ಬ್ರೇಕಿಂಗ್ ನ್ಯೂಸ್
16-10-26 10:28 pm HK News Desk ಕರಾವಳಿ
ಉಳ್ಳಾಲ, ಅ.16: ಎಸ್ ಐಆರ್ ಪ್ರಕ್ರಿಯೆಯಲ್ಲಿ ದೇಶಾದ್ಯಂತ ಕೋಟ್ಯಾಂತರ ಮತದಾರರ ಹೆಸರುಗಳನ್ನ ಅಳಿಸುವ ಕಾರ್ಯಕ್ಕೆ ಚುನಾವಣಾ ಆಯೋಗ ಕೈಹಾಕಿದೆ. ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡುವುದಾದರೆ, ಇವರು ಇನ್ನು ಯಾರನ್ನೂ ಬಿಡಲಾರರೆಂಬ ಪರಿಸ್ಥಿತಿ ನಿರ್ಮಾಣವಾಗಿದೆ. ಚುನಾವಣಾ ಆಯೋಗದ ಮುಖ್ಯಸ್ಥ ಜ್ಞಾನೇಶ್ ಕುಮಾರ್ ರಾಜೀನಾಮೆ ಕೊಡಲೇಬೇಕಾಗಿದೆ. ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದ ಯುವಶಕ್ತಿಯನ್ನು ಇಂದು ಓಟಿಗಾಗಿ ಸಂಗ್ರಾಮ ನಡೆಸುವ ಸ್ಥಿತಿಗೆ ಬಿಜೆಪಿಗರು ತಳ್ಳಿದ್ದಾರೆಂದು ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಮತಾ ಡಿ.ಎಸ್.ಗಟ್ಟಿ ಆರೋಪಿಸಿದರು.
ಎಸ್ ಐಆರ್ ವಿರುದ್ಧ ಹಾಗೂ ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಮಂಗಳೂರು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ತೊಕ್ಕೊಟ್ಟು ಕೇಂದ್ರ ಬಸ್ಸು ನಿಲ್ದಾಣದಲ್ಲಿ ಶುಕ್ರವಾರ ಸಂಜೆ ನಡೆದ ಅಹೋರಾತ್ರಿ ಧರಣಿಯನ್ನುದ್ಧೇಶಿಸಿ ಅವರು ಮಾತನಾಡಿದರು. ಯುವಕರೇ ದೇಶದ ಶಕ್ತಿಯಾಗಿದ್ದು ಇಡೀ ದೇಶದ ಪ್ರಜೆಗಳ ಒಳಿತಿಗಾಗಿ ನಡೆಯುತ್ತಿರುವ ಪ್ರತಿಭಟನೆ ಇದಾಗಿದೆಯೆಂದರು.




ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪ್ರಶಾಂತ್ ಕಾಜವ ಮಾತನಾಡಿ ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥರಾದ ಜ್ಞಾನೇಶ್ ಕುಮಾರನ್ನ ಕೂಡಲೇ ಬಂಧಿಸಬೇಕು. ಯುವಜನತೆ ಎಚ್ಚೆತ್ತಾಗಲೇ ಎಸ್ ಐಆರ್ ಸಮಸ್ಯೆ ಬಗೆಹರಿಯಲು ಸಾಧ್ಯ. ಯೂತ್ ಕಾಂಗ್ರೆಸ್ ಸದಸ್ಯರು ಪ್ರತೀ ಕಾಲೇಜುಗಳಿಗೆ ತೆರಳಿ ಯುವ ಸಮುದಾಯವನ್ನ ಒಗ್ಗೂಡಿಸಿ ಎಸ್ ಐಆರ್ ವಿರುದ್ಧ ಪ್ರತಿಭಟಿಸಬೇಕಿದೆ. ಜ್ಞಾನೇಶ್ ಅವರನ್ನ ಬಂಧಿಸದಿದ್ದರೆ ನಿರಂತರ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳುವುದಾಗಿ ಅವರು ಎಚ್ಚರಿಸಿದರು.
ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಶೆಟ್ಟಿ ಬೋಳಿಯಾರ್, ಯೂತ್ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಸುರಯ್ಯ ಅಂಜುಮ್, ಮಂಗಳೂರು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನವಾಝ್ ನರಿಂಗಾನ, ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ಮುಸ್ತಾಫ ಹರೇಕಳ, ಜಬ್ಬಾರ್ ಬೋಳಿಯಾರ್, ಇರಾ ಗ್ರಾ.ಪಂ ಮಾಜಿ ಅಧ್ಯಕ್ಷ ರಝಾಕ್ ಕುಕ್ಕಾಜೆ, ಗ್ಯಾರಂಟಿ ಅನುಷ್ಟಾನ ಸಮಿತಿ ತಾಲೂಕು ಅಧ್ಯಕ್ಷ ರಫೀಕ್ ಅಂಬ್ಲಮೊಗರು, ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಬಶೀರ್, ಪ್ರಮುಖರಾದ ಅಬ್ದುಲ್ ಶಕೀಲ್, ನಾಸಿರ್ ಸಾಮಾಣಿಗೆ, ಸಫ್ವಾನ್ ಕೆರೆಬೈಲು, ಮನ್ಸೂರ್ ಮಂಚಿಲ, ಪ್ರಕಾಶ್ ಪಿಂಟೊ ಮೊದಲಾದವರು ಉಪಸ್ಥಿತರಿದ್ದರು.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm