ಬ್ರೇಕಿಂಗ್ ನ್ಯೂಸ್
02-08-26 11:42 am HK News Desk ಕರಾವಳಿ
ಮಂಗಳೂರು, ಆ.2: ಘಟ್ಟ ಪ್ರದೇಶ ಮತ್ತು ಕರಾವಳಿ ಭಾಗದಲ್ಲಿ ಭಾರಿ ಮಳೆಯಿಂದಾಗಿ ಸಕಲೇಶಪುರ ಬಳಿಯ ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕುಸಿತ ಸಂಭವಿಸಿದ್ದು ಮಂಗಳೂರು- ಬೆಂಗಳೂರು ಸಂಚರಿಸುವ ರೈಲುಗಳ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಹಾಗಾಗಿ ಮಂಗಳೂರು- ಬೆಂಗಳೂರು ಸಂಪರ್ಕಿಸುವ ಏಳು ರೈಲುಗಳನ್ನು ಆಂಶಿಕವಾಗಿ ರದ್ದು ಪಡಿಸಲಾಗಿದೆ.
ಎಡಕುಮೇರಿ- ಸಿರಿಬಾಗಿಲು ನಡುವಿನ ಏರು ಹಾದಿಯಲ್ಲಿ ರೈಲು ಹಳಿಯ ಮೇಲೆ ನಿನ್ನೆ ರಾತ್ರಿ ಗುಡ್ಡ ಕುಸಿದು ಬಿದ್ದಿದ್ದು ಈ ಹಾದಿಯಲ್ಲಿ ಪೂರ್ತಿಯಾಗಿ ರೈಲುಗಳ ಸಂಚಾರವನ್ನು ನಿಲುಗಡೆ ಮಾಡಲಾಗಿದೆ. ಇದರ ಕಾರಣ ಬೆಂಗಳೂರಿನಿಂದ ಮುರುಡೇಶ್ವರ ಸಂಚರಿಸುತ್ತಿದ್ದ ರೈಲನ್ನು ಹಾಸನದಲ್ಲಿ ನಿಲ್ಲಿಸಲಾಗಿದ್ದು ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ. ಅದೇ ರೀತಿ ನಿನ್ನೆ ರಾತ್ರಿ ಬೆಂಗಳೂರಿನಿಂದ ಕೇರಳದ ಕೋಜಿಕೋಡ್ ಹೊರಟಿದ್ದ ರೈಲನ್ನು ಹಾಸನದಲ್ಲಿ ಸ್ಥಗಿತಗೊಳಿಸಲಾಗಿದೆ.

ಇದೇ ಹಾದಿಯಲ್ಲಿ ವಿಜಯಪುರದಿಂದ ಮಂಗಳೂರಿಗೆ ಬರುತ್ತಿದ್ದ ರೈಲನ್ನು ಹಾಸನದಲ್ಲಿ ನಿಲ್ಲಿಸಲಾಗಿದ್ದು ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ. ಆಗಸ್ಟ್ ಒಂದರಂದು ಬೆಂಗಳೂರಿನಿಂದ ಕಾರವಾರ ಹೊರಟಿದ್ದ ಎಕ್ಸ್ಪ್ರೆಸ್ ರೈಲನ್ನು ಸಕಲೇಶಪುರ ಬಳಿ ನಿಲ್ಲಿಸಲಾಗಿದ್ದು ಮುಂದಿನ ಸಂಚಾರವನ್ನು ರದ್ದುಪಡಿಸಲಾಗಿದೆ. ಇದೇ ವೇಳೆ ಮುರುಡೇಶ್ವರದಿಂದ ಬೆಂಗಳೂರಿಗೆ ಹೊರಟಿದ್ದ ರೈಲನ್ನು ಸುಬ್ರಹ್ಮಣ್ಯ ನಿಲ್ದಾಣದ ಬಳಿ ಸ್ಥಗಿತಗೊಳಿಸಿ ಮುಂದಿನ ಸಂಚಾರವನ್ನು ರದ್ದುಪಡಿಸಲಾಗಿದೆ. ಕೇರಳದ ಕೋಜಿಕೋಡ್ ನಿಂದ ಬೆಂಗಳೂರಿಗೆ ಹೊರಟಿದ್ದ ರೈಲನ್ನು ಪುತ್ತೂರು ಬಳಿಯ ಕಬಕದಲ್ಲಿ ನಿಲ್ಲಿಸಲಾಗಿದೆ. ಇದೇ ರೀತಿ ಮಂಗಳೂರು ಸೆಂಟ್ರಲ್ ನಿಂದ ವಿಜಯಪುರ ಹೊರಟಿದ್ದ ಎಕ್ಸ್ಪ್ರೆಸ್ ರೈಲು ಸುಬ್ರಮಣ್ಯ ಬಳಿ ನಿಲುಗಡೆಯಾಗಿದ್ದು ಮುಂದಿನ ಹಾದಿಯನ್ನು ರದ್ದುಪಡಿಸಲಾಗಿದೆ. ಇದರಿಂದಾಗಿ ಸಾವಿರಾರು ಪ್ರಯಾಣಿಕರ ಸಂಚಾರಕ್ಕೆ ತೊಂದರೆಯಾಗಿದೆ.
ಭೂಕುಸಿತ ಆಗಿರುವ ಪ್ರದೇಶದಲ್ಲಿ ಹಿಟಾಚಿಗಳನ್ನು ಬಳಸಿ ಮಣ್ಣು ತೆರವು ಕಾರ್ಯ ಮಾಡಲಾಗುತ್ತಿದ್ದು ಮತ್ತಷ್ಟು ಗುಡ್ಡ ಕುಸಿತ ಆಗುತ್ತಿರುವುದರಿಂದ ಕಾಮಗಾರಿಗೆ ತೊಂದರೆ ಆಗಿದೆ. ನಿನ್ನೆ ರಾತ್ರಿ ಇಡೀ ಮಣ್ಣು ತೆರವು ಕಾರ್ಯ ನಡೆಸಿದರೂ ರೈಲು ಸಂಚಾರಕ್ಕೆ ಮುಕ್ತಗೊಳಿಸಲು ಸಾಧ್ಯವಾಗಿಲ್ಲ. ಹೀಗಾಗಿ ಆಗಸ್ಟ್ 2ರಂದು ನಿಗದಿಯಾಗಿದ್ದ ಮಂಗಳೂರು ಜಂಕ್ಷನ್- ಯಶವಂತಪುರ ಎಕ್ಸ್ಪ್ರೆಸ್ ರೈಲು ಮತ್ತು ಯಶವಂತಪುರದಿಂದ ಮಂಗಳೂರು ಜಂಕ್ಷನ್ ಗೆ ಬರುವ ರೈಲುಗಳ ಸಂಚಾರವನ್ನು ರದ್ದುಪಡಿಸಲಾಗಿದೆ. ಸ್ಥಳದಲ್ಲಿ ಮಣ್ಣು ತೆರವು ಕಾರ್ಯ ಮಾಡಲಾಗುತ್ತಿದ್ದು ಶೀಘ್ರದಲ್ಲೇ ರೈಲು ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಸೌತ್ ವೆಸ್ಟರ್ನ್ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿ ಆರ್ ಓ ಮಂಜುನಾಥ್ ಕನಮಡಿ ತಿಳಿಸಿದ್ದಾರೆ.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
21-09-26 08:21 pm
HK News Staffer
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm