ಬ್ರೇಕಿಂಗ್ ನ್ಯೂಸ್
18-09-26 04:46 pm HK News Staffer ಕರಾವಳಿ
ಮಂಗಳೂರು, ಸೆಪ್ಟೆಂಬರ್ 18: ತುಳು ಭಾಷಿಕರ ಹಲವು ದಶಕಗಳ ಹೋರಾಟ ಹಾಗೂ ಬಹುದಿನಗಳ ನಿರೀಕ್ಷೆಗೆ ಮಹತ್ತರ ಕಾಣಿಕೆ ಲಭಿಸಿದ. ಎರಡು ಸಾವಿರ ವರ್ಷಗಳ ಇತಿಹಾಸ ಮತ್ತು ಪರಂಪರೆ ಹೊಂದಿರುವ ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಆಡಳಿತ ಭಾಷೆಯಾಗಿ ರಾಜ್ಯ ಸರ್ಕಾರ ಘೋಷಿಸಿದೆ.
ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ‘ಪ್ರಜಾಸೌಧ’ದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸುದ್ದಿಗೋಷ್ಠಿಯಲ್ಲಿ ತುಳು ಭಾಷೆಗೆ ಎರಡನೇ ಅಧಿಕೃತ ಭಾಷಾ ಸ್ಥಾನಮಾನ ನೀಡುವ ಕುರಿತು ಸಂಪುಟ ತೆಗೆದುಕೊಂಡಿರುವ ತೀರ್ಮಾನವನ್ನು ಪ್ರಕಟಿಸಿದರು. ಈ ಕುರಿತು ಮಾಧ್ಯಮಕ್ಕೆ ನೀಡಿರುವ ಪ್ರತಿಯಲ್ಲಿ ಕರ್ನಾಟಕದಲ್ಲಿ ಕನ್ನಡದ ಜೊತೆಗೆ ತುಳು ಭಾಷೆಯನ್ನು ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಿಸಲು ಸಂಪುಟ ಸಭೆ ಅನುಮೋದನೆ ನೀಡಿದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಅನ್ವಯವಾಗುವಂತೆ ಘೋಷಣೆ ಮಾಡಲು ತೀರ್ಮಾನಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಡಳಿತವನ್ನು ಅನುಷ್ಠಾನ ಕೇಂದ್ರವಾಗಿ ಮಾಡಲಾಗುವುದು. ಅನುವಾದ, ತರಬೇತಿ ಮತ್ತು ಭಾಷಾ ಬಳಕೆಗೆ ಸಂಬಂಧಿಸಿದ ಚಟುವಟಿಕೆಗಳಿಗೆ ಪ್ರತಿ ವರ್ಷ 82 ಲಕ್ಷ ರೂ. ಒದಗಿಸಲಾಗುವುದು ಎಂದು ತಿಳಿಸಿದ್ದಾರೆ. 8ನೇ ಪರಿಚ್ಛೇದದ ಹೋರಾಟಕ್ಕೆ ಹೊಸ ಬಲ?
ಪಂಚ ದ್ರಾವಿಡ ಭಾಷೆಗಳಲ್ಲಿ ಒಂದೆಂದು ಪರಿಗಣಿಸಲಾಗುವ ತುಳು ಪ್ರಾಚೀನ ಪರಂಪರೆಯ ಜತೆಗೆ ಸಮೃದ್ಧ ಆಧುನಿಕ ಸಾಹಿತ್ಯವನ್ನೂ ಹೊಂದಿದೆ. ಕರ್ನಾಟಕದಲ್ಲಿ ಅಧಿಕೃತ ಭಾಷಾ ಸ್ಥಾನಮಾನ ದೊರೆಯುವುದರಿಂದ ತುಳುವನ್ನು ಭಾರತೀಯ ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸಬೇಕೆಂಬ ಬೇಡಿಕೆಗೆ ಮತ್ತಷ್ಟು ಬಲ ಸಿಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.
ದಕ್ಷಿಣ ಕನ್ನಡ, ಉಡುಪಿಯಲ್ಲಿ ಪ್ರಮುಖ ಭಾಷೆ
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಪ್ರಮುಖವಾಗಿ ಮಾತನಾಡುವ ತುಳು ಭಾಷೆಗೆ ಹೆಚ್ಚುವರಿ ಅಧಿಕೃತ ಭಾಷಾ ಸ್ಥಾನಮಾನ ನೀಡಬೇಕೆಂಬ ಬೇಡಿಕೆ ಹಲವು ದಶಕಗಳಿಂದ ಕೇಳಿಬರುತ್ತಿತ್ತು. ತುಳು ಭಾಷೆಯ ಸಂರಕ್ಷಣೆ, ಅಭಿವೃದ್ಧಿ ಹಾಗೂ ಆಡಳಿತಾತ್ಮಕ ಬಳಕೆಗೆ ಹೆಚ್ಚಿನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಅಧಿಕೃತ ಮಾನ್ಯತೆ ಮಹತ್ವದ ಹೆಜ್ಜೆಯಾಗಲಿದೆ ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.

ತುಳು ಭಾಷೆಗೆ ಅಧಿಕೃತ ಸ್ಥಾನಮಾನ ನೀಡುವ ಸಾಧ್ಯತೆ ಹಾಗೂ ಅದರ ಸಾಧಕ- ಬಾಧಕಗಳನ್ನು ಪರಿಶೀಲಿಸಲು ಹಿರಿಯ ಶಿಕ್ಷಣ ತಜ್ಞ ಡಾ. ಎಂ. ಮೋಹನ್ ಆಳ್ವ ಅವರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿಯನ್ನು ರಚಿಸಲಾಗಿತ್ತು. ಸಮಿತಿಯು ವಿವಿಧ ರಾಜ್ಯಗಳಲ್ಲಿನ ಎರಡನೇ ಅಧಿಕೃತ ಭಾಷೆ ಸೇರಿದಂತೆ ಭಾಷಾ ನೀತಿ ಮಾದರಿಗಳನ್ನು ಅಧ್ಯಯನ ಮಾಡಿ ಸರ್ಕಾರಕ್ಕೆ ವಿಸ್ತೃತ ವರದಿ ಸಲ್ಲಿಸಿತ್ತು. ಈ ವರದಿಯಲ್ಲಿನ ಅಂಶಗಳು ಹಾಗೂ ತುಳು ಭಾಷೆಯ ಐತಿಹಾಸಿಕ, ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಮಹತ್ವವನ್ನು ಪರಿಗಣಿಸಿ ರಾಜ್ಯ ಸರ್ಕಾರ ಈ ಮಹತ್ವದ ತೀರ್ಮಾನ ಕೈಗೊಂಡಿದೆ ಎಂದು ತಿಳಿಸಲಾಗಿದೆ.
In a significant development for Tulu-speaking communities, the Karnataka government has approved the declaration of Tulu as an additional official administrative language in the state, marking a major milestone in the decades-long campaign for recognition of the language.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 04:46 pm
HK News Staffer
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
Mangalore Jail Jammer, Lawyers Protest, CM, M...
18-09-26 11:30 am
SDPI Protest, CM DK Shivakumar, Mangalore: ರಹ...
18-09-26 10:35 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am