ಬ್ರೇಕಿಂಗ್ ನ್ಯೂಸ್
20-01-21 09:49 pm Mangaluru Correspondent ಕರಾವಳಿ
ಕೊಣಾಜೆ, ಜ.20: ವಿದ್ಯುತ್ ಕಂಬಕ್ಕೆ ಗ್ಯಾಸ್ ಸಿಲಿಂಡರ್ ತುಂಬಿದ್ದ ಪಿಕ್ ಅಪ್ ವಾಹನ ಡಿಕ್ಕಿಯಾದ ಪರಿಣಾಮ ವಿದ್ಯುತ್ ಶಾರ್ಟ್ ಆಗಿ ಬೆಂಕಿ ಹತ್ತಿಕೊಂಡಿದ್ದು , ಕೂದಲೆಲೆಯ ಅಂತರದಲ್ಲಿ ಭಾರೀ ಅನಾಹುತ ತಪ್ಪಿದೆ.
ಸಂಜೆ 4 ಗಂಟೆ ವೇಳೆಗೆ ಪಜೀರು ಗ್ರಾಮ ಪಂಚಾಯತ್ ಕಚೇರಿಯ ಹಿಂಬದಿ ರಸ್ತೆಯಲ್ಲಿ HP ಗ್ಯಾಸ್ ಸಿಲಿಂಡರ್ ಗಳನ್ನು ಗ್ರಾಹಕರಿಗೆ ವಿತರಿಸುತ್ತಿದ್ದ ಪಿಕ್ ಅಪ್ ವಾಹನವು ರಿವರ್ಸ್ ತೆಗೆಯುವ ವೇಳೆ ಅಲ್ಲಿದ್ದ ವಿದ್ಯುತ್ ಕಂಬವೊಂದಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಕಂಬವು ತುಂಡಾಗಿ ಪಿಕ್ ಅಪ್ ವಾಹನದ ಮೇಲೆ ಉರುಳಿ ಬಿದ್ದಿದ್ದು ವಿದ್ಯುತ್ ಲೈನ್ ಸಿಲಿಂಡರ್ ಮೇಲೆ ಬಿದ್ದಿತ್ತು. ಅಷ್ಟರಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು ಬೆಂಕಿ ಹತ್ತಿಕೊಳ್ಳುವುದರಿಂದ ತಪ್ಪಿದೆ. ಅವಘಡವನ್ನು ತಿಳಿಯದ ಮೆಸ್ಕಾಂ ಸಿಬ್ಬಂದಿ ಮತ್ತೆ ಪವರ್ ಆನ್ ಮಾಡಿದ್ದರ ಪರಿಣಾಮ ಬೆಂಕಿ ಹತ್ತಿದ್ದು ಸುತ್ತಮುತ್ತಲಿನ ಹುಲ್ಲುಗಾವಲಿಗೆ ಬೆಂಕಿ ಹತ್ತಿಕೊಂಡಿದೆ. ಮತ್ತೆ ವಿದ್ಯುತ್ ನಿಲುಗಡೆ ಆಗಿದ್ದು ಸ್ಥಳೀಯರು ಮೆಸ್ಕಾಂ ಸಿಬ್ಬಂದಿಗೆ ಮಾಹಿತಿ ನೀಡಿ ನಂತರ ಬೆಂಕಿ ನಂದಿಸಿದ್ದಾರೆ.

ಪಿಕ್ ವಾಹನದ ಚಾಲಕ ಅಪಾಯ ಅರಿತು ಓಡಿದ್ದಾನೆ. ಅದೃಷ್ಟವಶಾತ್ ಪಿಕ್ ವಾಹನ ಮತ್ತು ಸಿಲಿಂಡರ್ ಗಳಿಗೆ ಯಾವುದೇ ಅನಾಹುತ ಸಂಭವಿಸಿಲ್ಲ. ಘಟನೆ ವೇಳೆ ಗ್ಯಾಸ್ ಡೆಲಿವರಿ ಹುಡುಗ ಹತ್ತಿರದ ಮನೆಗೆ ಗ್ಯಾಸ್ ಹೊತ್ತು ಹೋಗಿದ್ದನೆನ್ನಲಾಗಿದೆ. ಬೆಂಕಿ ಹತ್ತಿಕೊಂಡ ಪ್ರದೇಶ ನಿರ್ಜನ ಪ್ರದೇಶವಾದುದರಿಂದ ಯಾವುದೆ ಪ್ರಾಣಾಪಾಯ ಸಂಭವಿಸಿಲ್ಲ.
HP Gas Cylinder pickup van rams into an electric pole in Pajir, Konaje in Mangalore. A great escape from a major catastrophe was avoided due to MESCOM workers.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 06:28 pm
HK News Desk
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm