ಬ್ರೇಕಿಂಗ್ ನ್ಯೂಸ್

Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿಂಗರತಿ ಲೈಂಗಿಕ ದೌರ್ಜನ್ಯ ; ಬೇಕಲ ಶಿಕ್ಷಣಾಧಿಕಾರಿ, ರೈಲ್ವೇ ಉದ್ಯೋಗಿ, ಜಮಾತೆ ಇಸ್ಲಾಮಿ, ಲೀಗ್ ಕಾರ್ಯಕರ್ತರು ಸೇರಿ ಹತ್ತು ಮಂದಿ ಪೊಲೀಸ್ ಬಲೆಗೆ, ಕಾಸರಗೋಡಿನಲ್ಲಿ ಸಂಚಲನ ಮೂಡಿಸಿದ ಪ್ರಕರಣ     |    ಬಂಗ್ಲೆಗುಡ್ಡೆ ಕಾಡಿನಲ್ಲಿ 9 ಕಡೆ ಮನುಷ್ಯನ ಎಲುಬು, ಬುರುಡೆಗಳು ಪತ್ತೆ, ಧರ್ಮಸ್ಥಳ ಪ್ರಕರಣಕ್ಕೆ ಮತ್ತೆ ತಿರುವು, ಎಸ್ಐಟಿ ಶೋಧ ಕಾರ್ಯ ಮುಂದುವರಿಕೆಬಂಗ್ಲೆಗುಡ್ಡೆ ಕಾಡಿನಲ್ಲಿ 9 ಕಡೆ ಮನುಷ್ಯನ ಎಲುಬು, ಬುರುಡೆಗಳು ಪತ್ತೆ, ಧರ್ಮಸ್ಥಳ ಪ್ರಕರಣಕ್ಕೆ ಮತ್ತೆ ತಿರುವು, ಎಸ್ಐಟಿ ಶೋಧ ಕಾರ್ಯ ಮುಂದುವರಿಕೆ    |    Mahesh Shetty Timarodi, Arms, FIR: ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿಯಲ್ಲಿ ಮತ್ತೊಂದು ಎಫ್ಐಆರ್, ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಕೇಸು ದಾಖಲು    |   

ವಿ ಎಚ್ ಪಿ ಮುಖಂಡನಿಗೆ ಗೃಹ ಸಚಿವರ ಅಭಯ ; ಭಾರೀ ವಿವಾದಕ್ಕೆ ಗುರಿಯಾದ ವಿಡಿಯೋ

13-08-20 06:35 pm       Mangalore Reporter   ಕರಾವಳಿ

ಗೃಹ ಸಚಿವರು ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಅವರಿಗೆ ನಿಮ್ಮ ಮೇಲೆ ಯಾವುದೇ ಕೇಸು ಹಾಕಿದ್ರೂ, ಎಲ್ಲ ತೆಗೆದು ಹಾಕುತ್ತೇವೆ’ ಎಂದು ಅಭಯ ನೀಡಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಮಂಗಳೂರು, ಆಗಸ್ಟ್ 13: ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿಕೆ ಯೊಂದು ಭಾರೀ ವಿವಾದಾತ್ಮಕ ಸೃಷ್ಟಿಸಿದೆ. ಗೃಹ ಸಚಿವರು ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಅವರಿಗೆ ನಿಮ್ಮ ಮೇಲೆ ಯಾವುದೇ ಕೇಸು ಹಾಕಿದ್ರೂ, ಎಲ್ಲ ತೆಗೆದು ಹಾಕುತ್ತೇವೆ’ ಎಂದು ಅಭಯ ನೀಡಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಗೃಹ ಸಚಿವರ ಈ ವಿಡಿಯೋ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಠಿಸಲಿದೆ.

ಉಡುಪಿ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಬಗ್ಗೆ ಪರಿಶೀಲನೆ ನಡೆಸಲು ಇತ್ತೀಚೆಗೆ ಬಂದಿದ್ದ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂಆದ ಗೃಹಸಚಿವ ಬಸವರಾಜ ಬೊಮ್ಮಾಯಿ ಬೆಂಗಳೂರಿಗೆ ಹಿಂದಿರುಗುವ ಸಂದರ್ಭ ವಿಮಾನ ನಿಲ್ದಾಣದಲ್ಲಿ ವಿಎಚ್ ಪಿ ಮುಖಂಡ ಶರಣ್ ಪಂಪ್ ವೆಲ್ ಮತ್ತು ಕಾರ್ಯಕರ್ತರು ಭೇಟಿಯಾಗಿದ್ದರು. ಈ ಸಂದರ್ಭದಲ್ಲಿ ಬೋಮ್ಮಯಿ ಈ ಅಭಯವನ್ನು ಶರಣ್ ಪಂಪ್ ವೆಲ್ ಅವರಿಗೆ ನೀಡಿದ್ದಾರೆ. 7 ಸೆಕೆಂಡ್ ನ  ಈ ವಿಡಿಯೋ ದಲ್ಲಿ ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸ್ವತಃ ಗೃಹ ಸಚಿವರು ಈ ಮಾತನ್ನು ಹೇಳುವಾಗ ದನಿತಗ್ಗಿಸಿ ಹೇಳುತ್ತಿರುವುದು ವಿಡಿಯೋ ದಲ್ಲಿ  ಸ್ಪಷ್ಟವಾಗಿ ಕೇಳಿಸುತ್ತಿದೆ.

ವಿಎಚ್‌ಪಿಯ ಶರಣ್ ಪಂಪ್‌ವೆಲ್ ಅವರು ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಆ.12ರಂದು ನಸುಕಿನಜಾವ 2:53ಕ್ಕೆ ಗೃಹಸಚಿವರ ವಿವಾದಾತ್ಮಕ ಹೇಳಿಕೆಯ ವೀಡಿಯೊವನ್ನು ಹಂಚಿಕೊಂಡಿದ್ದರು. ವೀಡಿಯೊದಲ್ಲಿ ವಿವಾದಾತ್ಮಕ ಹೇಳಿಕೆ ಇರುವುದು ಕಂಡುಬಂದ ನಂತರ ಎಚ್ಚೆತ್ತುಕೊಂಡ ಶರಣ್ ಪಂಪ್‌ವೆಲ್, ಬಳಿಕ ಆ ಟ್ವೀಟ್‌ನ್ನು ಅಳಿಸಿ ಹಾಕಿದ್ದಾರೆ.

Video: