ಬ್ರೇಕಿಂಗ್ ನ್ಯೂಸ್
12-10-26 11:30 am HK News Staffer ಕರಾವಳಿ
ಮಂಗಳೂರು, ಅ.12 : ಮಂಗಳೂರು ದಸರಾ ಸಂಭ್ರಮದ ನಡುವೆಯೇ ಸೆಮಿಸ್ಟರ್ ಪರೀಕ್ಷೆಗಳನ್ನು ಆಯೋಜಿಸಿರುವುದಕ್ಕೆ ವಿರೋಧ ವ್ಯಕ್ತಪಡಿಸಿ, ಮಂಗಳೂರಿನ ಪ್ರಸಿದ್ಧ ಸೈಂಟ್ ಆಗ್ನೆಸ್ ಕಾಲೇಜಿನ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದಾರೆ. ದಸರಾ ರಜೆ ನೀಡದೆ ಪರೀಕ್ಷೆ ನಡೆಸುತ್ತಿರುವ ಕಾಲೇಜು ಆಡಳಿತ ಮಂಡಳಿಯ ನಿರ್ಧಾರವನ್ನು ಖಂಡಿಸಿ, ವಿದ್ಯಾರ್ಥಿನಿಯರು ಪರೀಕ್ಷೆ ಬಹಿಷ್ಕರಿಸಿ ಕಾಲೇಜಿನ ಗೇಟ್ ಎದುರು ಧರಣಿ ಕುಳಿತಿದ್ದಾರೆ. ಪ್ರತಿಭಟನೆಗೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಬೆಂಬಲ ನೀಡಿದೆ.
ಮಂಗಳೂರಿನ ಬೆಂದೂರ್ವೆಲ್ ಸಮೀಪದ ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ಪದವಿ ವಿದ್ಯಾರ್ಥಿಗಳಿಗೆ ಅಕ್ಟೋಬರ್ 12ರಿಂದ 28ರ ವರೆಗೆ ಸೆಮಿಸ್ಟರ್ ಪರೀಕ್ಷೆಗಳನ್ನು ನಿಗದಿಪಡಿಸಲಾಗಿದೆ. ಮಂಗಳೂರಿನಲ್ಲಿ ದಸರಾ ಹಬ್ಬದ ಸಂದರ್ಭದಲ್ಲೇ ಪರೀಕ್ಷೆಗಳನ್ನು ಆಯೋಜಿಸಿರುವುದು ವಿದ್ಯಾರ್ಥಿಗಳ ಅಸಮಾಧಾನಕ್ಕೆ ಕಾರಣವಾಗಿದೆ.
ಮಂಗಳೂರು ದಸರಾ ಸಂದರ್ಭದಲ್ಲಿ ದೇವಾಲಯಗಳ ಧಾರ್ಮಿಕ ಕಾರ್ಯಕ್ರಮಗಳು, ಸಾಂಸ್ಕೃತಿಕ ಚಟುವಟಿಕೆಗಳು ಹಾಗೂ ವಿವಿಧ ಆಚರಣೆಗಳು ನಡೆಯುತ್ತವೆ. ಇಂತಹ ಸಂದರ್ಭದಲ್ಲಿ ಪರೀಕ್ಷೆಗಳನ್ನು ನಡೆಸುವುದರಿಂದ ಹಬ್ಬದ ಆಚರಣೆಗಳಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ ಎಂದು ವಿದ್ಯಾರ್ಥಿನಿಯರು ಆಕ್ಷೇಪಿಸಿದ್ದಾರೆ. ನೂರಾರು ವಿದ್ಯಾರ್ಥಿನಿಯರು ಪರೀಕ್ಷೆ ಬಹಿಷ್ಕರಿಸಿ ಕಾಲೇಜು ಗೇಟ್ ಎದುರು ಪ್ರತಿಭಟನೆ ನಡೆಸಿದ್ದು, ಪರೀಕ್ಷೆಗಳನ್ನು ಮುಂದೂಡಬೇಕು ಎಂದು ಆಗ್ರಹಿಸಿದ್ದಾರೆ.








ಮನವಿ ಸಲ್ಲಿಸಿದರೂ ಸ್ಪಂದನೆ ಇಲ್ಲ..
ಪರೀಕ್ಷೆಗಳನ್ನು ಮುಂದೂಡುವಂತೆ ಕಾಲೇಜು ಆಡಳಿತ ಮಂಡಳಿಗೆ ಮೊದಲೇ ಮನವಿ ಸಲ್ಲಿಸಲಾಗಿತ್ತು. ಆದರೆ, ವಿದ್ಯಾರ್ಥಿಗಳ ಮನವಿಗೆ ಸೂಕ್ತ ಸ್ಪಂದನೆ ದೊರೆತಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಪರಿಗಣಿಸದೆ ಪರೀಕ್ಷೆ ನಡೆಸಲು ಮುಂದಾಗಿರುವುದು ಸರಿಯಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪರೀಕ್ಷೆ ಮುಂದೂಡುವಂತೆ ಆಗ್ರಹಿಸಿ ವಿದ್ಯಾರ್ಥಿ ಸಂಘಟನೆಗಳು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೂ ದೂರು ಸಲ್ಲಿಸಿವೆ. ದಸರಾ ಹಬ್ಬದ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಉಂಟಾಗುತ್ತಿರುವ ಸಮಸ್ಯೆಯನ್ನು ಪರಿಹರಿಸಿ, ಪರೀಕ್ಷೆಗಳನ್ನು ಮುಂದೂಡಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿವೆ. ಸದ್ಯ ಕಾಲೇಜಿನ ಗೇಟ್ ಎದುರು ಪ್ರತಿಭಟನೆ ಮುಂದುವರಿದಿದ್ದು, ಪರೀಕ್ಷೆಗಳ ವೇಳಾಪಟ್ಟಿಯ ಕುರಿತು ಕಾಲೇಜು ಆಡಳಿತ ಮಂಡಳಿ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುದನ್ನು ವಿದ್ಯಾರ್ಥಿಗಳು ಕಾಯುತ್ತಿದ್ದಾರೆ.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm