ಬ್ರೇಕಿಂಗ್ ನ್ಯೂಸ್
11-08-26 03:08 pm HK News Staffer ಕರಾವಳಿ
ವಿಟ್ಲ, ಆಗಸ್ಟ್ 11: ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಶಾಲೆಯ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ವಿಟ್ಲಪಡ್ನೂರು ಗ್ರಾಮದ ಪೂರ್ಲಪ್ಪಾಡಿ ಸಮೀಪದ ಕುಂಟುಕುಡೇಲು ಎಂಬಲ್ಲಿ ನಡೆದಿದೆ. ಬಸ್ನಲ್ಲಿ 15ಕ್ಕೂ ಅಧಿಕ ವಿದ್ಯಾರ್ಥಿಗಳಿದ್ದರೂ, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸದೆ ಮಕ್ಕಳು ಸುರಕ್ಷಿತವಾಗಿ ಪಾರಾಗಿದ್ದಾರೆ.
ವಿದ್ಯಾರ್ಥಿಗಳನ್ನು ಕರೆದುಕೊಂಡು ಬಸ್ ಶಾಲೆಯತ್ತ ತೆರಳುತ್ತಿತ್ತು. ಕುಂಟುಕುಡೇಲು ಇಳಿಜಾರಿನ ರಸ್ತೆಯಲ್ಲಿ ಬಸ್ ಸಾಗುತ್ತಿದ್ದ ವೇಳೆ ದಿಢೀರ್ ತಾಂತ್ರಿಕ ದೋಷ ಕಾಣಿಸಿಕೊಂಡಿದೆ ಎನ್ನಲಾಗಿದೆ. ಇದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್ ನೇರವಾಗಿ ರಸ್ತೆ ಬಿಟ್ಟು ಕೆಳಭಾಗಕ್ಕೆ ಚಲಿಸಿ, ರಸ್ತೆಯ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬ ಸಂಪೂರ್ಣವಾಗಿ ತುಂಡಾಗಿ ಬಸ್ನ ಮೇಲೆಯೇ ಬಿದ್ದಿದೆ. ಘಟನೆಯಿಂದ ಬಸ್ಸಿನ ಮುಂಭಾಗ ಜಖಂಗೊಂಡಿದೆ. ಆದರೆ, ಬಸ್ನಲ್ಲಿದ್ದ 15ಕ್ಕೂ ಹೆಚ್ಚು ಶಾಲಾ ಮಕ್ಕಳು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ.
ವಿದ್ಯುತ್ ಕಂಬ ಬಸ್ ಮೇಲೆ ಬಿದ್ದಿದ್ದರಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಆದರೆ, ಯಾವುದೇ ಪ್ರಾಣಹಾನಿ ಸಂಭವಿಸದೆ ಭಾರಿ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದಂತಾಗಿದೆ.
ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು ಸ್ಥಳಕ್ಕೆ ಧಾವಿಸಿ, ಬಸ್ಸಿನಲ್ಲಿದ್ದ ಮಕ್ಕಳನ್ನು ಸುರಕ್ಷಿತವಾಗಿ ಹೊರಗೆ ಕರೆತಂದಿದ್ದಾರೆ. ಬಳಿಕ ಮಕ್ಕಳನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ. ಇಳಿಜಾರಿನ ರಸ್ತೆಯಲ್ಲಿ ಬಸ್ಗೆ ತಾಂತ್ರಿಕ ದೋಷ ಉಂಟಾದ ಪರಿಣಾಮವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
11-08-26 04:49 pm
HK News Staffer
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
11-08-26 03:08 pm
HK News Staffer
Mangalore Suicide: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ...
10-08-26 11:00 pm
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
11-08-26 01:04 pm
HK News Staffer
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am