ಬ್ರೇಕಿಂಗ್ ನ್ಯೂಸ್
03-10-26 09:56 pm HK News Staffer ಕರಾವಳಿ
ಮಂಗಳೂರು, ಅ.3 : ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಅತ್ಯಂತ ಅವಶ್ಯವಾಗಿದ್ದು, ಕರಾವಳಿಯ ಜನಪ್ರತಿನಿಧಿಗಳು, ವಕೀಲರು ಮತ್ತು ನಾಗರಿಕರು ಒಗ್ಗಟ್ಟು ಮೆರೆದು ಪ್ರಬಲ ಹಕ್ಕೊತ್ತಾಯ ಮಂಡಿಸಿದರೆ ಮಾತ್ರ ಈ ಬೇಡಿಕೆ ಈಡೇರಲು ಸಾಧ್ಯ ಎಂದು ದ.ಕ. ಸಂಸದ ಕ್ಯಾ.ಬ್ರಿಜೇಶ್ ಚೌಟ ಹೇಳಿದರು.
ಶನಿವಾರ ನಗರದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಕರ್ನಾಟಕ ಹೈಕೋರ್ಟ್ ಪೀಠ ಸ್ಥಾಪನೆ ಕುರಿತು ನಡೆದ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು. ಮಂಗಳೂರು ರಾಜ್ಯದ ಜಿಡಿಪಿಗೆ ಎರಡನೇ ಅತಿಹೆಚ್ಚು ಕೊಡುಗೆ ನೀಡುವ ಪ್ರಮುಖ ನಗರ. ಇಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಅರ್ಹ ಬೇಡಿಕೆಯಾಗಿದೆ. ಈ ನಿಟ್ಟಿನಲ್ಲಿ ಮುಂದೆ ತಾಲೂಕು ಮಟ್ಟದಲ್ಲೂ ಆಯಾ ಕ್ಷೇತ್ರದ ಶಾಸಕರ ನೇತೃತ್ವದಲ್ಲಿ ಸಭೆ ನಡೆಸಿ ಸಾರ್ವಜನಿಕರಿಂದ ಹೈಕೋರ್ಟ್ ಪೀಠದ ಅಗತ್ಯತೆ ಬಗ್ಗೆ ಅಭಿಪ್ರಾಯ ಸಂಗ್ರಹಿಸಲಾಗುವುದು. ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯಾದರೆ ನಗರಕ್ಕೆ ಮತ್ತಷ್ಟು ಮಹತ್ವ ಸಿಗಲಿದೆ. ಜಿಲ್ಲೆಯ ಅಭಿವೃದ್ಧಿಗೂ ಇದು ಪೂರಕವಾಗಲಿದೆ ಎಂದರು.
ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಜಗದೀಶ ಶೇಣವ ಮಾತನಾಡಿ, ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಆಗುವುದರಿಂದ ವಕೀಲರಿಗಲ್ಲ, ಜನಸಾಮಾನ್ಯರಿಗೂ ಪ್ರಯೋಜನವಾಗಲಿದೆ. ಇದನ್ನು ಎಲ್ಲ ಜನರ ಅವಶ್ಯಕತೆ ಎಂದು ಭಾವಿಸಿ ಹಕ್ಕೊತ್ತಾಯ ಮಾಡಬೇಕು. ವಕೀಲರಿಗೆ ಸೀಮಿತವಾಗಿದ್ದ ಹೋರಾಟ ಸಾರ್ವಜನಿಕ ಬೇಡಿಕೆಯಾಗಿ ಇಂದು ಸಭೆ ನಡೆಸುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದರು.
ಶಾಸಕ ವೇದವ್ಯಾಸ ಕಾಮತ್ ಮಾತನಾಡಿ ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಪ್ರತಿಯೊಬ್ಬರ ಬೇಡಿಕೆಯಾಗಿದ್ದು, ಇದರ ಅವಶ್ಯಕತೆ ಬಗ್ಗೆ ದಾಖಲೆ ಸಹಿತ ಸರ್ಕಾರಕ್ಕೆ ಮನವರಿಕೆ ಮಾಡುವುದು ಅಗತ್ಯವಾಗಿದೆ ಎಂದರು. ವಕೀಲರ ಸಂಘದ ಮಾಜಿ ಅಧ್ಯಕ್ಷ ಎಚ್.ವಿ.ರಾಘವೇಂದ್ರ ಅವರು ಹೈಕೋರ್ಟ್ ಪೀಠ ಸ್ಥಾಪನೆ ಸಂಬಂಧಿಸಿದ ನಡೆದ ಹೋರಾಟದ ಇದುವರೆಗಿನ ಬೆಳವಣಿಗೆಯನ್ನು ವಿವರಿಸಿದರು. ಮಾಜಿ ಎಂಎಲ್ಸಿ ಮೋನಪ್ಪ ಭಂಡಾರಿ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಇನ್ನು ಕೆಲವರು ಕೊಡಗಿನಲ್ಲಿ ಹೈಕೋರ್ಟ್ ಪೀಠ ಆಗಬೇಕೆಂದು ಹೇಳುತ್ತಾರೆ. ಆದರೆ ದಕ್ಷಿಣ ಕನ್ನಡ ಜಿಲ್ಲೆಯ ಹೈಕೋರ್ಟ್ ಕೇಸುಗಳು 15 ಸಾವಿರದಷ್ಟಿವೆ ಎಂಬ ಲೆಕ್ಕಾಚಾರ ಇದೆ. ಇಷ್ಟೊಂದು ಕೇಸುಗಳು ಬೇರೆ ಜಿಲ್ಲೆಗಳದ್ದು ಇವೆಯೇ. ಮಂಗಳೂರಿನಲ್ಲಿ ಯಾಕೆ ಪೀಠ ಆಗಬೇಕೆಂದು ನಾವು ಮನವರಿಕೆ ಮಾಡಬೇಕಾಗಿದೆ ಎಂದರು.
ಹಿರಿಯ ವಕೀಲ ಎಂ.ಪಿ. ನೊರೊನ್ಹಾ ಅವರು ಪೀಠ ಸ್ಥಾಪನೆ ಬಗ್ಗೆ ಸರ್ಕಾರಕ್ಕೆ ಮನವರಿಕೆ ಮಾಡಲು ಹಂತ ಹಂತವಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅಭಿಪ್ರಾಯ ತಿಳಿಸಿದರು. ಮಾಜಿ ರಾಜ್ಯಸಭಾ ಸದಸ್ಯ ಬಿ.ಇಬ್ರಾಹಿಂ, ಮಾಜಿ ಎಂಎಲ್ಸಿ ಮೋನಪ್ಪ ಭಂಡಾರಿ, ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ, ಕೆನರಾ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ದಿವಾಕರ ಕೊಚ್ಚಿಕರ್, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಐಎಂಎ ಪ್ರತಿನಿಧಿ ಡಾ.ಅಣ್ಣಯ್ಯ ಕುಲಾಲ್ ಮತ್ತಿತರರು ಅಭಿಪ್ರಾಯ ಮಂಡಿಸಿದರು. ವಕೀಲರಾದ ಶ್ರೀಧರ ಶೆಟ್ಟಿ ಪುಳಿಂಚ ವಂದಿಸಿದರು. ಜಗದೀಶ್ ಕೆ.ಆರ್. ಕಾರ್ಯಕ್ರಮ ನಿರೂಪಿಸಿದರು.
03-10-26 05:30 pm
HK News Staffer
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
04-10-26 07:07 pm
HK News Staffer
Smith Machar, benjamin netanyahu: ಸ್ಮಿತ್ ಮಚ್ಚ...
04-10-26 12:34 pm
Smith Machar, Mankind Pharma: 180 ಜೀವ ಉಳಿಸಿದ...
03-10-26 01:00 pm
ಹನುಮಾನ್ ಚಾಲೀಸಾ ಜಪಿಸುತ್ತಲೇ ಕಾಕ್ಪಿಟ್ ಬಾಗಿಲು ತೆ...
02-10-26 05:28 pm
ಇಸ್ರೇಲ್ ತೆರಳುತ್ತಿದ್ದ ವಿಮಾನ ಹೈಜಾಕ್ ಯತ್ನ ? ಒಮಾ...
02-10-26 10:23 am
03-10-26 09:56 pm
HK News Staffer
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
KSCA, Mangaluru: ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಕ...
02-10-26 05:20 pm
Sowjanya case, Lokesh Jagalsar: ಸೌಜನ್ಯ ಪ್ರಕರಣ...
02-10-26 10:25 am
Madoor Yusuf Murder Case: ಜೈಲಿನಲ್ಲಿ ಮಾಡೂರು ಯೂ...
01-10-26 10:45 pm
04-10-26 12:51 pm
HK News Staffer
ಪುತ್ತೂರು ; ವಿದ್ಯುತ್ ಸ್ಪರ್ಶಿಸಿ ಪವರ್ಮ್ಯಾನ್ ಸಾ...
03-10-26 08:46 pm
Mangalore Crime, Mangalore Police, Delhi Thie...
03-10-26 06:39 pm
Kasaragod crime: ಕಾಸರಗೋಡು ; ಮನೆ ಮೇಲೆ ಬಿದ್ದ ಬೋ...
03-10-26 05:05 pm
Infra Developers, Vasudevan: ಬೆಂಗಳೂರಿನಲ್ಲಿ ಫ್...
03-10-26 03:41 pm