ಬ್ರೇಕಿಂಗ್ ನ್ಯೂಸ್
29-08-26 04:05 pm HK News Staffer ಕರಾವಳಿ
ತುಮಕೂರು, ಆ.29 : 'ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿನಿಂತುಕೊಂಡರೂ ಅಷ್ಟೇ. ಮಂಗಳೂರು ರೈಲ್ವೆ ವಿಭಾಗಕ್ಕೆ ಸಂಬಂಧಿಸಿದಂತೆ ತಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ’ ಎಂದು ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
ಕೇರಳದಲ್ಲಿ ಎಲ್ಲ ವಿರೋಧ ಪಕ್ಷದವರು ಸಹ ನನ್ನ ವಿರುದ್ಧ ಮಾತನಾಡುತ್ತಿದ್ದಾರೆ. ಮಾತನಾಡುವವರು ಮಾತನಾಡಲಿ, ನಾನು ಕೆಲಸ ಮಾಡುವವ ಎಂದು ಎಲ್ಲರಿಗೂ ಗೊತ್ತಿದೆ. ಯುಡಿಎಫ್, ಸಿಪಿಐ, ಸಿಪಿಎಂ ಎಲ್ಲಾ ಪಕ್ಷದವರು ನನ್ನ ವಿರುದ್ಧ ಬಟ್ಟೆ ಬಿಚ್ಚಿ ನಿಂತ್ಕೊಂಡು ನಾನು ರಾಜೀನಾಮೆ ಕೊಡಬೇಕು ಅನ್ನುತ್ತಿದ್ದಾರೆ. ನಾನೇನು ತಪ್ಪು ಮಾಡಿಲ್ಲ. ಭಾರತ ಸರ್ಕಾರದ ಮಂತ್ರಿಯಾಗಿ ಈ ರೀತಿಯಾಗಿರುವ ಅಡಚಡಣೆಗಳನ್ನು ಸರಿಪಡಿಸುವ ಕೆಲಸ ಮಾಡಿದ್ದೇನೆ ಎಂದರು.
ಕೇರಳಕ್ಕೆ ಸಂಬಂಧಪಟ್ಟಂತೆ ಯಾವುದೇ ಅಪಚಾರ ಮಾಡಿಲ್ಲ ಎಂದ ಸೋಮಣ್ಣ, ಸುಮಾರು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಸಮಸ್ಯೆಗೆ ಪರಿಹಾರ ಕಂಡುಕೊಂಡಿದ್ದೇವೆ. ಮೈಸೂರು ವಿಭಾಗಕ್ಕೆ ಸೇರಿಸಿ ಇತಿಶ್ರೀ ಹಾಡಿದ್ದೇನೆ. ರೈಲ್ವೆ ಇಲಾಖೆಯಲ್ಲಿ ಸ್ಥಳೀಯರಿಗೆ ಅವಕಾಶ ಸಿಗುತ್ತದೆ ಎಂದ ಅವರು, ಕೇರಳದಲ್ಲಿ 20 ಮೀನುಗಾರಿಕಾ ಬಂದರು ಇವೆ. ಅದರಲ್ಲಿ 17 ಅಧಿಕೃತವಾಗಿವೆ. ಕೇರಳ ಬಜೆಟ್ ಇದಕ್ಕಾಗಿ ಹೆಚ್ಚಿನ ಆದ್ಯತೆ ಕೊಟ್ಟಿದೆ. ನಿಮ್ಮ ರಾಜ್ಯದ್ದು ನೀವು ಏನೂ ಬೇಕಾದರೂ ಮಾಡಿ. ಕರ್ನಾಟಕದಲ್ಲಿ ಇರೋದು ಒಂದೇ ಬಂದರು. ಅದು ಮಂಗಳೂರು ಬಂದರು. ಅದಕ್ಕೆ ಸರಕು -ಆಮದು ರಫ್ತುಗೆ ಅನುಕೂಲ ಮಾಡಿದ್ದೇವೆ ಎಂದರು.
ಮಂಗಳೂರು ಎಜುಕೇಷನ್ ಹಬ್ ಇದೆ. ಆಡಳಿತ ವ್ಯವಸ್ಥೆ 350 ಕಿ.ಮೀ. ದೂರದಲ್ಲಿತ್ತು. ಅದನ್ನು ಕರ್ನಾಟಕದವರೇ ಉಸ್ತುವಾರಿ ನೋಡಲು ಭಾರತ ಸರ್ಕಾರ ಅನುಮತಿ ಕೊಟ್ಟಿದೆ. ಪಾಲಕ್ಕಾಡ್ ವಿಭಾಗದ 85ರಷ್ಟು ಭಾಗ ಕರ್ನಾಟಕದಲ್ಲಿ ಇತ್ತು. ಹಿಂದೆ ಇದೇ ರೀತಿ ಸೇಲಂ ಇತ್ತು. ಆನಂತರ ಬದಲಾವಣೆ ಆಯ್ತು ಎಂದರು.
25 ವರ್ಷಗಳಿಂದ ಇದರ ಹೋರಾಟ ಇತ್ತು. ಹಿಂದೆ ಹಲವು ಮಂತ್ರಿಗಳು ಪ್ರಯತ್ನ ಮಾಡಿದ್ದಾರೆ. ನಾನು ಮಂತ್ರಿ ಆಗಿರುವುದರಿಂದ ಅದರ ಬಗ್ಗೆ ಸಂಪೂರ್ಣ ಮಾಹಿತಿ ಇತ್ತು. ಅಲ್ಲಿನ ಲೋಕಸಭಾ ಸದಸ್ಯರಾದ ಕ್ಯಾ.ಬ್ರಿಜೇಶ್ ಚೌಟಾ ಅವರು ನನ್ನನ್ನು ಭೇಟಿ ಮಾಡಿ ಇದಕ್ಕೆ ಒಂದು ರೂಪ ಕೊಡಬೇಕು ಅಂತಾ ಕೇಳಿಕೊಂಡಿದ್ದರು. ಈ ಹಿಂದೆ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಕೂಡ ಪ್ರಯತ್ನ ಮಾಡಿದ್ದರು. ಮೂರು ಜನ ಜನರಲ್ ಮ್ಯಾನೇಜರ್ಗಳನ್ನು ಸ್ಥಳಕ್ಕೆ ಕರೆದುಕೊಂಡು ಹೋದ ಏಕೈಕ ಮಂತ್ರಿ ಇದ್ದರೆ ಅದು ನಾನು ಎಂದ ಸೋಮಣ್ಣ, ಈ ಬಗ್ಗೆ ಸಾಧಕ ಭಾದಕಗಳ ಬಗ್ಗೆ ಚರ್ಚೆ ಮಾಡಿದ್ದೇನೆ. ಅಧಿಕಾರಿಗಳು ಕೆಲಸ ಮಾಡಿದ್ದಾರೆ. ಇದರಲ್ಲಿ ಯಾವುದೇ ಫೇವರಿಸಂ ಇಲ್ಲ ಎಂದರು.
ಮಂಗಳೂರು ವಿಭಾಗ ಮಾಡಬೇಕು ಅಂತ ಆಸೆ ಇತ್ತು. ಪಾಲಕ್ಕಾಡ್ ಹಾಗೂ ಮಂಗಳೂರಿನ ನಡುವೆ 350 ಕಿ.ಲೋ ಅಂತರವಿತ್ತು. ಮೈಸೂರು ಹಾಗೂ ಪಾಲಕ್ಕಾಡ್ಗೆ 80-100 ಕಿ.ಮೀ. ಆಗುತ್ತೆ. ಹಾಗಾಗಿ ತಾಂತ್ರಿಕವಾಗಿ ಅಧಿಕಾರಿಗಳ ಜೊತೆ ಚರ್ಚೆ ಮಾಡಲಾಗಿದೆ. ಇದರ ಲಾಭ ಹಾಗೂ ನಷ್ಟದ ಕುರಿತು ಒಂದು ವರ್ಷದ ನಂತರ ಚರ್ಚೆ ಮಾಡೋಣ. ವಿಶೇಷವಾಗಿ ಇದರ ಬಗ್ಗೆ ಜನಸಾಮಾನ್ಯರಿಗೆ ಎಲ್ಲವೂ ಗೊತ್ತಿದೆ ಎಂದರು.
30-10-26 08:26 pm
HK News
ಸ್ಟಿಂಗ್ ಪ್ರಕರಣಕ್ಕೆ ಟ್ವಿಸ್ಟ್ ; ಕೇಂದ್ರ ಸಚಿವ ಕುಮ...
30-10-26 05:15 pm
ರಾಜ್ಯದ ಜನತೆಗೆ ಮತ್ತೆ ದರ ಏರಿಕೆ ಶಾಕ್ ; ನಂದಿನಿ ಹಾ...
29-10-26 08:21 pm
'ಮೈಸೂರು ಅರಮನೆ ಸರ್ಕಾರಕ್ಕೆ ಸೇರಿದ್ದು' ತನ್ನ ಹೇಳಿಕ...
28-10-26 10:52 pm
ವಿಧಾನ ಪರಿಷತ್ತಿನ ನಾಲ್ಕು ಸ್ಥಾನಕ್ಕೆ ಚುನಾವಣೆ ; ನಾ...
27-10-26 09:47 pm
29-10-26 09:28 pm
HK News Staffer
ಆಡಳಿತ ಬದಲಾವಣೆ ಉದ್ದೇಶದ ಹಿಂಸಾತ್ಮಕ ಪ್ರತಿಭಟನೆಗಳಲ್...
29-10-26 08:23 pm
'ಮೋದಿ ಅಪ್ಪನೂ ಜೈಲಿಗೆ ಹೋಗಬೇಕಾಗುತ್ತೆ!' ; ವಿವಾದಕ್...
25-10-26 09:40 pm
ಹಿಂದೂ ರಾಷ್ಟ್ರ ಎಂದರೆ ಮುಸ್ಲಿಮರನ್ನು ಹೊರಗಿಡುವುದಲ್...
21-10-26 04:21 pm
ಫ್ರಾನ್ಸ್, ಬಾಂಗ್ಲಾ ರೀತಿ ಭಾರತದಲ್ಲಿ ಆಗೋದು ಸಾಧ್ಯವ...
20-10-26 01:18 pm
31-10-26 05:19 pm
HK News Staffer
ಉದ್ಘಾಟನೆಗೂ ಮುನ್ನವೇ ಇಂದಿರಾ ಕ್ಯಾಂಟೀನ್ ಹೆದ್ದಾರಿಗ...
31-10-26 02:25 pm
ಸೌಜನ್ಯಾ ಮರು ತನಿಖೆ ; ಎಸ್ಐಟಿ ಮುಖ್ಯಸ್ಥರಾಗಿ ಚೇತನ್...
30-10-26 12:51 pm
ಸೌಜನ್ಯಾ ಪ್ರಕರಣ ತನಿಖೆಯಲ್ಲಿ ಭಾಗಿಯಾಗಿದ್ದ ಎಲ್ಲ ಪೊ...
30-10-26 12:19 pm
UPSCಯಲ್ಲಿ 42ನೇ ರ್ಯಾಂಕ್ನಿಂದ ರಫೇಲ್ ಪೈಲಟ್ ವರೆ...
30-10-26 12:16 pm
31-10-26 01:16 pm
HK News Staffer
ಕಾರವಾರದ ಮುದಗಾ ಬಂದರಿನಲ್ಲಿ ಮತ್ತೆ ವಿಷಾನಿಲ ದುರಂತ:...
31-10-26 01:05 pm
ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಶನ್ ; ಕಾಂಗ್ರೆ...
30-10-26 11:01 pm
Cyprian Pinto, Mangalore: 50ಕ್ಕೂ ಹೆಚ್ಚು ಬಾಲಕರ...
30-10-26 09:57 pm
ಆನ್ಲೈನಲ್ಲಿ ಕೇರಳ ಲಾಟರಿ ಗೆದ್ದ ಮಂಗಳೂರಿನ ವ್ಯಕ್ತಿಗ...
30-10-26 05:16 pm