ಬ್ರೇಕಿಂಗ್ ನ್ಯೂಸ್
24-09-26 10:46 pm HK News Desk ಕರಾವಳಿ
ಮಂಗಳೂರು, ಸೆ.24 2012ರಲ್ಲಿ ಅತ್ಯಾಚಾರಕ್ಕೀಡಾಗಿ ಭೀಕರವಾಗಿ ಕೊಲೆಯಾಗಿದ್ದ ಧರ್ಮಸ್ಥಳದ ಸೌಜನ್ಯಾ ಪ್ರಕರಣದ ಮರು ತನಿಖೆಗಾಗಿ ರಾಜ್ಯ ಸರ್ಕಾರ ಐಜಿಪಿ ದರ್ಜೆಯ ಎನ್.ಶಶಿಕುಮಾರ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ನೇಮಕ ಮಾಡಿದೆ.
ತಂಡದಲ್ಲಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, ರಾಜ್ಯ ಗುಪ್ತ ವಾರ್ತೆ ದಳದ ಎಸ್ಪಿ ನಿಶಾ ಜೇಮ್ಸ್, ಸಿಐಡಿ ಬೆಂಗಳೂರು ವಿಭಾಗದ ಎಸ್ಪಿ ಲೋಕೇಶ್ ಜಲಸಾರ್ ಮತ್ತು ಬೆಂಗಳೂರು ಗ್ರಾಮಾಂತರ ವಿಭಾಗದಲ್ಲಿ ಡಿವೈಎಸ್ಪಿ ಆಗಿರುವ ವೆಂಕಟೇಶ್ ಪ್ರಸನ್ನ ಅವರನ್ನು ಸದಸ್ಯರನ್ನಾಗಿ ನಿಯೋಜನೆ ಮಾಡಲಾಗಿದೆ. ಈ ತಂಡವು ಬೆಳ್ತಂಗಡಿ ಠಾಣೆಯಲ್ಲಿ ದಾಖಲಾಗಿದ್ದ ಸೌಜನ್ಯಾ ಕೊಲೆ ಪ್ರಕರಣದ ಎಫ್ಐಆರ್ ಮತ್ತು ಆನಂತರ ಸಿಬಿಐ ತನಿಖಾ ತಂಡವು ಚೆನ್ನೈ ವಿಭಾಗದಲ್ಲಿ ದಾಖಲಿಸಿದ್ದ ಎಫ್ಐಆರ್ ವಿಚಾರದಲ್ಲಿ ತನಿಖೆ ನಡೆಸಲಿದೆ.
ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಎಸ್ಐಟಿ ರಚಿಸಲಾಗಿದ್ದು, ಕರ್ನಾಟಕ ರಾಜ್ಯ ಕ್ಷೇತ್ರ ವ್ಯಾಪ್ತಿಗೆ ಸಂಬಂಧಿಸಿದಂತೆ ಬಿಎನ್ಎಸ್ ಕಲಂ 2(1)ಯು ಅಡಿಯಲ್ಲಿ ಪೊಲೀಸ್ ಠಾಣೆಯೆಂದು ಘೋಷಿಸಲಾಗಿದೆ. ಸದರಿ ತಂಡದ ತನಿಖಾಧಿಕಾರಿಗಳು ಬಿಎನ್ಎಸ್ 193 ಅಡಿಯಲ್ಲಿ ಪೊಲೀಸ್ ವರದಿಯನ್ನು ಸಂಬಂಧಿಸಿದ ಸಕ್ಷಮ ನ್ಯಾಯಾಲಯಕ್ಕೆ ಸಲ್ಲಿಸಲು ಅಧಿಕಾರವನ್ನು ನೀಡಲಾಗಿದೆ. ವಿಶೇಷ ತನಿಖಾ ತಂಡವು ಮೂರು ತಿಂಗಳೊಳಗೆ ತನಿಖೆ ನಡೆಸಿ ನ್ಯಾಯಾಲಯಕ್ಕೆ ವರದಿ ನೀಡುವಂತೆ ಮತ್ತು ತನಿಖೆ ಮುಕ್ತಾಯವಾದ ನಂತರ ಸರ್ಕಾರಕ್ಕೆ ವರದಿಯನ್ನು ಸಲ್ಲಿಸುವಂತೆ ಈ ಕುರಿತು ಹೊರಡಿಸಿದ ಆದೇಶದಲ್ಲಿ ತಿಳಿಸಿದೆ.
ಸೌಜನ್ಯಾ ತಾಯಿ ಕುಸುಮಾವತಿ ಪ್ರಕರಣದ ಮರು ತನಿಖೆಗಾಗಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಿದ ಸುಪ್ರೀಂ ಕೋರ್ಟ್ 2026ರ ಸೆ.21ರಂದು ಮರು ತನಿಖೆಗಾಗಿ ವಿಶೇಷ ತನಿಖಾ ತಂಡ ನೇಮಿಸುವಂತೆ ಆದೇಶ ಮಾಡಿತ್ತು. ಇದಲ್ಲದೆ, ಹೊಸ ತಂಡದಲ್ಲಿ ಈ ಹಿಂದೆ ತನಿಖಾ ತಂಡದಲ್ಲಿ ಭಾಗವಹಿಸಿದವರು ಇರಬಾರದು ಮತ್ತು ಪ್ರಕರಣದಲ್ಲಿ ಖುಲಾಸೆಗೊಂಡಿದ್ದ ಆರೋಪಿಯನ್ನು ವಿಚಾರಣೆ ನಡೆಸುವಂತಿಲ್ಲ ಎಂದೂ ಹೇಳಿತ್ತು.
ಹುಬ್ಬಳ್ಳಿ ಕಮಿಷನರ್ ಆಗಿದ್ದ ಶಶಿಕುಮಾರ್ ಅದಕ್ಕೂ ಹಿಂದೆ ಮಂಗಳೂರು ಕಮಿಷನರ್ ಆಗಿಯೂ ಕೆಲಸ ಮಾಡಿದ್ದರು. ಆದರೆ ಎರಡು ಕಡೆಗಳಲ್ಲೂ ಅವರ ವಿರುದ್ಧ ಭ್ರಷ್ಟಾಚಾರದ ಆರೋಪಗಳು ಕೇಳಿಬಂದಿದ್ದವು. ಮಂಗಳೂರಿನಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಮುಂದೆಯೇ ಶಶಿಕುಮಾರ್ ಬಗ್ಗೆ ಆರೋಪ ಮಾಡಲಾಗಿತ್ತು. ಇತ್ತೀಚೆಗಷ್ಟೇ ಹುಬ್ಬಳ್ಳಿಯಿಂದ ವರ್ಗಾವಣೆ ಆಗಿದ್ದ ಶಶಿಕುಮಾರ್ ಅವರಿಗೆ ಹೊಸ ಹುದ್ದೆ ತೋರಿಸಿರಲಿಲ್ಲ. ಇದೀಗ ರಾಜ್ಯದಲ್ಲಿ ಸಂಚಲನ ಮೂಡಿಸಿರುವ ಸೌಜನ್ಯಾ ಪ್ರಕರಣದ ಮರು ತನಿಖೆಗೆ ನೇಮಿಸಿರುವ ಎಸ್ಐಟಿ ತಂಡದ ಮುಖ್ಯಸ್ಥರನ್ನಾಗಿ ಮಾಡಲಾಗಿದೆ.
The Karnataka government has constituted a Special Investigation Team (SIT) headed by senior IPS officer N. Shashikumar to conduct a fresh investigation into the 2012 rape and murder of 17-year-old Sowjanya in Ujire, Dakshina Kannada.
23-09-26 11:02 pm
HK News Desk
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
ಸೆ.26ರಿಂದ ಸತತ 5 ದಿನ ಬ್ಯಾಂಕ್ಗಳು ಬಂದ್ ; ATM, U...
23-09-26 09:28 am
ತೀವ್ರ ಆರ್ಥಿಕ ಮುಗ್ಗಟ್ಟಿನಲ್ಲಿ ಡಿಕೆಶಿ ಸರ್ಕಾರ ! ಹ...
22-09-26 08:58 pm
24-09-26 09:42 pm
HK News Staffer
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
24-09-26 10:46 pm
HK News Desk
ಬಂಟ್ವಾಳ ; ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಹ...
24-09-26 06:26 pm
ಬಂಗಾಳ ವಾಯುಭಾರ ಕುಸಿತ ; ಕರಾವಳಿ, ಮಲೆನಾಡು, ದಕ್ಷಿಣ...
24-09-26 05:55 pm
ಕುಕ್ಕೆ ಸುಬ್ರಹ್ಮಣ್ಯಕ್ಕೆ ಮಾಜಿ ಕ್ರಿಕೆಟಿಗ ರವಿ ಶಾಸ...
23-09-26 10:47 pm
ಉತ್ತರಾಖಂಡದ ಯಮುನೋತ್ರಿಯಲ್ಲಿ ಕುಂಪಲದ ವ್ಯಕ್ತಿ ಹೃದಯ...
23-09-26 09:55 am
24-09-26 05:10 pm
HK News Staffer
ಸೈಬರ್ ಖದೀಮರ ಹೊಸ ಹೊಸ ತಂತ್ರ: ಒಂದೇ ದಿನ ಮಂಗಳೂರಿನಲ...
24-09-26 11:10 am
bus fire, Greater Noida: ಚಲಿಸುತ್ತಿದ್ದ ಸ್ಲೀಪರ್...
24-09-26 10:09 am
ಶಿರ್ವದಲ್ಲಿ ಭಾರೀ ಪ್ರಮಾಣದ ಗಾಂಜಾ, ಡ್ರಗ್ಸ್ ವಶಕ್ಕೆ...
23-09-26 09:28 pm
ಕರ್ತವ್ಯ ಲೋಪ, ಲಂಚಬಾಕತನ, ಅನುಚಿತ ವರ್ತನೆ ಬಗ್ಗೆ ದೂ...
23-09-26 09:24 pm