ಬ್ರೇಕಿಂಗ್ ನ್ಯೂಸ್
17-09-26 08:02 pm HK News Staffer ಕರಾವಳಿ
ಮಂಗಳೂರು, ಸೆ.17: ಕರಾವಳಿ ಜಿಲ್ಲೆಗಳಿಗೆ ಈ ಸಂಪುಟ ಸಭೆಯಿಂದ ಹೊಸ ರೂಪ ಸಿಗಲಿದೆ. ಕರಾವಳಿ ಮತ್ತು ಮಲೆನಾಡು ಭಾಗ ಇಡೀ ರಾಜ್ಯದಲ್ಲೇ ವಿದ್ಯಾವಂತರು ಮತ್ತು ಹೆಚ್ಚು ಪ್ರಜ್ಞಾವಂತರು ಇರುವ ಜಿಲ್ಲೆ. ಇಲ್ಲಿನ ಪ್ರತಿಭಾ ಪಲಾಯನ ತಪ್ಪಿಸಬೇಕಾಗಿದೆ. ಈ ಭಾಗಕ್ಕೆ ಶಕ್ತಿ ತುಂಬಬೇಕು, 30-40 ವರ್ಷಗಳ ಬೇಡಿಕೆಯನ್ನು ಪರಿಗಣಿಸಬೇಕು ಎಂದು ಸಂಪುಟ ಸದಸ್ಯರು ಸೇರಿ ಸಭೆ ನಡೆಸುತ್ತಿದ್ದೇವೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಇಲ್ಲಿನ ಶಾಸಕರು, ಸಂಸದರು ಭೇಟಿಯಾಗಿ ತಮ್ಮ ಬೇಡಿಕೆ, ಭಾವನೆ ಹೇಳಿಕೊಂಡಿದ್ದಾರೆ. ಅವರ ಬೇಡಿಕೆಗಳು ನನ್ನ ಮನಸ್ಸಿನಲ್ಲಿ ಇದೆ. ಸಂಪುಟ ಸಭೆಯಲ್ಲಿ ಬೇಡಿಕೆಗಳನ್ನು ಈಡೇರಿಸುವ ಪ್ರಯತ್ನ ಮಾಡುತ್ತೇವೆ. ಕರಾವಳಿಯಲ್ಲಿ 340 ಕಿಮೀ ಉದ್ದಕ್ಕೆ ಕಡಲ ತೀರ ಇದೆ, ಇದನ್ನು ನಾವು ಅಭಿವೃದ್ಧಿಗೆ ಬಳಸಿಕೊಳ್ಳಬೇಕಾಗಿದೆ ಎಂದು ಹೇಳಿದರು.
ಕಸ್ತೂರಿ ರಂಗನ್ ವರದಿ ವಿಚಾರದಲ್ಲಿ ಕೇಳಿದ ಪ್ರಶ್ನೆಗೆ, ಕಸ್ತೂರಿ ರಂಗನ್ ವರದಿಯನ್ನು ನಮ್ಮ ಸರ್ಕಾರ ನಿರಾಕರಿಸಿತ್ತು. ಆದರೆ ಮತ್ತೆ ಜಾರಿಗೆ ತರುತ್ತಿರುವ ಕಾರಣ ಆ ಬಗ್ಗೆ ಮತ್ತು ಬರದ ವಿಚಾರದಲ್ಲಿ ವಿಶೇಷ ಅಧಿವೇಶನ ಕರೆಯಲಾಗಿದೆ. ಕಸ್ತೂರಿ ರಂಗನ್ ವರದಿ ಬಗ್ಗ ಆಯಾ ಭಾಗದ ಶಾಸಕರು ಅಭಿಪ್ರಾಯ ಮಂಡನೆಗೆ ಅವಕಾಶ ನೀಡಿದ್ದೇವೆ. ಎರಡು ದಿನಗಳ ಅಧಿವೇಶನದಲ್ಲಿ ಬರ ಮತ್ತು ಕಸ್ತೂರಿ ರಂಗನ್ ಬಗ್ಗೆ ಚರ್ಚೆ ನಡೆಸಲಿದ್ದೇವೆ. ಅರಣ್ಯ ಸಚಿವರೂ ತಮ್ಮ ವರದಿಯನ್ನು ನೀಡಲಿದ್ದಾರೆ.
ಕಸ್ತೂರಿ ರಂಗನ್ ವರದಿ ಬಗ್ಗೆ ಅಲ್ಲಿನ ಪ್ರದೇಶದ ಜನರ ಜೊತೆ ಮಾತನಾಡುತ್ತೇನೆ. ನೇರವಾಗಿ ಅವರ ಬಳಿ ತೆರಳಿ ತಳಮಟ್ಟದಿಂದ ಜನರ ಅಭಿಪ್ರಾಯ ಸಂಗ್ರಹಿಸಲಿದ್ದೇನೆ. ಗ್ರೌಂಡ್ ರಿಯಾಲ್ಟಿ ತಿಳಿದುಕೊಂಡು ಅಧಿವೇಶನದಲ್ಲಿ ಉತ್ತರ ನೀಡಲಿದ್ದೇನೆ ಎಂದು ಮುಖ್ಯಮಂತ್ರಿ ಡಿಕೆಶಿ ಹೇಳಿದರು.
ಉಮರ್ ಖಲೀದ್ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಹೇಳಿಕೆ ವಿಚಾರದಲ್ಲಿ, ಆ ಬಗ್ಗೆ ನನಗೆ ಮಾಹಿತಿ ಇಲ್ಲ. ತಿಳ್ಕೊಂಡು ಮಾತಾಡುತ್ತೇನೆ ಎಂದು ಹೇಳಿ ನಿರ್ಗಮಿಸಿದರು.
The coastal districts of Karnataka will receive a new development push through the Cabinet meeting, Deputy Chief Minister D K Shivakumar said. He said the coastal and Malnad regions have some of the most educated and socially aware populations in the state and stressed the need to prevent talent migration and strengthen the region by considering demands that have been raised for the past 30 to 40 years.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am