ಬ್ರೇಕಿಂಗ್ ನ್ಯೂಸ್
13-08-20 11:07 am Headline Karnataka News Network ಕರಾವಳಿ
ಮಂಗಳೂರು, ಆಗಸ್ಟ್ 13: ಕೋವಿಡ್ 19 ವ್ಯಾಪಕವಾಗಿ ಹರಡುತ್ತಿರುವ ಸಂದರ್ಭದಲ್ಲಿ ಪ್ಲಾಸ್ಮಾ ಥೆರಪಿ ಚಿಕಿತ್ಸೆಯು ಅತ್ಯಂತ ಪ್ರಭಾವಶಾಲಿಯಾಗಿರುವುದು ಹಲವೆಡೆ ಸಾಕಾರಗೊಂಡಿದೆ. ರಾಜ್ಯದ ಕೆಲವು ಭಾಗಗಳಲ್ಲಿ ಫ್ಲಾಸ್ಮಾ ಥೆರಪಿಯನ್ನು ಬಳಸಿ ವೈದ್ಯಕೀಯ ಸಂಶೋಧನೆ ನಡೆಸಿ ಯಶಸ್ವಿಯಾದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲೂ ಪ್ಲಾಸ್ಮಾ ಕೇಂದ್ರ ಸ್ಥಾಪಿಸುವ ಕುರಿತು ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಸಚಿವರೊಂದಿಗೆ ಚರ್ಚಿಸಿ, ಈ ಕುರಿತು ಪ್ರಸ್ತಾವನೆ ಸಲ್ಲಿಸಿ ಶೀಘ್ರವೇ ಪ್ಲಾಸ್ಮಾ ಥೆರಪಿ ಕೇಂದ್ರ ಸ್ಥಾಪಿಸಲಾಗುವುದು ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.
ಕೋವಿಡ್ ಸೋಂಕಿತರು ಗುಣಮುಖರಾದ ಮೇಲೆ ಅವರ ರಕ್ತದ ದ್ರವ ಭಾಗವನ್ನು ಶೇಖರಿಸಿ ಚಿಕಿತ್ಸೆ ನೀಡುವ ವಿಧಾನವನ್ನು ಕರ್ನಾಟಕದಲ್ಲಿ ಈಗಾಗಲೇ ಪ್ರಾರಂಭಿಸಲಾಗಿದೆ. ಸೋಂಕಿತ ವ್ಯಕ್ತಿಯು ಚೇತರಿಸಿಕೊಳ್ಳುವ ಸಂದರ್ಭದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುವ ಹಿನ್ನೆಲೆಯಲ್ಲಿ ಆ ವ್ಯಕ್ತಿಯ ದೇಹದಿಂದ ಪ್ಲಾಸ್ಮಾ ಸಂಗ್ರಹಿಸಿ ರೋಗಿಗಳಿಗೆ ಚಿಕಿತ್ಸೆ ನೀಡುವ ಪದ್ಧತಿಯನ್ನು ಮಂಗಳೂರಿನಲ್ಲಿ ಅಳವಡಿಸಬೇಕು.
ಒಬ್ಬ ವ್ಯಕ್ತಿಯಿಂದ ಸಂಗ್ರಹಿಸುವ ಪ್ಲಾಸ್ಮಾದಿಂದ ಗರಿಷ್ಠ 5 ಜನರಿಗೆ ಚಿಕಿತ್ಸೆ ನೀಡಬಹುದು ಎನ್ನುವುದನ್ನು ಈಗಾಗಲೇ ಅದ್ಯಯನದ ಮೂಲಕ ಕಂಡು ಹಿಡಿಯಲಾಗಿದೆ. ಹಾಗಾಗಿ ಸೋಂಕಿತರನ್ನು ಗುಣಪಡಿಸುವಲ್ಲಿ ಇದು ಮಹತ್ವದ ಪಾತ್ರ ವಹಿಸಬಹುದು ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.
ಈ ವಿಚಾರವಾಗಿ ಜಿಲ್ಲಾಧಿಕಾರಿ ಹಾಗೂ ಸಂಬಂದಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಸಚಿವರ ಗಮನಕ್ಕೂ ತರಲಾಗಿದೆ ಎಂದು ಶಾಸಕ ಕಾಮತ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 05:20 pm
Mangalore Correspondent
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm