ಬ್ರೇಕಿಂಗ್ ನ್ಯೂಸ್
14-01-21 11:46 am Mangalore Correspondent ಕರಾವಳಿ
ಬೆಳ್ತಂಗಡಿ, ಜ.14 : ಕೊಕ್ಕಡ ಸಮೀಪದ ಪಿಜಿನಡ್ಕ ಎಂಬಲ್ಲಿ ಪಿ.ಕೆ ಚೀಂಕ್ರ ಎಂಬವರ ಮನೆ ಹಾಗೂ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ 3 ಕ್ವಿಂಟಾಲ್ಗೂ ಮಿಕ್ಕಿ ರಬ್ಬರ್ ಶೀಟ್ ಹಾಗೂ ಮನೆಯ ಅಗತ್ಯ ದಾಖಲೆ ಪತ್ರಗಳು, ನಗದು ಬೆಂಕಿಗಾಹುತಿಯಾದ ಘಟನೆ ನಡೆದಿದೆ.
ಕೊಕ್ಕಡ ಗ್ರಾಮದ ಪಿಜಿನಡ್ಕ ಪಿ.ಕೆ ಚೀಂಕ್ರರವರು ಹೊಸಮನೆ ಕಟ್ಟುತ್ತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಹೊಸ ಮನೆಯಲ್ಲಿಯೇ ಇರುತ್ತಿದ್ದ ಮನೆ ಮಂದಿ ಅಡುಗೆ ಮಾತ್ರ ಹಳೆ ಮನೆಯಲ್ಲಿ ಮಾಡುತ್ತಿದ್ದರು. ಹಳೆ ಮನೆಗೆ ತಾಗಿಕೊಂಡೇ ಕೊಟ್ಟಿಗೆ ಇದ್ದು, ಮನೆ ವಸ್ತುಗಳನ್ನು ಅದರಲ್ಲಿಯೇ ಜೋಡಿಸಿಡಲಾಗಿತ್ತು.
ಬೆಳಗ್ಗೆ 7 ಗಂಟೆಯ ಹೊತ್ತಿಗೆ ಬೆಂಕಿ ಹಿಡಿದು ಮನೆಯ ಹೆಂಚು ಹಾಗೂ ಶೀಟ್ ಒಡೆಯುವ ಸದ್ದು ಕೇಳಿದ್ದು ಹೊರಗೆ ಬಂದು ನೋಡಿದಾಗ ರಬ್ಬರ್ ಶೀಟ್ಗೆ ತಗುಲಿದ ಬೆಂಕಿ ಮನೆಯನ್ನು ಸಂಪೂರ್ಣವಾಗಿ ಆವರಿಸಿತ್ತು. ಕೂಡಲೇ ಅಕ್ಕಪಕ್ಕದವರು ಸೇರಿ ಬೆಂಕಿ ನಂದಿಸುವ ಕಾರ್ಯ ಮಾಡಿದರು. ಅದಾಗಲೇ 3 ಕ್ವಿಂಟಾಲ್ಗೂ ಮಿಕ್ಕಿದ ರಬ್ಬರ್ ಶೀಟ್, ಅಗತ್ಯ ದಾಖಲೆ ಪತ್ರಗಳು ಹಾಗೂ ಬ್ಯಾಗಿನಲ್ಲಿದ್ದ ಸುಮಾರು 30 ಸಾವಿರ ನಗದು ಸೇರಿದಂತೆ ಸುಮಾರು 1.50 ಲಕ್ಷ ರೂ. ನಷ್ಟ ಉಂಟಾಗಿರಬಹುದೆಂದು ಅಂದಾಜಿಸಲಾಗಿದೆ.
ಸ್ಥಳಕ್ಕೆ ಗ್ರಾಮಕರಣಿಕ ರೂಪೇಶ್, ಗ್ರಾ.ಪಂ ಸದಸ್ಯರಾದ ಯೋಗೀಶ್ ಆಲಂಬಿಲ, ಜಗದೀಶ್, ಪುರುಷೋತ್ತಮ, ಜಾನಕಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Fire Catches House in Belthangady destroying valuable documents and assets of the house.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
22-12-25 12:26 pm
Mangalore Correspondent
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
22-12-25 02:18 pm
HK News Desk
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm
Minor Girl Sexually Assaulted in Puttu: ಜೇನು...
21-12-25 01:18 pm