ಬ್ರೇಕಿಂಗ್ ನ್ಯೂಸ್
21-09-26 01:37 pm HK News Staffer ಕರಾವಳಿ
ಮಂಗಳೂರು, ಸೆ.21: ದೇಶದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಧರ್ಮಸ್ಥಳದ ಸೌಜನ್ಯಾ ಅತ್ಯಾಚಾರ ಮತ್ತು ಭೀಕರ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದ್ದು ಪ್ರಕರಣದ ಮರು ತನಿಖೆಗೆ ಆದೇಶ ಮಾಡಿದೆ. ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡ ರಚಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಸೌಜನ್ಯಾ ತಾಯಿ ಕುಸುಮಾವತಿ ಗೌಡ ಮರು ತನಿಖೆಗೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂಜಯ್ ಕುಮಾರ್ ನೇತೃತ್ವದ ಪೀಠವು ಈ ಮಹತ್ವದ ತೀರ್ಪನ್ನು ಪ್ರಕಟಿಸಿದೆ. ವಿಚಾರಣೆ ಸಂದರ್ಭದಲ್ಲಿ ಸಿಬಿಐ ತನಿಖೆಯ ವೈಫಲ್ಯಗಳನ್ನು ಬೊಟ್ಟು ಮಾಡಲಾಗಿತ್ತು. ಈ ವೇಳೆ, ಸಿಬಿಐ ಅಧಿಕಾರಿಗಳ ತನಿಖಾ ವೈಖರಿಯ ಬಗ್ಗೆ ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿತ್ತು. ತನಿಖೆಯಲ್ಲಿ ಹಲವು ಲೋಪದೋಷಗಳಿದ್ದು, ನೈಜ ಅಪರಾಧಿಗಳನ್ನು ಪತ್ತೆ ಹಚ್ಚುವಲ್ಲಿ ವಿಫಲವಾಗಿದ್ದನ್ನು ಟೀಕಿಸಿತ್ತು.
ಹೊಸತಾಗಿ ತಂಡ ರಚಿಸಲು ಆದೇಶ
ಸೌಜನ್ಯಾ ಪ್ರಕರಣದಲ್ಲಿ ಪೂರ್ಣ ಪ್ರಮಾಣದ ಮರು ತನಿಖೆಗಾಗಿ ನಿಷ್ಪಕ್ಷಪಾತ ತನಿಖಾಧಿಕಾರಿಗಳನ್ನು ಒಳಗೊಂಡ ತನಿಖಾ ತಂಡವನ್ನು ರಚಿಸಬೇಕು. ಈ ಹಿಂದೆ ಪ್ರಕರಣದ ತನಿಖೆ ನಡೆಸಿದ್ದ ಯಾವುದೇ ಪೊಲೀಸ್ ಹಾಗೂ ಸಿಬಿಐ ಅಧಿಕಾರಿಗಳು ಪ್ರಸ್ತುತ ರಚನೆಯಾಗುವ ಎಸ್.ಐ.ಟಿ ತಂಡದಲ್ಲಿ ಭಾಗಿಯಾಗುವಂತಿಲ್ಲ. ಹೊಸದಾಗಿ ರಚನೆಯಾಗುವ ಎಸ್.ಐ.ಟಿ ತನಿಖೆ ಆರಂಭಿಸಿ, ಮೂರು ತಿಂಗಳಲ್ಲಿ ಪ್ರಾಥಮಿಕ ಅಂಶಗಳ ಬಗ್ಗೆ ವರದಿಯನ್ನು ನೀಡಬೇಕು ಎಂದು ಆದೇಶ ಮಾಡಿದೆ.
17 ವರ್ಷದ ಕಾಲೇಜು ವಿದ್ಯಾರ್ಥಿನಿ ಸೌಜನ್ಯಾಳನ್ನು 2012ರಲ್ಲಿ ಅಪಹರಿಸಿ ಅತ್ಯಾಚಾರಗೈದು ಕೊಲೆ ಮಾಡಲಾಗಿತ್ತು. ಈ ಬಗ್ಗೆ 2012ರಿಂದ ಆಕೆಯ ಕುಟುಂಬಸ್ಥರು ಮತ್ತು ಸಾರ್ವಜನಿಕರು ನೈಜ ಆರೋಪಿಗಳಿಗೆ ಶಿಕ್ಷೆಯಾಗಬೇಕು ಎಂದು ಹೋರಾಟ ನಡೆಸಿಕೊಂಡು ಬಂದಿದ್ದಾರೆ. ಈ ಹಿಂದೆ ಸಿಐಡಿ, ಸಿಬಿಐ ಅಧಿಕಾರಿಗಳು ತನಿಖೆ ನಡೆಸಿದರೂ, ನೈಜ ಆರೋಪಿಗಳಿಗೆ ಶಿಕ್ಷೆಯಾಗಿಲ್ಲ. ಪೊಲೀಸರು ಬಂಧಿಸಿ ಈತನೇ ಕೃತ್ಯ ಎಸಗಿದ್ದಾನೆಂದು ತೋರಿಸಿದ್ದ ಸಂತೋಷ್ ರಾವ್ ನೈಜ ಆರೋಪಿಯಲ್ಲ, ಆತ ಮಾನಸಿಕ ಅಸ್ವಸ್ಥ ಎಂದು ಹೈಕೋರ್ಟ್ 2023 ರಲ್ಲಿ ತೀರ್ಪು ನೀಡಿದ್ದು ರಾಜ್ಯದಲ್ಲಿ ಮತ್ತೆ ಸಂಚಲನ ಸೃಷ್ಟಿಸಿತ್ತು. ಇದೀಗ ಪ್ರಕರಣ ನಡೆದು 14 ವರ್ಷಗಳ ಬಳಿಕ ಸುಪ್ರೀಂ ಕೋರ್ಟ್ ಮರು ತನಿಖೆಗೆ ಆದೇಶ ಮಾಡಿರುವುದು ಮತ್ತೆ ಕುತೂಹಲ ಮೂಡಿಸಿದೆ.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
21-09-26 08:21 pm
HK News Staffer
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm