ಬ್ರೇಕಿಂಗ್ ನ್ಯೂಸ್
14-11-26 10:28 am HK News Staffer ಕರಾವಳಿ
ಮಂಗಳೂರು, ನ.14: 73ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ನವೆಂಬರ್ 20ರಂದು ನಗರದ ಕರಾವಳಿ ಉತ್ಸವ ಮೈದಾನದಲ್ಲಿ ರಾಜ್ಯ ಮಟ್ಟದ ಸಹಕಾರ ಸಪ್ತಾಹ ಏರ್ಪಡಿಸಿದ್ದು ಕಾರ್ಯಕ್ರಮದಲ್ಲಿ ಸಹಕಾರ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಪ್ರದಾನ ಹಾಗೂ ವಿವಿಧ ಸಹಕಾರಿ ಸಂಘಗಳಿಗೆ ಸನ್ಮಾನ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.
“ಪರಿಸರ ಸಂರಕ್ಷಣೆ, ಲಿಂಗ ಸಮಾನತೆ ಮತ್ತು ವಿಶ್ವ ಶಾಂತಿಗಾಗಿ ಸಹಕಾರ ಸಂಸ್ಥೆಗಳು” ಎಂಬ ವಿಷಯದಡಿ ಕಾರ್ಯಕ್ರಮ ನಡೆಯಲಿದ್ದು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನೇತೃತ್ವದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ, ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ಸೇರಿದಂತೆ ವಿವಿಧ ಸಹಕಾರಿ ಸಂಸ್ಥೆಗಳು ಹಾಗೂ ಸಹಕಾರ ಇಲಾಖೆಯ ಸಹಯೋಗದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ರಾಜ್ಯ ಮಟ್ಟದ ಕಾರ್ಯಕ್ರಮವನ್ನು ಸಹಕಾರ ಸಚಿವ ಲಕ್ಷ್ಮಣ ಸಂಗಪ್ಪ ಸವದಿ ಉದ್ಘಾಟಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಸಾಧಕರಿಗೆ ಸಹಕಾರ ಮಾಣಿಕ್ಯ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಉತ್ತಮ ಸಹಕಾರಿ ಸಂಘಗಳಿಗೆ ಶಾಸಕ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ ಜಿ.ಟಿ. ದೇವೇಗೌಡ ಪ್ರಶಸ್ತಿ ವಿತರಿಸಲಿದ್ದಾರೆ. ಉತ್ತಮ ಸ್ವಸಹಾಯ ಸಂಘಗಳಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಪುರಸ್ಕಾರ ನೀಡಲಿದ್ದು, ವಸ್ತುಪ್ರದರ್ಶನ ಮಳಿಗೆಗಳನ್ನು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟಿಸಲಿದ್ದಾರೆ. ಸಹಕಾರ ಸಪ್ತಾಹದ ಧ್ವಜಾರೋಹಣವನ್ನು ಶಾಸಕ ಡಿ. ವೇದವ್ಯಾಸ ಕಾಮತ್ ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ. ಎಂ.ಎನ್. ರಾಜೇಂದ್ರ ಕುಮಾರ್ ವಹಿಸಲಿದ್ದಾರೆ.
ಈ ಬಾರಿಯ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಹಿರಿಯ ಸಹಕಾರಿ ಸಾಧಕರಾದ ಜಾಕೆ ಮಾಧವ ಗೌಡ, ಕಲ್ಲಡ್ಕ ಪ್ರಾಥಮಿಕ ಸಹಕಾರಿ ಸಂಘದ ಅಧ್ಯಕ್ಷ ಪದ್ಮನಾಭ ಕೊಟ್ಟಾರಿ, ಪ್ರಿಯದರ್ಶಿನಿ ಸೊಸೈಟಿಯ ವಸಂತ್ ಬೆರ್ನಾಡ್ ಹಾಗೂ ಬೆಳ್ವೆ ಜಯರಾಮ್ ಶೆಟ್ಟಿ ಸೇರಿದಂತೆ ನಾಲ್ವರಿಗೆ ಸಹಕಾರಿ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಇದರ ಜೊತೆಗೆ 2025-26ನೇ ಸಾಲಿನಲ್ಲಿ ಸರ್ವಾಂಗೀಣ ಪ್ರಗತಿ ಸಾಧಿಸಿರುವ ನಾಲ್ಕು ಸಹಕಾರಿ ಸಂಘಗಳಿಗೆ ಸಹಕಾರ ಮಾಣಿಕ್ಯ ಪ್ರಶಸ್ತಿ ನೀಡಲಾಗುವುದು. ಪ್ರಶಸ್ತಿಯೊಂದಿಗೆ ತಲಾ 5 ಗ್ರಾಂ ಚಿನ್ನದ ಪದಕ, 10 ಸಾವಿರ ರೂ. ನಗದು ಹಾಗೂ ಪಾರಿತೋಷಕ ನೀಡಿ ಗೌರವಿಸಲಾಗುತ್ತದೆ ಎಂದು ರಾಜೇಂದ್ರ ಕುಮಾರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಗೋಪಾಲಕೃಷ್ಣ ಭಟ್, ಜಯರಾಜ್ ಶೆಟ್ಟಿ, ಶಶಿಕುಮಾರ್ ರೈ ಬಾಲ್ಯೊಟ್ಟು ಸೇರಿದಂತೆ ಇತರರು ಉಪಸ್ಥಿತರಿದ್ದರು.
14-11-26 09:24 pm
HK News Desk
'ಕಾಸ್ಮೋಸ್ ಮೈಸೂರು' ದೇಶದ ಮೊದಲ ಎಲ್ಇಡಿ ಡೋಮ್ ತಾರಾಲ...
13-11-26 10:13 pm
ಬೆಂಗಳೂರು- ಮಂಗಳೂರು- ಮಡಗಾಂವ್ ವಂದೇ ಭಾರತ್ ರೈಲಿಗೆ...
13-11-26 04:23 pm
ಸಿದ್ದರಾಮಯ್ಯ ಸ್ಟಿಂಗ್ ಪ್ರಕರಣ ; ವಿಡಿಯೋದಲ್ಲಿ ಕಾಣಿ...
09-11-26 07:45 pm
ಒಂದು ಕೋಟಿಗೆ 1.30 ಕೋಟಿ ಆಫರ್ ! ಹಣ ದುಪ್ಪಟ್ಟು ಪ್ಲ...
08-11-26 10:24 pm
14-11-26 10:00 am
HK News Staffer
ಚೀನಾ ಗೂಢಚಾರಿಣಿ ಬಲೆಗೆ ಎನ್ವಿಡಿಯಾ ಸಿಇಒ? ವಿವಾಹೇತ...
09-11-26 04:45 pm
ಯುದ್ಧ ನಿಲ್ಲಿಸಿ ಸಂಧಾನಕ್ಕೆ ಬನ್ನಿ.. ಇಲ್ಲದಿದ್ದರೆ...
09-11-26 11:51 am
ಇಸ್ರೇಲ್ ಅಧಿಪತ್ಯ ಪಡೆಯಲು ನೆತನ್ಯಾಹು ಸೋಲು ; ಹೊಸ ಸ...
29-10-26 09:28 pm
ಆಡಳಿತ ಬದಲಾವಣೆ ಉದ್ದೇಶದ ಹಿಂಸಾತ್ಮಕ ಪ್ರತಿಭಟನೆಗಳಲ್...
29-10-26 08:23 pm
14-11-26 04:04 pm
HK News Staffer
Ravi Pujari, Mother Death: ಭೂಗತ ಪಾತಕಿ ರವಿ ಪೂಜ...
14-11-26 12:50 pm
ಭೂಗತ ಪಾತಕಿ ರವಿ ಪೂಜಾರಿ ಉಡುಪಿಗೆ ; ತಾಯಿ ಅಂತ್ಯಕ್ರ...
14-11-26 12:50 pm
ನ.20ರಂದು ಮಂಗಳೂರಿನಲ್ಲಿ ರಾಜ್ಯ ಮಟ್ಟದ ಸಹಕಾರ ಸಪ್ತಾ...
14-11-26 10:28 am
ಧರ್ಮಸ್ಥಳ ಸ್ನಾನಘಟ್ಟದ ಬಳಿ ತಲೆಬುರುಡೆ ; ತನಿಖೆ ಯಾರ...
13-11-26 10:18 pm
13-11-26 10:23 pm
HK News Staffer
ಪಣಂಬೂರು ಬೀಚ್ ರೆಸ್ಟೋರೆಂಟ್ ನಲ್ಲಿ ಇಬ್ಬರು ಬಾಂಗ್ಲಾ...
13-11-26 10:15 pm
ಬಂಟ್ವಾಳ ; ಯುವಕನಿಗೆ ಬೊಲೆರೋ ಡಿಕ್ಕಿಪಡಿಸಿ ಕೊಲೆಯತ್...
11-11-26 03:09 pm
ಬೆಳ್ತಂಗಡಿ ; ಗೂಡ್ಸ್ ಟೆಂಪೋ ಡಿಕ್ಕಿಯಾಗಿ ಇಬ್ಬರು ಬೈ...
11-11-26 01:54 pm
ದಾವಣಗೆರೆಯಿಂದ ಮಂಗಳೂರು ಸಾಗಿಸುತ್ತಿದ್ದ 1.15 ಕೋಟಿ...
10-11-26 10:01 pm