ಬ್ರೇಕಿಂಗ್ ನ್ಯೂಸ್
11-10-26 05:37 pm Mangaluru Staffer ಕರಾವಳಿ
ಉಳ್ಳಾಲ, ಅ.11: ಸೋಮೇಶ್ವರದ ಪೆರಿಬೈಲ್ ಬೀಚಲ್ಲಿ ನಿನ್ನೆ(ಶನಿವಾರ) ಸಂಜೆ ಸಮುದ್ರಪಾಲಾಗಿದ್ದ ಉಜಿರೆ ಎಸ್ ಡಿಎಂ ಕಾಲೇಜಿನ ಪ್ರಥಮ ವರ್ಷದ ಬಿ.ಕಾಂ ವಿದ್ಯಾರ್ಥಿ, ಚಿಕ್ಕಮಂಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕಮ್ಮರಡಿ ನಿವಾಸಿ ಶೋಭಿತ್ ಎಂ. ಗೌಡ(18) ಅವರ ಮೃತದೇಹವು ಇಂದು ಪೆರಿಬೈಲ್ ಸಮುದ್ರದಲ್ಲಿ ಪತ್ತೆಯಾಗಿದೆ.
ಉಜಿರೆ ಎಸ್ ಡಿಎಂ ಕಾಲೇಜಿನ ಒಂಭತ್ತು ಮಂದಿ ವಿದ್ಯಾರ್ಥಿಗಳು ಶನಿವಾರ ಕುತ್ತಾರಿನ ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿದ ಬಳಿಕ ಸಂಜೆ ವೇಳೆ ಸೋಮೇಶ್ವರದ ಪೆರಿಬೈಲ್ ಬೀಚ್ ಗೆ ತೆರಳಿದ್ದರು. ಈ ವೇಳೆ ಶೋಭಿತ್ ಮತ್ತು ಆಕಾಶ್ ಎಂಬವರು ಸಮುದ್ರದಲ್ಲಿ ನೀರಾಟಕ್ಕಿಳಿದಿದ್ದು, ಅಲೆಗಳ ರಭಸಕ್ಕೆ ಇಬ್ಬರೂ ನೀರು ಪಾಲಾಗಿದ್ದರು. ಆಕಾಶ್ ಈಜು ತಿಳಿದಿದ್ದ ಕಾರಣ ಈಜಿ ದಡ ಸೇರಿ ಪ್ರಾಣಾಪಾಯದಿಂದ ಪಾರಾಗಿದ್ದ.
ಸಮುದ್ರ ಪಾಲಾಗಿದ್ದ ವಿದ್ಯಾರ್ಥಿ ಶೋಭಿತ್ ಗಾಗಿ ತಡರಾತ್ರಿ ವರೆಗೂ ಹುಡುಕಾಟ ನಡೆಸಲಾಗಿತ್ತು. ಎಸ್ ಡಿಆರ್ ಎಫ್, ಕರಾವಳಿ ಕಾವಲು ಪಡೆ, ಗೃಹ ರಕ್ಷಕ ದಳ, ಉಳ್ಳಾಲ ಪೊಲೀಸರು ಶೋಧ ಕಾರ್ಯದಲ್ಲಿ ತೊಡಗಿಸಿದ್ದರು. ಇಂದು ಮಧ್ಯಾಹ್ನದ ವೇಳೆ ಉಳ್ಳಾಲ ವಲಯ ನಾಡದೋಣಿ ಹಾಗೂ ಗಿಲ್ನೆಟ್ ಮೀನುಗಾರರ ಸಂಘದ ಪ್ರಮುಖರಾದ ಆಸಿಫ್ ಎಂ.ಬಿ, ನಿಝಾಮ್ ಕೋಟೆಪುರ, ನಝೀರ್ ಕೋಡಿ, ರಝಾಕ್ ಕೋಟೆಪುರ, ಮುಸ್ತಾಫ ಕೋಟೆಪುರ, ಇರ್ಫಾನ್ ಕೋಟೆಪುರ ಅವರುಗಳು ನಾಡ ದೋಣಿಯಲ್ಲಿ ಶೋಧ ಕಾರ್ಯಾಚರಣೆ ನಡೆಸಿ ಉಚ್ಚಿಲ ಪೆರಿಬೈಲ್ ಬಳಿಯ ಸಮುದ್ರದಲ್ಲಿ ತೇಲುತ್ತಿದ್ದ ಶೋಭಿತ್ ಮೃತದೇಹವನ್ನ ಪತ್ತೆ ಮಾಡಿದ್ದಾರೆ. ನಾಡ ದೋಣಿಯಲ್ಲೇ ಕೋಟೆಪುರ ಸಮುದ್ರ ತೀರಕ್ಕೆ ತರಲಾಗಿದ್ದ ಮೃತದೇಹವನ್ನು ಉಳ್ಳಾಲ ಪೊಲೀಸರು ಮರಣೋತ್ತರ ಪರೀಕ್ಷೆಗೆ ರವಾನಿಸಿ, ಪ್ರಕರಣ ದಾಖಲಿಸಿದ್ದಾರೆ. ಮೃತ ಶೋಭಿತ್ ಪೋಷಕರಿಗೆ ಏಕೈಕ ಮಗನೆಂಬ ಮಾಹಿತಿ ಲಭ್ಯವಾಗಿದೆ.
The body of a student from Chikkamagaluru, who was swept away by strong waves at Someshwar Beach, has been recovered. According to reports, a group of nine students from SDM College had visited the beach. During their visit, one of the students was swept into the sea by powerful waves.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
11-10-26 10:28 pm
HK News Desk
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
11-10-26 06:35 pm
HK News Staffer
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm