ಬ್ರೇಕಿಂಗ್ ನ್ಯೂಸ್
24-09-26 06:26 pm HK News Staffer ಕರಾವಳಿ
ಬಂಟ್ವಾಳ, ಸೆಪ್ಟೆಂಬರ್ 24 : ಅಡಿಕೆ ತೋಟದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ವೇಳೆ ಹೆಜ್ಜೇನು ದಾಳಿಗೆ ಒಳಗಾದ 75 ವರ್ಷದ ವೃದ್ಧೆಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದಾರುಣ ಘಟನೆ ಬಿ. ಕಸಬಾ ಗ್ರಾಮದ ಕೆಮ್ಮಟ್ಟೆಗುಡ್ಡೆಯಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಕಮಲ (75) ಮೃತ ದುರ್ದೈವಿ.
ಮೃತ ಕಮಲ ಬುಧವಾರ ಬೆಳಗ್ಗೆ ತಮ್ಮ ಮನೆಯ ಸಮೀಪದ ಅಡಿಕೆ ತೋಟದಲ್ಲಿ ಹುಲ್ಲು ತೆಗೆಯುವುದು ಸೇರಿದಂತೆ ಕೃಷಿ ಕೆಲಸದಲ್ಲಿ ತೊಡಗಿಸಿದ್ದರು. ಈ ವೇಳೆ ಹೆಜ್ಜೇನುಗಳು ದಾಳಿ ನಡೆಸಿದ್ದವು. ಬಳಿಕ 11 ಗಂಟೆ ವೇಳೆಗೆ ಮನೆಗೆ ವಾಪಸ್ ಬಂದ ಕಮಲ ಅವರು ತೋಟದಲ್ಲಿ ಹೆಜ್ಜೇನು ಕಡಿದಿರುವ ವಿಷಯವನ್ನು ಪುತ್ರನಿಗೆ ತಿಳಿಸಿದ್ದಾರೆ. ಕೂಡಲೇ ಎಚ್ಚೆತ್ತುಕೊಂಡ ಪುತ್ರ ಅವರನ್ನು ಸ್ಥಳೀಯ ಕ್ಲಿನಿಕ್ಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ. ಬಳಿಕ ಅವರನ್ನು ಮನೆಗೆ ಕರೆತಂದಿದ್ದರು.
ಮಧ್ಯಾಹ್ನ ಸುಮಾರು 1.30ರ ವೇಳೆಗೆ ಕಮಲ ಅವರು ದಿಢೀರ್ ಅಸ್ವಸ್ಥಗೊಂಡು ಮಾತನಾಡಲು ಸಾಧ್ಯವಾಗದ ಸ್ಥಿತಿಗೆ ತಲುಪಿದ್ದಾರೆ. ಪರಿಸ್ಥಿತಿ ಗಂಭೀರವಾಗುತ್ತಿದ್ದಂತೆ ಕುಟುಂಬಸ್ಥರು ಆಂಬುಲೆನ್ಸ್ ಮೂಲಕ ಹೆಚ್ಚಿನ ಚಿಕಿತ್ಸೆಗಾಗಿ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯೇ ಕಮಲ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಈ ಕುರಿತು ಮೃತ ಕಮಲ ಅವರ ಪುತ್ರ ನೀಡಿದ ದೂರಿನ ಆಧಾರದ ಮೇಲೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದೇ ರೀತಿಯ ಮತ್ತೊಂದು ದಾರುಣ ಘಟನೆ ಇತ್ತೀಚೆಗೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ಹತ್ತಿಸರ ಗ್ರಾಮದಲ್ಲಿ ನಡೆದಿತ್ತು. ಕಣಜದ ಹುಳುಗಳ ದಾಳಿಗೆ 8 ವರ್ಷದ ನಿಷ್ಮಿತ್ ಎಂಬ ಬಾಲಕ ಮೃತಪಟ್ಟಿದ್ದನು. ನಿಷ್ಮಿತ್ ಅವರ ತಂದೆ ವೆಂಕಟೇಶ್ ಮನೆಯ ಹಿಂಭಾಗದಲ್ಲಿದ್ದ ಬಾಳೆಗಿಡವನ್ನು ಕಡಿಯುತ್ತಿದ್ದಾಗ ಕಣಜದ ಗೂಡಿಗೆ ಹಾನಿಯಾಗಿತ್ತು. ಇದರಿಂದ ಕಣಜದ ಹುಳುಗಳು ಮೊದಲು ವೆಂಕಟೇಶ್ ಅವರಿಗೆ ಹಾಗೂ ಬಳಿಕ ಅವರ ಪುತ್ರ ನಿಷ್ಮಿತ್ಗೂ ದಾಳಿ ನಡೆಸಿದ್ದವು.
ಹುಳುಗಳ ಕಡಿತದಿಂದ ತಂದೆ-ಮಗ ಇಬ್ಬರೂ ತೀವ್ರ ಅಸ್ವಸ್ಥಗೊಂಡಿದ್ದರು. ಅವರನ್ನು ಮೊದಲು ಸಾಗರದ ಹೆಗ್ಗೋಡು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ನಿಷ್ಮಿತ್ ಮೃತಪಟ್ಟಿದ್ದರೆ, ವೆಂಕಟೇಶ್ ಪ್ರಾಣಾಪಾಯದಿಂದ ಪಾರಾಗಿದ್ದರು. ಈ ಕುರಿತು ಮೃತ ಬಾಲಕನ ತಾಯಿ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
24-09-26 09:42 pm
HK News Staffer
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
25-09-26 07:31 pm
HK News Staffer
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ಶಶಿಕುಮಾರ್ ನೇ...
24-09-26 10:46 pm
ಬಂಟ್ವಾಳ ; ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಹ...
24-09-26 06:26 pm
ಬಂಗಾಳ ವಾಯುಭಾರ ಕುಸಿತ ; ಕರಾವಳಿ, ಮಲೆನಾಡು, ದಕ್ಷಿಣ...
24-09-26 05:55 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm