ಬ್ರೇಕಿಂಗ್ ನ್ಯೂಸ್
21-01-21 07:58 pm Mangaluru Correspondent ಕರಾವಳಿ
ಪುಣೆ, ಜನವರಿ 21: ಕೊರೊನಾ ಸೋಂಕಿನ ವಿರುದ್ಧ ಭಾರತದಲ್ಲಿ ಕೋವಿಶೀಲ್ಡ್ ಲಸಿಕೆ ಅಭಿವೃದ್ಧಿಯಲ್ಲಿ ತೊಡಗಿಕೊಂಡಿದ್ದ ಪುಣೆಯ ಸೆರಂ ಇನ್ ಸ್ಟಿಟ್ಯೂಟ್ ನಲ್ಲಿ ಇಂದು ಮಧ್ಯಾಹ್ನದ ವೇಳೆ ಬೆಂಕಿ ಅವಘಡ ಸಂಭವಿಸಿದ್ದು ಐವರು ಸಾವನ್ನಪ್ಪಿದ್ದಾರೆ.
ಪುಣೆಯ ಮಂಜಿರಿ ಪ್ರದೇಶದಲ್ಲಿರುವ ಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಟರ್ಮಿನಲ್ ಗೇಟ್-1 ಒಳಗಿನ SEZ-3 ಕಟ್ಟಡದ ನಾಲ್ಕನೇ ಮತ್ತು ಐದನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಬೆಂಕಿ ನಂದಿಸಲು ಹತ್ತು ಅಗ್ನಿಶಾಮಕ ವಾಹನಗಳು ದೌಡಾಯಿಸಿವೆ. ಎನ್ ಡಿಆರ್ ಎಫ್ ತಂಡವೂ ಕಾರ್ಯಾಚರಣೆಗೆ ಧಾವಿಸಿದೆ. ಆಕ್ಸ್ ಫರ್ಡ್ ಆಸ್ಟ್ರಾಜೆನೆಕಾದ ಕೋವಿಶೀಲ್ಡ್ ಲಸಿಕೆಯನ್ನು ಸೆರಂ ಇನ್ ಸ್ಟಿಟ್ಯೂಟ್ ನಲ್ಲಿ ಉತ್ಪಾದನೆ ಮಾಡಲಾಗುತ್ತಿದೆ. ಸುಮಾರು ನೂರು ಎಕರೆ ಆವರಣದಲ್ಲಿ ಸಂಸ್ಥೆ ನಿರ್ಮಾಣವಾಗುತ್ತಿದ್ದು, ನಿರ್ಮಾಣ ಹಂತದಲ್ಲಿರುವ ಕಟ್ಟಡವೊಂದರಲ್ಲಿ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಕಾಣಿಸಿಕೊಂಡಿರುವ ಈ ಕಟ್ಟಡದಲ್ಲಿ ಸದ್ಯಕ್ಕೆ ಕೊರೊನಾ ಲಸಿಕೆ ಉತ್ಪಾದನೆ ನಡೆಯುತ್ತಿರಲಿಲ್ಲ ಎಂದು ತಿಳಿದುಬಂದಿದೆ.

ಲಸಿಕೆ ಉತ್ಪಾದನೆ ಮಾಡುತ್ತಿರುವ ಘಟಕಕ್ಕೆ ಈ ಕಟ್ಟಡ ಹೊಂದಿಕೊಂಡಿದೆ. ಸುಮಾರು ನಾಲ್ಕು ಮಂದಿ ಕಟ್ಟಡದ ಒಳಗೆ ಸಿಲುಕಿಕೊಂಡಿದ್ದು, ಮೂರು ಮಂದಿಯನ್ನು ರಕ್ಷಿಸಿರುವುದಾಗಿ ಅಗ್ನಿ ಶಾಮಕ ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ದಟ್ಟ ಹೊಗೆ ಆವರಿಸಿರುವುದರಿಂದ ಕಾರ್ಯಾಚರಣೆಗೆ ಅಡ್ಡಿಯಾಗಿದ್ದು, ಬೆಂಕಿ ನಿಯಂತ್ರಿಸಲು ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಬೆಂಕಿ ಅವಘಡ ಕೊರೊನಾ ಲಸಿಕೆ ಉತ್ಪಾದನೆ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ಲಸಿಕೆಗಳು ಹಾಗೂ ಲಸಿಕಾ ಉತ್ಪಾದನಾ ಘಟಕಕ್ಕೆ ಯಾವುದೇ ತೊಂದರೆಯಾಗಿಲ್ಲ ಎಂದು ಮೂಲಗಳು ತಿಳಿಸಿವೆ. ಈ ಅವಘಡದ ಕುರಿತು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಪುಣೆ ನಗರ ಆಯುಕ್ತರಿಂದ ಸಂಪೂರ್ಣ ವಿವರ ಪಡೆದುಕೊಂಡಿರುವುದಾಗಿ ತಿಳಿದುಬಂದಿದೆ.
A major fire broke out at a chemical solvent manufacturing unit in Maharashtra’s Pune district in the wee hours of Thursday killing five a fire brigade official said.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 06:28 pm
HK News Desk
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm