ಬ್ರೇಕಿಂಗ್ ನ್ಯೂಸ್
14-10-26 10:45 pm HK News Staffer ಕರಾವಳಿ
ಮಂಗಳೂರು, ಅ.14: ದಸರಾ ಹಬ್ಬದ ಸಂದರ್ಭ ಪರೀಕ್ಷೆ ನಡೆಸುವುದನ್ನು ಪ್ರಶ್ನಿಸಿ ವಿದ್ಯಾರ್ಥಿಗಳು ಪ್ರತಿಭಟಿಸಿದ ಸಂದರ್ಭ ಎಬಿವಿಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು ವಿದ್ಯಾರ್ಥಿಗಳಿಂದ ಮುಂದೆ ಇಂತಹ ಪ್ರತಿಭಟನೆಗಳಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿ ಒಂದು ಲಕ್ಷದ ಬಾಂಡ್ ಬರೆಯುವಂತೆ ಒತ್ತಡ ಹೇರಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿದ್ಯಾರ್ಥಿಗಳ ಮೇಲೆ ಇಂತಹ ಧೋರಣೆ ತೋರುವುದು ಯಾವ ನ್ಯಾಯ. ಅಲ್ಲದೆ, ಶಾಂತಿಯುತ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಕೈಮಾಡಿದ್ದಾರೆ. ಇವರಿಗೆ ವಿದ್ಯಾರ್ಥಿಗಳ ಮೇಲೆ ಕೈಮಾಡುವಷ್ಟು ಧೈರ್ಯವೇ ಎಂದು ಎಬಿವಿಪಿ ನಾಯಕರು ಪೊಲೀಸರನ್ನು ಪ್ರಶ್ನಿಸಿದ್ದಾರೆ.
ಮಂಗಳೂರು ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಬಿವಿಪಿ ರಾಜ್ಯ ಸಹ ಕಾರ್ಯದರ್ಶಿ ಸುವಿತ್ ಶೆಟ್ಟಿ, ಮಂಗಳೂರಿನಲ್ಲಿ ಎಷ್ಟೊಂದು ಪ್ರತಿಭಟನೆಗಳು ನಡೆದಿಲ್ಲ. ಪ್ರತಿ ಬಾರಿಯೂ ಬಾಂಡ್ ಬರೆಸಿಕೊಂಡಿದ್ದೀರಾ.. ಇಲ್ಲಿ ಎಬಿವಿಪಿ ವಿದ್ಯಾರ್ಥಿಗಳೆಂದು ಹತ್ತಿಕ್ಕಲು ನೋಡಿದ್ದೀರಾ ಎಂದು ಅವರು ಪ್ರಶ್ನಿಸಿದರು.
ದಸರಾ ಸಂದರ್ಭ ಪರೀಕ್ಷೆಯನ್ನು ವಿರೋಧಿಸಿ ವಿದ್ಯಾರ್ಥಿಗಳ ಪರವಾಗಿ ಕಾಲೇಜು ಆಡಳಿತ ಮಂಡಳಿಯ ಜತೆ ಮಾತುಕತೆ ನಡೆಸಲು ಎಬಿವಿಪಿ ನಾಯಕರು ತೆರಳಿದ್ದಾಗ ಅವರಲ್ಲಿ ಮಾತನಾಡುವ ಸೌಜನ್ಯ ತೋರಿಸಿಲ್ಲ. ಹಾಗಾಗಿ ಅ. 12ರಂದು ಕಾಲೇಜಿನ ನಿರ್ಧಾರದ ವಿರುದ್ಧ ವಿದ್ಯಾರ್ಥಿಗಳು ಹೋರಾಟ ನಡೆಸಲು ನಿರ್ಧರಿಸಿದ್ದು ಅದಕ್ಕೆ ಎಬಿವಿಪಿ ಬೆಂಬಲ ನೀಡಿತ್ತು ಎಂದವರು ಹೇಳಿದರು.
ಪರೀಕ್ಷೆ ನಡೆಯುತ್ತಿದ್ದ ಸಂದರ್ಭದಲ್ಲಿ ಶಿಕ್ಷಣ ಸಂಸ್ಥೆಯೊಂದರ ಎದುರು ಹೋರಾಟ ನಡೆಸುವ ಬಗ್ಗೆ ಪೊಲೀಸ್ ಇಲಾಖೆಯಿಂದ ಅನುಮತಿ ಪಡೆಯಲಾಗಿತ್ತೇ ಎಂಬ ಪ್ರಶ್ನೆಗೆ, ನಾವು ಪ್ರತಿಭಟನೆಯ ಉದ್ದೇಶದಿಂದ ಹೋಗಿರಲಿಲ್ಲ. ಹಾಗಂತ, ಪೊಲೀಸರು ವಿದ್ಯಾರ್ಥಿಗಳ ಮೇಲೆ ಕೈಮಾಡಿದ್ದು ಅಕ್ಷಮ್ಯ. ಎಸಿಪಿ ರವೀಶ್ ನಾಯ್ಕ್ ನೇತೃತ್ವದಲ್ಲಿ ಈ ಕೆಲಸ ಆಗಿದ್ದು ಅವರನ್ನು ಹೊಣೆಯಾಗಿಸಿ ಅಮಾನತು ಮಾಡಬೇಕು ಎಂದು ಆಗ್ರಹಿಸಿದರು.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 10:45 pm
HK News Staffer
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm