಾನೆ. ಕೇರಳ, ಕರ್ನಾಟಕದ ಕರಾವಳಿಯಲ್ಲಿ ಬಿರುಸಿನ ಮಳೆಯಾಗಿದೆ.
ನಿರಂತರ ಮಳೆಯಿಂದಾಗಿ ನೇತ್ರಾವತಿ, ಕುಮಾರಧಾರಾ ನದಿಗಳಲ್ಲಿ ಹರಿವು ಹೆಚ್ಚಿದ್ದು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸ್ನಾನಘಟ್ಟ ಮುಳುಗಡೆಯಾಗಿದೆ. ಧರ್ಮಸ್ಥಳ ಬಳಿಯ ಸ್ನಾನಘಟ್ಟ ಮುಳುಗಡೆಯಾಗಿದ್ದು ಭಕ್ತರ ಸ್ನಾನಕ್ಕಾಗಿ ಭದ್ರತೆ ಕಲ್ಪಿಸಲಾಗಿದೆ. ಇದಲ್ಲದೆ, ಆಸುಪಾಸಿನಲ್ಲಿ ಹೊಳೆಗಳು ಕೂಡ ತುಂಬಿ ಹರಿದಿದ್ದು ಮುಂಜಾಗ್ರತಾ ಕ್ರಮಕ್ಕಾಗಿ ಎನ್ ಡಿಆರ್ ಎಫ್ ತಂಡವನ್ನು ಬೆಳ್ತಂಗಡಿಗೆ ಕರೆಸಲಾಗಿದೆ. 30 ಮಂದಿಯ ತಂಡ ಬೆಳ್ತಂಗಡಿ ತಾಲೂಕಿನ ಲಾಯಿಲದಲ್ಲಿ ಬೀಡು ಬಿಟ್ಟಿದೆ.









ಮಳೆಯಿಂದಾಗಿ ಧರ್ಮಸ್ಥಳ ಬಳಿಯ ಮುಂಡಾಜೆಯಲ್ಲಿ ರಸ್ತೆ ಮೇಲೆ ಗುಡ್ಡ ಕುಸಿದು ಸಂಪರ್ಕ ಕಡಿತಗೊಂಡಿದೆ. ಧರ್ಮಸ್ಥಳ - ಮಣ್ಣಸಂಕ ರಸ್ತೆ ನೇತ್ರಾವತಿ ನೆರೆಯಿಂದಾಗಿ ಜಲಾವೃತಗೊಂಡಿದೆ. ಸವಣಾಲು ಎಂಬಲ್ಲಿ ಫಲ್ಗುಣಿ ನೆರೆಯಿಂದಾಗಿ ಸೇತುವೆ ಮೇಲೆ ನೀರು ಹರಿದಿದೆ. ನೇತ್ರಾವತಿ ನದಿ ಈ ಮಳೆಗಾಲದಲ್ಲಿ ಮೊದಲ ಬಾರಿಗೆ ತುಂಬಿ ಹರಿದಿದ್ದು ವಿಶೇಷ. ಹಿಂದೆಲ್ಲ ನೇತ್ರಾವತಿ ನದಿಯಲ್ಲಿ ಹಲವು ಬಾರಿ ನೆರೆ ಬಂದು ಬಂಟ್ವಾಳದಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಸ್ಥಿತಿಯಾಗುತ್ತಿತ್ತು.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
21-09-26 08:21 pm
HK News Staffer
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm