ಬ್ರೇಕಿಂಗ್ ನ್ಯೂಸ್
13-10-26 07:50 pm HK News Staffer ಕರಾವಳಿ
ಮಂಗಳೂರು, ಅ.13: ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳ ಧಾರ್ಮಿಕ ಭಾವನೆ, ಸಂವೇದನೆ ಹಾಗೂ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ನಿರ್ಧಾರ ಕೈಗೊಳ್ಳಬೇಕು. ಯಾವುದೇ ಧರ್ಮ ಅಥವಾ ಜಾತಿಗೆ ಸೀಮಿತವಾಗಿರದೆ, ಎಲ್ಲ ವಿದ್ಯಾರ್ಥಿಗಳಿಗೂ ಅನ್ವಯಿಸುವ ಸಾಮಾನ್ಯ ನಿಯಮಗಳನ್ನು ಪಾಲಿಸಬೇಕು. ಧಾರ್ಮಿಕ ಕಾರ್ಯಕ್ರಮಗಳು ಅಥವಾ ಸೂಕ್ಷ್ಮ ಸಂದರ್ಭಗಳಲ್ಲಿ ರಜೆ ನೀಡುವ ಹಾಗೂ ಪರೀಕ್ಷೆಗಳನ್ನು ಮುಂದೂಡುವ ಬಗ್ಗೆ ಶಿಕ್ಷಣ ಸಂಸ್ಥೆಗಳು ಮಾನವೀಯವಾಗಿ ಚಿಂತಿಸಬೇಕು ಎಂದು ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ಹೇಳಿದ್ದಾರೆ.
ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿನಿಯರ ಮೇಲೆ ಪೊಲೀಸರು ಕೈ ಮಾಡಿರುವುದು ಅಕ್ಷಮ್ಯ. ಮಾಧ್ಯಮಗಳಲ್ಲಿ ಪ್ರಸಾರವಾದ ದೃಶ್ಯಗಳು ಪೊಲೀಸರು ಕೈಮಾಡಿರುವುದು, ವರ್ತನೆ ಅತಿರೇಕದಿಂದ ಕೂಡಿತ್ತು ಎಂಬುದನ್ನು ತೋರಿಸಿದೆ. ವಿದ್ಯಾರ್ಥಿಗಳ ಮನವಿಯನ್ನು ಆಲಿಸುವ ಬದಲು ಅವರ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನ ನಡೆದಿದೆ.
ವಿದ್ಯಾರ್ಥಿಗಳು ರಜೆಗಾಗಿ ಹಠ ಹಿಡಿದಿರಲಿಲ್ಲ. ಪರೀಕ್ಷೆಯನ್ನು ಮುಂದೂಡುವಂತೆ ಮನವಿ ಮಾಡಿದ್ದರು. ಈ ವಿಚಾರವನ್ನು ಸಂಬಂಧಪಟ್ಟ ಅಧಿಕಾರಿಗಳು ಮಾತುಕತೆಯ ಮೂಲಕ ಪರಿಹರಿಸಬಹುದಿತ್ತು. ಆದರೆ, ಸಣ್ಣ ವಿಚಾರವನ್ನು ದೊಡ್ಡದಾಗಿಸಿ ಸಂಘರ್ಷಕ್ಕೆ ಅವಕಾಶ ಮಾಡಿಕೊಡಲಾಗಿದೆ ಎಂದು ದೂರಿದರು. ಬಂಧನದ ಬಳಿಕ ವಿದ್ಯಾರ್ಥಿಗಳ ವಿರುದ್ಧ ಬಾಂಡ್ ಓವರ್ ಕ್ರಮ ಕೈಗೊಳ್ಳುವ ಸಾಧ್ಯತೆ ವ್ಯಕ್ತವಾಗಿತ್ತು. ಈ ಕುರಿತು ಅಧಿಕಾರಿಗಳೊಂದಿಗೆ ಮಾತನಾಡಿ, ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗುವ ಕ್ರಮ ಕೈಗೊಳ್ಳದಂತೆ ತಿಳಿಸಿದ್ದೇನೆ. ಬಳಿಕ ಬಾಂಡ್ ಓವರ್ ಕ್ರಮ ಕೈಗೊಂಡಿಲ್ಲ ಎಂದು ಹೇಳಿದರು.
ಅಭಿವೃದ್ಧಿ ಕಾರ್ಯಗಳು ಕುಂಠಿತ
ಜಿಲ್ಲೆಯಲ್ಲಿ ಕುಡಿಯುವ ನೀರು ಸೇರಿದಂತೆ ಹಲವು ಮೂಲಭೂತ ಸಮಸ್ಯೆಗಳು ಬಗೆಹರಿಯದೆ ಉಳಿದಿವೆ. ಅಭಿವೃದ್ಧಿ ಕಾರ್ಯಗಳ ಬದಲು ಘೋಷಣೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಸರ್ಕಾರದ ಆರ್ಥಿಕ ಸ್ಥಿತಿಯ ಬಗ್ಗೆಯೂ ಪ್ರಶ್ನೆಗಳಿವೆ. ರೈತರ ಬೆಳೆ ವಿಮೆಯ ಅರ್ಹತಾ ಮಾನದಂಡಗಳ ಬದಲಾವಣೆ ಹಾಗೂ ಅತಿವೃಷ್ಟಿ-ಅನಾವೃಷ್ಟಿಯ ಸಂದರ್ಭದಲ್ಲಿ ರೈತರಿಗೆ ಸೂಕ್ತ ನೆರವು ಸಿಗದಿರುವುದು ಕಳವಳಕಾರಿ ಎಂದು ಹೇಳಿದರು.
ಮೂಡುಶೆಡ್ಡೆ ಪ್ರದೇಶದಲ್ಲಿ ಧಾರ್ಮಿಕ ಸ್ಥಳಗಳ ಸಮೀಪ ಕಬರಸ್ತಾನಕ್ಕೆ ಜಾಗ ಒದಗಿಸುವ ವಿಚಾರದಲ್ಲಿ ಸ್ಥಳೀಯರ ಭಾವನೆಗಳನ್ನು ಅಧಿಕಾರಿಗಳು ಪರಿಗಣಿಸಬೇಕು. ಅಗತ್ಯವಿದ್ದರೆ ಪರ್ಯಾಯ ಜಾಗ ಗುರುತಿಸಿ ಸಮಸ್ಯೆ ಬಗೆಹರಿಸಬಹುದು. ಅಧಿಕಾರಿಗಳು ಸ್ಥಳೀಯರೊಂದಿಗೆ ಚರ್ಚಿಸದೆ ನಿರ್ಧಾರ ಕೈಗೊಂಡರೆ ಸಂಘರ್ಷಕ್ಕೆ ಕಾರಣವಾಗಬಹುದು ಎಂದು ಎಚ್ಚರಿಸಿದರು.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm