ಬ್ರೇಕಿಂಗ್ ನ್ಯೂಸ್
05-11-26 03:23 pm HK News Staffer ಕರಾವಳಿ
ಮಂಗಳೂರು, ನವೆಂಬರ್ 5: ಕರಾವಳಿ ನಗರದಲ್ಲಿ ಡ್ರಗ್ಸ್ ದಂಧೆ ಮತ್ತೆ ಸದ್ದು ಮಾಡಿದೆ. ಕಾಲೇಜು ವಿದ್ಯಾರ್ಥಿಗಳು ಮತ್ತು ಯುವಜನತೆಯನ್ನೇ ಟಾರ್ಗೆಟ್ ಮಾಡಿಕೊಂಡು ಬೆಂಗಳೂರಿನಿಂದ ನಿಷೇಧಿತ LSD ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ಮಾಡಲು ಸಂಚು ರೂಪಿಸಿದ್ದ ಇಬ್ಬರು ಆರೋಪಿಗಳು ಈಗ ಸಿಸಿಬಿ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಆರೋಪಿಗಳಿಂದ ಬರೋಬ್ಬರಿ 100 LSD ಡ್ರಗ್ಸ್ ಸ್ಟ್ರಿಪ್ಗಳು ಪತ್ತೆಯಾಗಿದ್ದು, ಒಟ್ಟು 3.35 ಲಕ್ಷ ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬಂಧಿತರನ್ನು ಮಂಗಳೂರಿನ ನಿಹಾಲ್ ಸ್ಯಾಂಪ್ರೆಸ್ ರೋಡ್ರಿಗಸ್ (30) ಮತ್ತು ಸಿದ್ದಾರ್ಥ ಶೆಟ್ಟಿ (35) ಎಂದು ಗುರುತಿಸಲಾಗಿದೆ. ಇವರಿಂದ ಸುಮಾರು 3 ಲಕ್ಷ ರೂಪಾಯಿ ಮೌಲ್ಯದ 100 LSD ಸ್ಟ್ರಿಪ್ಗಳು ಹಾಗೂ ಮೂರು ಮೊಬೈಲ್ ಫೋನ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 3.35 ಲಕ್ಷ ರೂಪಾಯಿ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
ಬೆಂಗಳೂರಿನಿಂದ ಮಾದಕವಸ್ತುಗಳನ್ನು ಖರೀದಿಸಿ ಮಂಗಳೂರಿಗೆ ತಂದು, ವಿದ್ಯಾರ್ಥಿಗಳು ಹಾಗೂ ಯುವಜನತೆಗೆ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಸಿಸಿಬಿ ಪೊಲೀಸರಿಗೆ ಲಭಿಸಿತ್ತು. ಈ ಮಾಹಿತಿ ಆಧರಿಸಿ ನವೆಂಬರ್ 3ರಂದು ಮಧ್ಯಾಹ್ನ ಪಡೀಲ್ ರೈಲ್ವೆ ಬ್ರಿಡ್ಜ್ ಬಳಿ ಸಿಸಿಬಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಡ್ರಗ್ಸ್ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಸುತ್ತುವರಿದು ವಶಕ್ಕೆ ಪಡೆದಿದ್ದಾರೆ.
ಬಂಧಿತ ಆರೋಪಿಗಳ ಅಪರಾಧ ಹಿನ್ನೆಲೆಯೂ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ನಿಹಾಲ್ ಸ್ಯಾಂಪ್ರೆಸ್ ರೋಡ್ರಿಗಸ್ ವಿರುದ್ಧ ಮಂಗಳೂರು ನಗರ ಉತ್ತರ (ಬಂದರ್) ಪೊಲೀಸ್ ಠಾಣೆಯಲ್ಲಿ ಈ ಹಿಂದೆ ಮಾದಕವಸ್ತು ಮಾರಾಟಕ್ಕೆ ಸಂಬಂಧಿಸಿದ ಪ್ರಕರಣ ದಾಖಲಾಗಿತ್ತು.
ಇನ್ನೊಬ್ಬ ಆರೋಪಿ ಸಿದ್ದಾರ್ಥ ಶೆಟ್ಟಿ ವಿರುದ್ಧ ಬರ್ಕೆ ಮತ್ತು ಉರ್ವ ಪೊಲೀಸ್ ಠಾಣೆಗಳಲ್ಲಿ ಗಲಾಟೆ, ಕೊಲೆಯತ್ನ ಹಾಗೂ ಗಾಂಜಾ ಮಾರಾಟ ಸೇರಿದಂತೆ ಬರೋಬ್ಬರಿ ಒಂಬತ್ತು ಗಂಭೀರ ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಈ ಪ್ರಕರಣದ ಹಿಂದೆ ದೊಡ್ಡ ಜಾಲವೇ ಕಾರ್ಯನಿರ್ವಹಿಸುತ್ತಿದೆಯೇ ಎಂಬ ಅನುಮಾನ ಮೂಡಿದೆ. ಬೆಂಗಳೂರಿನಿಂದ LSD ಡ್ರಗ್ಸ್ ಪೂರೈಸಿದವರು ಯಾರು? ಮಂಗಳೂರಿನಲ್ಲಿ ಆರೋಪಿಗಳಿಂದ ಮಾದಕವಸ್ತು ಖರೀದಿಸಲು ಸಂಪರ್ಕದಲ್ಲಿದ್ದವರು ಯಾರು? ಎಂಬುದನ್ನು ಪತ್ತೆಹಚ್ಚಲು ಸಿಸಿಬಿ ಪೊಲೀಸರು ಶೋಧ ಕಾರ್ಯ ತೀವ್ರಗೊಳಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ಅಧಿಕಾರಿಗಳು ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು.
ಎಂಡಿಎಂಎ ಮಾರಾಟದ ಆರೋಪದಲ್ಲಿ ಮಹಿಳೆಯ ಬಂಧನ
ಇನ್ನು, ಮಂಗಳೂರಿನಲ್ಲಿ ಮಾದಕವಸ್ತು ಮಾರಾಟಕ್ಕೆ ಸಂಬಂಧಿಸಿದ ಮತ್ತೊಂದು ಪ್ರಕರಣವೂ ಇತ್ತೀಚೆಗೆ ಬೆಳಕಿಗೆ ಬಂದಿತ್ತು. ಕಾಲೇಜು ವಿದ್ಯಾರ್ಥಿಗಳು ಹಾಗೂ ಯುವಜನತೆಗೆ ನಿಷೇಧಿತ MDMA ಮಾದಕವಸ್ತು ಪೂರೈಸುತ್ತಿದ್ದ ಆರೋಪದ ಮೇಲೆ ಮಂಗಳೂರು ಉತ್ತರ ಠಾಣೆ ಪೊಲೀಸರು ಮಹಿಳೆಯೊಬ್ಬರನ್ನು ಬಂಧಿಸಿದ್ದರು.
ಬಂಧಿತೆಯನ್ನು ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಗುರಿಂಗಾನ ನಿವಾಸಿ, ರಫೀಕ್ ಎಂಬುವರ ಪತ್ನಿ ನಸೀಮಾ ಅಲಿಯಾಸ್ ನಸೀಮ (42) ಎಂದು ಗುರುತಿಸಲಾಗಿತ್ತು. ಇದೀಗ LSD ಡ್ರಗ್ಸ್ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರ ಬಂಧನದೊಂದಿಗೆ ಮಂಗಳೂರಿನಲ್ಲಿ ಮಾದಕವಸ್ತು ಪೂರೈಕೆ ಜಾಲದ ವಿರುದ್ಧ ಪೊಲೀಸರ ಕಾರ್ಯಾಚರಣೆ ಮತ್ತಷ್ಟು ಚುರುಕುಗೊಂಡಿದೆ.
03-11-26 09:48 pm
HK News Desk
ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲ...
03-11-26 01:01 pm
ಹಿರಿಯ ಸಂಶೋಧಕಿ ಡಾ.ಇಂದಿರಾ ಹೆಗ್ಗಡೆ, ಹಿರಿಯ ವಕೀಲ ಬ...
30-10-26 08:26 pm
ಸ್ಟಿಂಗ್ ಪ್ರಕರಣಕ್ಕೆ ಟ್ವಿಸ್ಟ್ ; ಕೇಂದ್ರ ಸಚಿವ ಕುಮ...
30-10-26 05:15 pm
ರಾಜ್ಯದ ಜನತೆಗೆ ಮತ್ತೆ ದರ ಏರಿಕೆ ಶಾಕ್ ; ನಂದಿನಿ ಹಾ...
29-10-26 08:21 pm
29-10-26 09:28 pm
HK News Staffer
ಆಡಳಿತ ಬದಲಾವಣೆ ಉದ್ದೇಶದ ಹಿಂಸಾತ್ಮಕ ಪ್ರತಿಭಟನೆಗಳಲ್...
29-10-26 08:23 pm
'ಮೋದಿ ಅಪ್ಪನೂ ಜೈಲಿಗೆ ಹೋಗಬೇಕಾಗುತ್ತೆ!' ; ವಿವಾದಕ್...
25-10-26 09:40 pm
ಹಿಂದೂ ರಾಷ್ಟ್ರ ಎಂದರೆ ಮುಸ್ಲಿಮರನ್ನು ಹೊರಗಿಡುವುದಲ್...
21-10-26 04:21 pm
ಫ್ರಾನ್ಸ್, ಬಾಂಗ್ಲಾ ರೀತಿ ಭಾರತದಲ್ಲಿ ಆಗೋದು ಸಾಧ್ಯವ...
20-10-26 01:18 pm
05-11-26 03:23 pm
HK News Staffer
ಕುಮಾರಧಾರಾ ನದಿಗೆ ಹಾರಿದ ಮಹಿಳೆ ಮೊಸಳೆ ನೋಡಿ ದುರಂತದ...
05-11-26 02:07 pm
‘ಎಸ್ಐಆರ್ ಬಗ್ಗೆ ಸುಳ್ಳು ಹೇಳಿ ದೇಶದಲ್ಲಿ ಅರಾಜಕತೆ ಸ...
04-11-26 10:30 pm
ಸಿಡಿಪಿ ಹೆಸರಲ್ಲಿ ಮುಡಾದಿಂದ ಕರಾಳ ನಿಯಮ, ಸಾಮಾನ್ಯ ಮ...
04-11-26 10:12 pm
ಸೌಜನ್ಯಾ ಪ್ರಕರಣ ; 14 ವರ್ಷಗಳ ಬಳಿಕ ಹಳೆಯ ವೈದ್ಯಕೀಯ...
04-11-26 02:45 pm
04-11-26 10:00 am
HK News Staffer
ಸ್ಟಿಂಗ್ ಆಪರೇಷನ್ ಬಗ್ಗೆ ರಾಹುಲ್ ಗಾಂಧಿಗೆ ದೂರು ಹೇಳ...
03-11-26 10:44 am
15 ಲಕ್ಷ ಮೌಲ್ಯದ ಎಂಡಿಎಂಎ ಡ್ರಗ್ಸ್ ಸಮೇತ ಖತರ್ನಾಕ್...
02-11-26 09:48 pm
ಬೈಕಂಪಾಡಿಯಲ್ಲಿ ಲಾರಿ- ಸ್ಕೂಟರ್ ಡಿಕ್ಕಿ ; ಸವಾರ ತೀವ...
02-11-26 09:44 pm
ಕಾಪುವಿನ ಹೋಂಸ್ಟೇ ಮೇಲೆ ದುಷ್ಕರ್ಮಿಗಳ ದಾಳಿ: ಕಟ್ಟಡ...
02-11-26 11:31 am