ಬ್ರೇಕಿಂಗ್ ನ್ಯೂಸ್
14-09-26 06:02 pm HK News Staffer ಕರಾವಳಿ
ಮಂಗಳೂರು, ಸೆ.14: ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ಸಚಿವ ಸಂಪುಟ ಸಭೆಗಾಗಿ ಸಿಎಂ ಡಿ.ಕೆ ಶಿವಕುಮಾರ್ ಒಂದು ದಿನ ಮೊದಲೇ ಮಂಗಳೂರಿಗೆ ಬರಲಿದ್ದಾರೆ. ಅಲ್ಲದೆ, ಸಿಎಂ ಆಗಿ ಮೊದಲ ಬಾರಿಗೆ ಕರಾವಳಿ ಜಿಲ್ಲೆಗೆ ಆಗಮಿಸುತ್ತಿರುವ ಡಿಕೆಶಿ ಮೊದಲ ಭೇಟಿಯಲ್ಲೆ ಜನರ ಬಳಿಗೆ ತೆರಳಿ ಸಮಸ್ಯೆ ಅರಿಯಲು ಮುಂದಾಗಿದ್ದಾರೆ.
17ರಂದು ಸಂಜೆ 5.25ಕ್ಕೆ ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣಕ್ಕೆ ಬರಲಿರುವ ಸಿಎಂ ಡಿಕೆಶಿ ಅಂದು ಸಂಜೆ ಯಾವುದೇ ಸರ್ಕಾರಿ ಕಾರ್ಯಕ್ರಮದ ನಿಗದಿ ಮಾಡಿಲ್ಲ. ಇತರೇ ವಿಶೇಷ ಕಾರ್ಯಕ್ರಮಗಳೂ ಇಲ್ಲ. ಆದರೆ, ಮಂಗಳೂರಿನಲ್ಲಿ ವಾಸ್ತವ್ಯ ಮಾಡಲಿದ್ದು ಈ ವೇಳೆ, ಪಕ್ಷದ ನಾಯಕರು ಸೇರಿದಂತೆ ಆಪ್ತರೊಂದಿಗೆ ಮರುದಿನದ ಸಚಿವ ಸಂಪುಟ ಸಭೆ ವಿಚಾರದಲ್ಲಿ ಚರ್ಚಿಸುವ ನಿರೀಕ್ಷೆಯಿದೆ.
ಸೆ.18ರಂದು ಪಡೀಲ್ ನಲ್ಲಿರುವ ನೂತನ ಜಿಲ್ಲಾಧಿಕಾರಿ ಕಚೇರಿಯ ಎರಡನೇ ಮಹಡಿಯಲ್ಲಿ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯ ವರೆಗೆ ಸಚಿವ ಸಂಪುಟ ಸಭೆ ನಡೆಯಲಿದೆ. ಕರಾವಳಿ ಜಿಲ್ಲೆಗಳಿಗೆ ಸಂಬಂಧಪಟ್ಟ ಇಲಾಖೆಗಳನ್ನು ಹೊಂದಿರುವ ಸಂಬಂಧಿತ ಸಚಿವರು ಸಭೆಗೆ ಆಗಮಿಸಲಿದ್ದಾರೆ.
ಮಧ್ಯಾಹ್ನ 2.30ಕ್ಕೆ ಮೇರಿಹಿಲ್ ಹೆಲಿಪ್ಯಾಡ್ ನಿಂದ ಹೆಲಿಕಾಪ್ಟರ್ ಮೂಲಕ ಹೆಬ್ರಿಗೆ ತೆರಳಲಿದ್ದು ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಗ್ರಾಮಸ್ಥರನ್ನು ಭೇಟಿಯಾಗಿ ಅವರ ಅಹವಾಲು ಸ್ವೀಕರಿಸಲಿದ್ದಾರೆ. ಆನಂತರ ಸಂಜೆ 5 ಗಂಟೆಗೆ ಹೆಲಿಕಾಪ್ಟರ್ ಮೂಲಕ ಮರಳಿ ಮಂಗಳೂರಿಗೆ ಬಂದು ವಾಸ್ತವ್ಯ ಹೂಡಲಿದ್ದಾರೆ. ಮರುದಿನ ಬೆಳಗ್ಗೆ 9.30 ಗಂಟೆಗೆ ಹೆಲಿಕಾಪ್ಟರ್ ಮೂಲಕ ಮಂಗಳೂರಿನಿಂದ ತೀರ್ಥಹಳ್ಳಿಗೆ ತೆರಳಲಿದ್ದು ಅಲ್ಲಿಯೂ ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಗ್ರಾಮಸ್ಥರ ಅಹವಾಲು ಸ್ವೀಕರಿಸಿ ಸಭೆ ನಡೆಸಲಿದ್ದಾರೆ. ಆನಂತರ, ಮಧ್ಯಾಹ್ನ ಮೂರು ಗಂಟೆಗೆ ಬಾಳೆಹೊನ್ನೂರಿನಲ್ಲಿಯೂ ಇದೇ ವಿಚಾರದಲ್ಲಿ ಸಭೆಯಲ್ಲಿ ಪಾಲ್ಗೊಂಡು ಸಂಜೆಯ ವೇಳೆಗೆ ಅಲ್ಲಿಂದ ಕಾಪ್ಟರ್ ನಲ್ಲಿ ಬೆಂಗಳೂರು ತೆರಳಲಿದ್ದಾರೆ.
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸಿದರೂ, ಇದರ ನಡುವೆಯೇ ಕಸ್ತೂರಿರಂಗನ್ ವರದಿ ಜಾರಿಗೊಳ್ಳುತ್ತಿರುವುದಕ್ಕೆ ಪಶ್ಚಿಮ ಘಟ್ಟಗಳ ತಪ್ಪಲಿನ ಗ್ರಾಮಗಳ ಜನರಿಂದ ವಿರೋಧ ವ್ಯಕ್ತವಾಗಿದ್ದರಿಂದ ಎರಡೂ ವಿಚಾರಗಳಿಗೆ ಮುಖ್ಯಮಂತ್ರಿ ಮಹತ್ವ ನೀಡಿ ಜನರ ಬಳಿಗೇ ತೆರಳಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಸೆ. 20-21 ರಂದು ಕಸ್ತೂರಿ ರಂಗನ್ ವರದಿ ವಿಚಾರದಲ್ಲಿ ವಿಶೇಷ ಅಧಿವೇಶನ ನಡೆಯಲಿದ್ದು ಅದಕ್ಕೂ ಮುನ್ನ ಸಿಎಂ ಡಿಕೆಶಿ ಸಮಸ್ಯೆ ಅರಿಯಲು ಮುಂದಾಗಿದ್ದಾರೆ.
ಪಶ್ಚಿಮ ಘಟ್ಟಗಳ ಸಂರಕ್ಷಣೆ ಸಲುವಾಗಿ ಕಸ್ತೂರಿರಂಗನ್ ಸಮಿತಿ ನೀಡಿರುವ ವರದಿಯನ್ನು ಕೇಂದ್ರ ಸರ್ಕಾರ ಅಂಗೀಕರಿಸಿದ್ದು ಇದೇ ತಿಂಗಳಲ್ಲಿ ಅಂತಿಮ ಅಧಿಸೂಚನೆ ಹೊರಡಿಸಲಿದೆ. ರಾಜ್ಯ ಸರ್ಕಾರ ಈ ವರದಿ ಜಾರಿಗೆ ವಿರೋಧ ವ್ಯಕ್ತಪಡಿಸುತ್ತ ಬಂದರೂ, ವರದಿಯ ಸಾಧಕ ಬಾಧಕಗಳನ್ನು ಜನರಿಗೆ ತಲುಪಿಸಲು ಇಲ್ಲಿನ ಜನಪ್ರತಿನಿಧಿಗಳಿಗೆ ಸಾಧ್ಯವಾಗಿಲ್ಲ. ವರದಿ ಜಾರಿ ವಿಚಾರವನ್ನು ಗುಮ್ಮನಂತೆ ತೋರಿಸಿ ಬೇಳೆ ಬೇಯಿಸಲು ನೋಡುತ್ತಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm