ಬ್ರೇಕಿಂಗ್ ನ್ಯೂಸ್
22-01-21 02:48 pm Mangalore Correspondent ಕರಾವಳಿ
ಮಂಗಳೂರು, ಜ.22: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದು ದೇವಸ್ಥಾನ, ದೈವಸ್ಥಾನಗಳನ್ನು ಅಪವಿತ್ರಗೊಳಿಸುವ ಕೃತ್ಯ ನಡೆಯುತ್ತಿದೆ. ಇನ್ನೊಂದೆಡೆ ದೇಶ ವಿರೋಧಿ ಕೃತ್ಯಗಳು, ಸಮಾಜಬಾಹಿರ ಚಟುವಟಿಕೆಗಳು ಹೆಚ್ಚುತ್ತಿವೆ. ಸಮಾಜ ವಿರೋಧಿ ಕೃತ್ಯಗಳ ಹಿಂದೆ ಎಸ್ಡಿಪಿಐ, ಪಿಎಫ್ಐ ಇರುವ ಬಗ್ಗೆ ಶಂಕೆಯಿದ್ದು, ಹಲವು ಪ್ರಕರಣಗಳಲ್ಲಿ ಈ ಸಂಘಟನೆಗಳ ಕೈವಾಡ ಸಾಬೀತಾಗಿದೆ. ಎಸ್ಡಿಪಿಐ ಮತ್ತು ಪಿಎಫ್ಐ ಬ್ಯಾನ್ ಮಾಡಬೇಕೆಂದು ರಾಜ್ಯ ಸರಕಾರವನ್ನು ಒತ್ತಾಯಿಸುತ್ತೇವೆ ಎಂದು ವಿಹಿಂಪ ಜಿಲ್ಲಾ ಕಾರ್ಯದರ್ಶಿ ಶಿವಾನಂದ ಮೆಂಡನ್ ತಿಳಿಸಿದ್ದಾರೆ.
ಕದ್ರಿಯ ವಿಶ್ವ ಹಿಂದು ಪರಿಷತ್ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, ಪೊಲೀಸರ ಮೇಲಿನ ಹಲ್ಲೆ ಪ್ರಕರಣದಲ್ಲಿ ಆರು ಮಂದಿಯನ್ನು ಬಂಧಿಸಿದ್ದು, ಆರೋಪಿಗಳೆಲ್ಲರು ಎಸ್ಡಿಪಿಐ ಮತ್ತು ಪಿಎಫ್ಐ ಸಂಘಟನೆಯಲ್ಲಿದ್ದವರು. ಆಮೂಲಕ ಕೃತ್ಯವನ್ನು ಈ ಸಂಘಟನೆಯವರೇ ಮಾಡಿದ್ದು ಎನ್ನುವುದು ಸಾಬೀತಾಗಿದೆ. ಅದರಲ್ಲೂ ಅಪ್ರಾಪ್ತ ಹುಡುಗನಿಗೆ ಡ್ರಗ್ಸ್ ತಿನ್ನಿಸಿ, ಈ ಕೃತ್ಯ ಮಾಡಿದ್ದಾರೆ. ಬೆಳ್ತಂಗಡಿಯಲ್ಲಿ ಎಸ್ಡಿಪಿಐನವರ ವಿಜಯೋತ್ಸವದಲ್ಲಿ ಪಾಕ್ ಪರ ಘೋಷಣೆ ಹಾಕಿದ್ದು, ದೇಶವಿರೋಧಿ ಕೃತ್ಯ ನಡೆಸಿರುವುದು ಸ್ಪಷ್ಟವಾಗಿದೆ.

ಸಿಟಿ ಬಸ್ ಚಾಲಕ ಸೈಡ್ ಕೊಟ್ಟಿಲ್ಲವೆಂದು ಆರೋಪಿ ಅಶ್ರಫ್ ಎಂಬಾತ ಚಾಲಕ ಮತ್ತು ಬಸ್ಸಿಗೆ ಪೆಟ್ರೋಲ್ ಸುರಿದು ಕೊಲ್ಲುವ ಪ್ರಯತ್ನ ಮಾಡಿದ್ದಾನೆ. ಇದು ಸಮಾಜದಲ್ಲಿ ಭಯ ಮೂಡಿಸುವ ಯತ್ನ. ಇದೇ ವೇಳೆ, ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮುಸ್ಲಿಂ ಯುವತಿಗೆ ಕಿರುಕುಳ ಕೊಟ್ಟ ಪ್ರಕರಣ ನಡೆದಿದ್ದು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮತ್ತೊಂದು ಕಡೆ 15 ವರ್ಷಗಳ ಹಿಂದೆ ಮುಸ್ಲಿಂ ಆಗಿ ಮತಾಂತರ ಆಗಿದ್ದ ಮಹಿಳೆಗೆ ಎಸ್ಡಿಪಿಐ ಮುಖಂಡನೇ ಅತ್ಯಾಚಾರ ಎಸಗಿ, ಆಕೆಯ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ನಡೆದಿದ್ದು ಆರೋಪಿಯನ್ನು ಇನ್ನೂ ಪೊಲೀಸರು ಬಂಧಿಸಿಲ್ಲ. ಇವೆಲ್ಲ ಪ್ರಕರಣಗಳು ಸಮಾಜದಲ್ಲಿ ಶಾಂತಿ ಕೆಡಿಸಿ, ಸಾಮರಸ್ಯಕ್ಕೆ ಧಕ್ಕೆ ತರುವ ಪ್ರಯತ್ನಗಳಾಗಿದ್ದು, ಇದರ ಹಿಂದೆ ಷಡ್ಯಂತ್ರ ಅಡಗಿದ್ದು, ಹಿಂದಿನ ರೂವಾರಿ ಯಾರಿದ್ದಾರೆ ಅವರನ್ನು ಪತ್ತೆ ಮಾಡುವ ಕೆಲಸ ಆಗಬೇಕು ಎಂದು ಶಿವಾನಂದ ಮೆಂಡನ್ ಒತ್ತಾಯಿಸಿದರು.

ಇದೇ ವೇಳೆ, ಮಾತನಾಡಿದ ಬಜರಂಗದಳ ಜಿಲ್ಲಾ ಸಂಚಾಲಕ್ ಪುನೀತ್ ಅತ್ತಾವರ, ಜಿಲ್ಲೆಯಲ್ಲಿ ಸರಣಿಯಾಗಿ ನಡೆಯುತ್ತಿರುವ ಸಮಾಜ ವಿರೋಧಿ ಕೃತ್ಯಗಳನ್ನು ಖಂಡಿಸಿ, ಜ.25ರಂದು ಸಂಜೆ ನಾಲ್ಕು ಗಂಟೆಗೆ ತೊಕ್ಕೊಟ್ಟು ಜಂಕ್ಷನ್ನಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸಲಿದ್ದೇವೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ವಿಹಿಂಪ ಜಿಲ್ಲಾಧ್ಯಕ್ಷ ಗೋಪಾಲ ಕುತ್ತಾರ್, ವಿಹಿಂಪ ಜಿಲ್ಲಾ ಸಹ ಕಾರ್ಯದರ್ಶಿ ರವಿ ಅಸೈಗೋಳಿ ಉಪಸ್ಥಿತರಿದ್ದರು.
minate SDPI and Pfi states bajrang dal Sharon Pumpwell in Mangalore. Sdpi and Pfi are the ones behind provocative activities in Mangalore.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 06:28 pm
HK News Desk
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm