ಬ್ರೇಕಿಂಗ್ ನ್ಯೂಸ್
06-10-26 09:21 pm HK News Staffer ಕರಾವಳಿ
ಮಂಗಳೂರು, ಅ.6 : ಮತದಾರರ ಪಟ್ಟಿಯ ಪರಿಷ್ಕರಣೆ ಎನ್ನುವುದು ಮತಪಟ್ಟಿಯ ಶುದ್ಧಗೊಳಿಸುವ ಪ್ರಕ್ರಿಯೆ. ಆದರೆ ಕಾಂಗ್ರೆಸ್ ಇದರ ಕುರಿತಾಗಿ ವಿನಾಕಾರಣ ಜನರಲ್ಲಿ ಗೊಂದಲ ಸೃಷ್ಟಿಸುತ್ತಿದೆ. ಅದರ ನೆಪದಲ್ಲಿ ದೇಶಾದ್ಯಂತ ಅರಾಜಕತೆ ಸೃಷ್ಟಿಸುವ ಯತ್ನ ಮಾಡುತ್ತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್ಐಆರ್ ಪ್ರಕ್ರಿಯೆಯಲ್ಲಿ ರಾಜಕೀಯ ಪಕ್ಷಗಳಿಗೆ ಬೂತ್ ಮಟ್ಟದ ಏಜೆಂಟರಿಗೆ (ಬಿಎಲ್ಎ–2) ಜವಾಬ್ದಾರಿ ನೀಡಲಾಗುತ್ತದೆ. ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಸಹಕರಿಸುವುದು ಅವರ ಕರ್ತವ್ಯ. ಆದರೆ, ಕಾಂಗ್ರೆಸ್, ಬಿಎಲ್ಎ–2ಗಳನ್ನು ಭಯಪಡಿಸುವ, ಈ ಪ್ರಕ್ರಿಯೆಯಲ್ಲಿ ತೊಡಗಿರುವ ಅಧಿಕಾರಿಗಳ ಕೆಲಸಕ್ಕೆ ಅಡ್ಡಿಪಡಿಸುವ ಕೆಲಸ ಮಾಡುತ್ತಿದೆ ಎಂದು ದೂರಿದರು.
ಕಾಂಗ್ರೆಸಿಗರಿಗೆ ಈ ದೇಶದ ಸಂವಿಧಾನ, ಕಾನೂನು ಬಗ್ಗೆ ಗೌರವ ಇಲ್ಲ. ಮುಖ್ಯಮಂತ್ರಿಯೊಬ್ಬರು ಚುನಾವಣಾ ಆಯೋಗದ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಾರೆಂದರೆ ಅರ್ಥ ಏನೆಂದು ಪ್ರಶ್ನಿಸಿದ ಅವರು, ಸಾಂವಿಧಾನಿಕ ಸಂಸ್ಥೆಗಳ ಕಾರ್ಯವಿಧಾನ ಮತ್ತು ಪ್ರತಿಭಟನೆಗೆ ಇರುವ ಸ್ಥಳದ ಬಗ್ಗೆ ಕನಿಷ್ಠ ಅರಿವು ಇರಬೇಕು. ಚುನಾವಣಾ ಆಯೋಗದ ಕಾರ್ಯದಲ್ಲಿ ರಾಜಕೀಯ ಹಸ್ತಕ್ಷೇಪ ಮಾಡುವುದು ಸರಿಯಲ್ಲ. ಮುಖ್ಯಮಂತ್ರಿ ವಿರುದ್ಧ ಎಫ್ಐಆರ್ ದಾಖಲಿಸಬೇಕು ಎಂದು
ಹೇಳಿದರು.
ಕರ್ನಾಟಕದಲ್ಲಿ 5.54 ಕೋಟಿಗೂ ಅಧಿಕ ಮತದಾರರಿದ್ದರೂ ಕರಡು ಮತದಾರರ ಪಟ್ಟಿಯಲ್ಲಿ ಸುಮಾರು 4.46 ಕೋಟಿ ಮತದಾರರಿದ್ದಾರೆ ಎಂದು ಕಾಂಗ್ರೆಸ್ ಹೇಳುತ್ತಿದ್ದು ಆಮೂಲಕ ಜನರಲ್ಲಿ ಗೊಂದಲ ಸೃಷ್ಟಿಸುತ್ತಿದೆ. ಕರಡು ಮತದಾರರ ಪಟ್ಟಿ ಅಂತಿಮ ಅಲ್ಲ. ಕರಡು ಪಟ್ಟಿ ಪ್ರಕಟವಾದ ಬಳಿಕವೂ ಹೆಸರು ಸೇರ್ಪಡೆ, ತಿದ್ದುಪಡಿ ಮತ್ತು ಆಕ್ಷೇಪಣೆ ಸಲ್ಲಿಸಲು ಅವಕಾಶ ಇದೆ. ಆದರೆ ಚುನಾವಣಾ ಆಯೋಗದ ಪ್ರಕ್ರಿಯೆ ವಿರುದ್ಧವೇ ಜನರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿರುವುದು ಅಕ್ಷಮ್ಯ. ಇದನ್ನು ಬಿಜೆಪಿ ಖಂಡಿಸುತ್ತದೆ ಎಂದರು.
ಫಾರ್ಮ್–7 ಅರ್ಜಿ ಕೊಟ್ಟ ಮಾತ್ರಕ್ಕೆ ಮತದಾರರ ಹೆಸರುಗಳನ್ನು ಏಕಪಕ್ಷೀಯವಾಗಿ ಅಳಿಸಲು ಸಾಧ್ಯವಿಲ್ಲ. ಒಬ್ಬ ಮತದಾರ ಸ್ಥಳಾಂತರಗೊಂಡಿದ್ದಾನೆ, ಮೃತಪಟ್ಟಿದ್ದಾನೆ ಅಥವಾ ಭಾರತೀಯ ಪ್ರಜೆಯಲ್ಲ ಎಂಬ ಅನುಮಾನವಿದ್ದಲ್ಲಿ ಫಾರ್ಮ್–7 ಮೂಲಕ ಯಾರಿಗೂ ಆಕ್ಷೇಪಣೆ ಸಲ್ಲಿಸಬಹುದು. ಇದನ್ನು ಚುನಾವಣಾ ಅಧಿಕಾರಿಗಳು ಪರಿಶೀಲನೆ ನಡೆಸಿ, ಆಕ್ಷೇಪಣೆ ಸತ್ಯವೆಂದು ದೃಢಪಟ್ಟರೆ ಮಾತ್ರ ಹೆಸರು ತೆಗೆದುಹಾಕುವ ಪ್ರಕ್ರಿಯೆ ನಡೆಯುತ್ತದೆ ಎಂದರು.
ಫಾರ್ಮ್–7 ಮೂಲಕ ಅಲ್ಪಸಂಖ್ಯಾತ ಮತದಾರರನ್ನು ಟಾರ್ಗೆಟ್ ಮಾಡಲಾಗಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಬ್ರಿಜೇಶ್ ಚೌಟ, ಯಾರದ್ದೇ ಆಗಲಿ ಅಷ್ಟೊಂದು ಮತಗಳು ಡಿಲೀಟ್ ಆಗಿದ್ದರೆ, ಅಕ್ರಮವಾಗಿ ತೆಗೆದು ಹಾಕಲಾಗಿದೆ ಎಂಬುದಕ್ಕೆ ಕಾಂಗ್ರೆಸ್ ಬಳಿ ನಿರ್ದಿಷ್ಟ ದಾಖಲೆಗಳಿದ್ದರೆ ಚುನಾವಣಾ ಆಯೋಗದ ಮುಂದೆ ಮಂಡಿಸಲಿ. ಅಥವಾ ಅಂತಹ ಮತದಾರರನ್ನು ಕರೆತಂದು ತೋರಿಸಲಿ ಎಂದು ಸವಾಲು ಹಾಕಿದರು.
ಸಾಕ್ಷ್ಯವಿಲ್ಲದೆ ಆರೋಪ ಬೇಡ
ಮತದಾರರ ಹೆಸರುಗಳನ್ನು ಅಳಿಸಲಾಗುತ್ತಿದೆ ಎಂದು ಆರೋಪಿಸುವ ಮೊದಲು ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿ ಸಾಕ್ಷ್ಯಗಳನ್ನು ಸಾರ್ವಜನಿಕವಾಗಿ ನೀಡಬೇಕು ಎಂದು ಚೌಟ ಒತ್ತಾಯಿಸಿದರು. ಚುನಾವಣಾ ಆಯೋಗ, ಸಂಸತ್ತು, ಸುಪ್ರೀಂಕೋರ್ಟ್ ಸೇರಿದಂತೆ ಸಾಂವಿಧಾನಿಕ ಸಂಸ್ಥೆಗಳ ಬಗ್ಗೆ ಕಾಂಗ್ರೆಸ್ ನಿರಂತರವಾಗಿ ಅನುಮಾನ ಮೂಡಿಸುವ ಪ್ರಯತ್ನ ಮಾಡುತ್ತಿದೆ ಎಂದು ಆರೋಪಿಸಿದರು. ಎಸ್ಐಆರ್ ಎಂಬುದು ಮತದಾರರ ಪಟ್ಟಿಯನ್ನು ಶುದ್ಧೀಕರಿಸುವ ಹಾಗೂ ಅರ್ಹ ಮತದಾರರ ಹಕ್ಕನ್ನು ರಕ್ಷಿಸುವ ಪ್ರಕ್ರಿಯೆಯಾಗಿದೆ. ಅನರ್ಹರ ಹೆಸರುಗಳು ಪಟ್ಟಿಯಲ್ಲಿ ಉಳಿದರೆ ಅರ್ಹ ಮತದಾರರ ಮತದಾನದ ಮೌಲ್ಯಕ್ಕೂ ಧಕ್ಕೆಯಾಗುತ್ತದೆ. ಹೀಗಾಗಿ ಶುದ್ಧ ಮತದಾರರ ಪಟ್ಟಿ ಪ್ರತಿಯೊಬ್ಬ ಮತದಾರನ ಹಕ್ಕು ಎಂದು ಚೌಟ ಹೇಳಿದರು.
ಬಿಜೆಪಿ ಕಾರ್ಯಕರ್ತರಿಗೆ ಬೆದರಿಕೆ ಸಹಿಸಲ್ಲ
ಎಸ್ಐಆರ್ ಪ್ರಕ್ರಿಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಕಾನೂನುಬದ್ಧವಾಗಿ ಭಾಗವಹಿಸುತ್ತಿದ್ದಾರೆ. ಅವರನ್ನು ಬೆದರಿಸುವ ಅಥವಾ ಒತ್ತಡಕ್ಕೆ ಒಳಪಡಿಸುವ ಪ್ರಯತ್ನ
ನಡೆದರೆ ಬಿಜೆಪಿ ಸುಮ್ಮನಿರುವುದಿಲ್ಲ ಎಂದು ಎಚ್ಚರಿಸಿದ ಅವರು, ಬಿಎಲ್ಎ ಆಕ್ಷೇಪಣೆಗೆ ಉತ್ತರ ಬೆದರಿಕೆ ಒಡ್ಡುವುದಲ್ಲ. ನಿಗದಿತ ಕಾನೂನು ಪ್ರಕ್ರಿಯೆಯ ಮೂಲಕವೇ ಮತದಾರ ಪಟ್ಟಿಯನ್ನು ಪರಿಷ್ಕರಿಸಬೇಕು. ಕಾಂಗ್ರೆಸ್ ಎಸ್ಐಆರ್ ಪ್ರಕ್ರಿಯೆಗೆ ಸಹಕರಿಸುವ ಬದಲು ಕೋಮು ಬಣ್ಣ ನೀಡುವ ಪ್ರಯತ್ನ ಮಾಡುತ್ತಿದೆ ಎಂದು ಆರೋಪಿಸಿದರು. ಎಸ್ಐಆರ್ ಕುರಿತು ಸಾಕ್ಷ್ಯಾಧಾರವಿಲ್ಲದ ಆರೋಪಗಳು ಮುಂದುವರಿದರೆ ಚುನಾವಣೆ ಪ್ರಕ್ರಿಯೆ ಬಗ್ಗೆ ಜನರಲ್ಲಿ ಅನಗತ್ಯ ಅನುಮಾನ ಮೂಡುತ್ತದೆ. ಆರೋಪಗಳ ಬದಲಿಗೆ ನಿಗದಿತ ಪ್ರಕ್ರಿಯೆಯನ್ನು ಪಾಲಿಸಿ, ವಾಸ್ತವಾಂಶಗಳ ಮೇಲೆ ಚರ್ಚೆ ನಡೆಯಬೇಕು ಎಂದು ಚೌಟ ಹೇಳಿದರು. ಪ್ರಮುಖರಾದ ಪೂಜಾ ಪೈ, ಪೂರ್ಣಿಮಾ, ಸುಜಿತ್ ಪ್ರತಾಪ್, ರಾಜಗೋಪಾಲ ರೈ, ವಸಂತ ಜೆ.ಪೂಜಾರಿ, ಜೀವನ್ ಕುಮಾರ್ ತೊಕ್ಕೊಟ್ಟು, ಸಂಜಯ ಪ್ರಭು ಉಪಸ್ಥಿತರಿದ್ದರು.
Dakshina Kannada BJP MP Captain Brijesh Chowta has accused the Congress of creating unnecessary confusion among the public over the Special Intensive Revision (SIR) of electoral rolls, asserting that the exercise is intended to clean and update voter lists.
06-10-26 06:17 pm
HK News Staffer
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
06-10-26 02:46 pm
HK News Staffer
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
Nigerian aircraft: ನೈಜೀರಿಯಾದಲ್ಲಿ ವಾಯುಪಡೆ ವಿಮಾ...
06-10-26 09:30 am
Emergency Funds: ಆರ್ಥಿಕ ಸ್ಥಿತಿ ಮತ್ತಷ್ಟು ಹದಗೆಡ...
05-10-26 08:56 pm
06-10-26 09:21 pm
HK News Staffer
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
06-10-26 05:36 pm
HK News Staffer
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm
DIG Somashekar: ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ...
05-10-26 08:26 pm
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm