ಬ್ರೇಕಿಂಗ್ ನ್ಯೂಸ್
04-11-26 02:41 pm HK News Staffer ಕರಾವಳಿ
ಮಂಗಳೂರು, ನ.4: ಮೂಡುಬಿದ್ರೆ ಪೊಲೀಸ್ ಠಾಣೆ ವ್ಯಾಪ್ತಿಯ ಮಹಾವೀರ ಕಾಲೇಜು ಬಳಿ ರಸ್ತೆ ಗುಂಡಿ ಬಿದ್ದ ನೆಪದಲ್ಲಿ ರಾಜ್ಯ ಹೆದ್ದಾರಿ ಮೇಲೆ ತನ್ನ ವಾಹನವನ್ನು ಇರಿಸಿ ವಾಹನ ಸಂಚಾರ ಮತ್ತು ಸಾರ್ವಜನಿಕರ ಸಂಚಾರಕ್ಕೆ ತೊಂದರೆ ಮಾಡಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪುಚ್ಚಮೊಗರು ನಿವಾಸಿ ಪ್ರಶಾಂತ @ ಪಚ್ಚು ಬಂಧಿತ ಆರೋಪಿ. ನ.2ರಂದು ಮೂಡುಬಿದ್ರೆ ಬಳಿಯ ಪ್ರಾಂತ್ಯ ಗ್ರಾಮದ ಮಹಾವೀರ ಕಾಲೇಜಿನ ಮಾರಿಗುಡಿ ಬಳಿ ಸಂಜೆ ಸುಮಾರು 6.30 ಗಂಟೆಗೆ ಪುಚ್ಚಮೊಗರು ನಿವಾಸಿ ಪ್ರಶಾಂತ್ ಎಂಬವನು ತನ್ನ ಮೋಟಾರು ಸೈಕಲನ್ನು ರಸ್ತೆಗೆ ಅಡ್ಡಲಾಗಿ ನಿಲ್ಲಿಸಿ ರಸ್ತೆಯಲ್ಲಿ ಸಂಚರಿಸುತ್ತಿದ್ದ ವಾಹನಗಳನ್ನು ತಡೆದು ನಿಲ್ಲಿಸಿ ರಸ್ತೆಯಲ್ಲಿ ಉಂಟಾದ ಹೊಂಡ ಗುಂಡಿಗಳನ್ನು ಮುಚ್ಚಲು ಶಾಸಕರು, ಸಂಸದರು ಹಾಗೂ ಜನಪ್ರತಿನಿಧಿಗಳು ಕೂಡಲೇ ಸ್ಥಳಕ್ಕೆ ಬರಬೇಕು. ರಸ್ತೆಯ ಹೊಂಡ ಗುಂಡಿಗಳನ್ನು ಕೂಡಲೇ ಮುಚ್ಚಿ ಡಾಮರೀಕರಣ ಮಾಡಬೇಕು.
ಇಲ್ಲದಿದ್ದರೆ ಈ ರಸ್ತೆಯಲ್ಲಿ ಯಾವುದೇ ವಾಹನ ಹಾಗೂ ಸಾರ್ವಜನಿಕರ ಸಂಚಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿ ತಡೆಯುಂಟು ಮಾಡಿ ಸ್ಥಳಕ್ಕೆ ವಾಹನಗಳ ಸುಗಮ ಸಂಚಾರ ನಿರ್ವಣೆಗೆ ಬಂದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. “ಮೂಡಬಿದ್ರೆಯ ಇನ್ಸ್ ಪೆಕ್ಟರ್ ಎಲ್ಲಿಂದಲೋ ಘಟ್ಟದಿಂದ ಬಂದವನು. ಅವನ ಅಧಿಕಾರ ಇಲ್ಲಿ ನಡೆಯುವುದಿಲ್ಲ, ನಾನು ಇಲ್ಲಿಯೇ ಹುಟ್ಟಿ ಬೆಳೆದವ" ಎಂಬ ರೀತಿ ಬೈದು ದುರ್ವರ್ತನೆ ತೋರಿದ್ದಾನೆ.
ಇದರಿಂದಾಗಿ, ಮೂಡುಬಿದ್ರೆಯಿಂದ ಬೆಳ್ತಂಗಡಿ ಕಡೆಗೆ ಹೋಗುವ ರಸ್ತೆಯಲ್ಲಿ ಎರಡೂ ಕಡೆ ಸುಮಾರು ಒಂದು ಕಿಲೊಮೀಟರ್ ತನಕ ವಾಹನಗಳು ರಸ್ತೆಯಲ್ಲೇ ಸಾಲುಗಟ್ಟಿ ನಿಂತಿದ್ದು ವಾಹನ ಪ್ರಯಾಣಿಕರಿಗೆ ಹಾಗೂ ಇತರ ಸಾರ್ವಜನಿಕರ ವಾಹನ ಸಂಚಾರಕ್ಕೆ ಅಡ್ಡಿಯಾಗಿತ್ತು. ಈ ಬಗ್ಗೆ ಮೂಡುಬಿದ್ರೆ ಠಾಣೆಯಲ್ಲಿ ಅ.ಕ್ರ 153/2026 ಕಲಂ:126(2), 352, 351(2) ಬಿ ಎನ್ ಎಸ್ ನಂತೆ ಪ್ರಕರಣ ದಾಖಲಿಸಿಕೊಂಡು ಆರೋಪಿ ಪ್ರಶಾಂತ @ ಪಚ್ಚು (35) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
03-11-26 09:48 pm
HK News Desk
ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲ...
03-11-26 01:01 pm
ಹಿರಿಯ ಸಂಶೋಧಕಿ ಡಾ.ಇಂದಿರಾ ಹೆಗ್ಗಡೆ, ಹಿರಿಯ ವಕೀಲ ಬ...
30-10-26 08:26 pm
ಸ್ಟಿಂಗ್ ಪ್ರಕರಣಕ್ಕೆ ಟ್ವಿಸ್ಟ್ ; ಕೇಂದ್ರ ಸಚಿವ ಕುಮ...
30-10-26 05:15 pm
ರಾಜ್ಯದ ಜನತೆಗೆ ಮತ್ತೆ ದರ ಏರಿಕೆ ಶಾಕ್ ; ನಂದಿನಿ ಹಾ...
29-10-26 08:21 pm
29-10-26 09:28 pm
HK News Staffer
ಆಡಳಿತ ಬದಲಾವಣೆ ಉದ್ದೇಶದ ಹಿಂಸಾತ್ಮಕ ಪ್ರತಿಭಟನೆಗಳಲ್...
29-10-26 08:23 pm
'ಮೋದಿ ಅಪ್ಪನೂ ಜೈಲಿಗೆ ಹೋಗಬೇಕಾಗುತ್ತೆ!' ; ವಿವಾದಕ್...
25-10-26 09:40 pm
ಹಿಂದೂ ರಾಷ್ಟ್ರ ಎಂದರೆ ಮುಸ್ಲಿಮರನ್ನು ಹೊರಗಿಡುವುದಲ್...
21-10-26 04:21 pm
ಫ್ರಾನ್ಸ್, ಬಾಂಗ್ಲಾ ರೀತಿ ಭಾರತದಲ್ಲಿ ಆಗೋದು ಸಾಧ್ಯವ...
20-10-26 01:18 pm
04-11-26 02:45 pm
HK News Staffer
ರಸ್ತೆ ಗುಂಡಿ ಬಿದ್ದಿದ್ದಕ್ಕೆ ಜನಪ್ರತಿನಿಧಿಗಳು, ಪೊಲ...
04-11-26 02:41 pm
ಎಸ್ಐಆರ್ ಹೆಸರಲ್ಲಿ ಕಾಂಗ್ರೆಸಿನಿಂದ ದೇಶದಲ್ಲಿ ಅರಾ...
03-11-26 10:51 pm
ವರ್ಷದ ಹಿಂದೆ ಶರಣಾಗಿದ್ದ ನಕ್ಸಲ್ ನಾಯಕಿ ಮುಂಡಗಾರು ಲ...
03-11-26 09:12 pm
ಮಂಗಳೂರಿನಲ್ಲಿ ಮೊದಲ ವಿಶ್ವ ಕೊಂಕಣಿ ಸಂಗೀತ ಮಹಾಸಮ್ಮೇ...
03-11-26 11:41 am
04-11-26 10:00 am
HK News Staffer
ಸ್ಟಿಂಗ್ ಆಪರೇಷನ್ ಬಗ್ಗೆ ರಾಹುಲ್ ಗಾಂಧಿಗೆ ದೂರು ಹೇಳ...
03-11-26 10:44 am
15 ಲಕ್ಷ ಮೌಲ್ಯದ ಎಂಡಿಎಂಎ ಡ್ರಗ್ಸ್ ಸಮೇತ ಖತರ್ನಾಕ್...
02-11-26 09:48 pm
ಬೈಕಂಪಾಡಿಯಲ್ಲಿ ಲಾರಿ- ಸ್ಕೂಟರ್ ಡಿಕ್ಕಿ ; ಸವಾರ ತೀವ...
02-11-26 09:44 pm
ಕಾಪುವಿನ ಹೋಂಸ್ಟೇ ಮೇಲೆ ದುಷ್ಕರ್ಮಿಗಳ ದಾಳಿ: ಕಟ್ಟಡ...
02-11-26 11:31 am