ಬ್ರೇಕಿಂಗ್ ನ್ಯೂಸ್
16-01-21 11:06 am Mangalore Correspondent ಕರಾವಳಿ
ಬಂಟ್ವಾಳ, ಜ.16 : ವಾರದ ಹಿಂದೆ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಅಜ್ಜಿಯ ಕೊರಳಲ್ಲಿದ್ದ ಚಿನ್ನದ ಸರ ಎಳೆದೊಯ್ದ ಬಗ್ಗೆ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು, ಅಜ್ಜಿ ಹೆಣೆದ ನಾಟಕವನ್ನು ಬಯಲಿಗೆ ಎಳೆದಿದ್ದಾರೆ.
ಬಂಟ್ವಾಳ ಪುರಸಭಾ ವ್ಯಾಪ್ತಿಯ ಜಕ್ರಿಬೆಟ್ಟು ನಿವಾಸಿ ಶಾಂತ ನಾಯಕ್ ಎಂಬವರು ಜ.8 ರಂದು ಪೇಟೆಗೆ ಬಂದು ಮನೆಗೆ ಹಿಂತಿರುಗುವ ವೇಳೆ ಬೈಕಿನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಕುತ್ತಿಗೆಯಲ್ಲಿದ್ದ ಮೂರು ಪವನ್ ತೂಕದ ಚಿನ್ನದ ಸರವನ್ನು ಎಳೆದು ಪರಾರಿಯಾಗಿದ್ದಾಗಿ ಪ್ರಕರಣ ದಾಖಲಿಸಿದ್ದರು. ಘಟನೆ ವೇಳೆ ಅಜ್ಜಿಯ ಬೆನ್ನಿಗೆ ಗಾಯವಾಗಿತ್ತು ಎನ್ನಲಾಗಿತ್ತು.
ಮನೆಗೆ ಮರಳಿದ ಅಜ್ಜಿ ಮಗಳು ಮಂಗಳೂರಿನಿಂದ ಕೆಲಸ ಮುಗಿಸಿ ಬಂದಾಗ ವಿಚಾರ ತಿಳಿಸಿದ್ದಾರೆ. ವೃದ್ದೆಯ ಮಗಳು ಬಳಿಕ ಬಂಟ್ವಾಳ ನಗರ ಠಾಣೆಗೆ ಕರೆದುಕೊಂಡು ಬಂದು ಘಟನೆ ಬಗ್ಗೆ ವಿವರಿಸಿ ಪ್ರಕರಣ ದಾಖಲು ಮಾಡಿದ್ದರು.
ಘಟನೆಯನ್ನು ಗಂಭೀರ ಪ್ರಕರಣವೆಂದು ಪರಿಗಣಿಸಿದ ಬಂಟ್ವಾಳ ವೃತ್ತ ನಿರೀಕ್ಷಕರಾದ ಟಿ.ಡಿ.ನಾಗರಾಜ್, ನಗರ ಠಾಣಾ ಎಸ್ಐ ಅವಿನಾಶ್ ಹಾಗೂ ಅಪರಾಧ ವಿಭಾಗದ ಎಸ್.ಐ ಕಲೈಮಾರ್ ನೇತೃತ್ವದಲ್ಲಿ ತಂಡ ರಚಿಸಿದ್ದರು. ತನಿಖೆ ಆರಂಭಿಸಿದ ಪೊಲೀಸರು ಅಲ್ಲಿನ ಸಿ.ಸಿ. ಕ್ಯಾಮರಾ ಫೂಟೇಜ್ ಗಳನ್ನು ಪರಿಶೀಲನೆ ನಡೆಸುತ್ತಾರೆ.

ಆದರೆ ಘಟನೆ ನಡೆದ ದಿನ ದೂರು ನೀಡಿದ ಅಜ್ಜಿ ತೆರಳಿದ್ದ ರಸ್ತೆಯಲ್ಲಿ ಅಂತಹ ಯಾವುದೇ ಘಟನೆ ನಡೆದ ಬಗ್ಗೆ ಸುಳಿವು ಸಿಗಲಿಲ್ಲ. ಪೊಲೀಸರು ಬಳಿಕ ಅಜ್ಜಿಯ ವಿಚಾರಣೆಗೆ ಮುಂದಾಗುತ್ತಾರೆ. ಈ ವೇಳೆ ಅಜ್ಜಿ ತಪ್ಪು ಒಪ್ಪಿಕೊಂಡಿದ್ದು ನಡೆದ ವಿಚಾರವನ್ನು ಬಾಯಿಬಿಡುತ್ತಾರೆ.
ದರೋಡೆ ನಾಟಕ ಹೆಣೆದಿದ್ದು ಯಾಕೆ ?
ಅಜ್ಜಿ ತನ್ನ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಯಾವುದೋ ಉದ್ದೇಶದಿಂದ ಸಂಬಂಧಿಕರಿಗೆ ನೀಡಿದ್ದರು. ಬಳಿಕ ಮಗಳು ಬೈಯುತ್ತಾಳೆ ಎಂಬ ಕಾರಣಕ್ಕೆ ಬೆನ್ನಿಗೆ ಪರಚಿದ ರೀತಿಯಲ್ಲಿ ಗಾಯ ಮಾಡಿಕೊಂಡು ದರೋಡೆ ನಾಟಕ ಹೆಣೆದಿದ್ದರು.
ಸಾಕಷ್ಟು ತಲೆನೋವಿಗೆ ಕಾರಣವಾಗಿದ್ದ ಪ್ರಕರಣವನ್ನು ವೃತ್ತ ನಿರೀಕ್ಷಕ ಟಿ.ಡಿ.ನಾಗರಾಜ್ ಅವರ ನೇತೃತ್ವದ ತಂಡ ಚಾಕಚಕ್ಯತೆಯಿಂದ ಪತ್ತೆ ಮಾಡಿದ್ದು ಸುಳ್ಳು ಹೇಳಿ ಪೊಲೀಸರನ್ನು ಯಾಮಾರಿಸಿದ ಅಜ್ಜಿಯ ಮೇಲೆ ಪ್ರಕರಣ ದಾಖಲಿಸಲು ನ್ಯಾಯಾಲಯಕ್ಕೆ ಪತ್ರ ಬರೆದಿದ್ದಾರೆ.
Grandmother was taken to custody of the Bantwal Police after she tried to deceive the police personals in the name of Chain Snatching.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
22-12-25 12:26 pm
Mangalore Correspondent
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
22-12-25 02:18 pm
HK News Desk
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm
Minor Girl Sexually Assaulted in Puttu: ಜೇನು...
21-12-25 01:18 pm