ಬ್ರೇಕಿಂಗ್ ನ್ಯೂಸ್
23-01-21 03:31 pm Mangalore Correspondent ಕರಾವಳಿ
ಮಂಗಳೂರು, ಜ.23 : ಮಂಗಳೂರು - ಕಾಸರಗೋಡು ರಾಷ್ಟ್ರೀಯ ಹೆದ್ದಾರಿಯ ನೇತ್ರಾವತಿ ಸೇತುವೆ ಸಮೀಪ ವಾಹನ ಸವಾರರು ತ್ಯಾಜ್ಯ ಎಸೆಯುವ ಜಾಗದಲ್ಲಿ ಹಸಿರು ದಳ ಸಂಸ್ಥೆಯ ಸದಸ್ಯರು ಜಾಗೃತಿ ಮೂಡಿಸುವ ಕಾರ್ಯವನ್ನು ಶಾಸಕ ವೇದವ್ಯಾಸ್ ಕಾಮತ್ ಶ್ಲಾಘಿಸಿದ್ದಾರೆ.
ಸ್ಥಳಕ್ಕೆ ತೆರಳಿದ ಶಾಸಕ ಕಾಮತ್ ಅವರು, ನೇತ್ರಾವತಿ ಸೇತುವೆಯ ಬಳಿ ಖಾಲಿ ಜಾಗದಲ್ಲಿ ಪ್ರತಿನಿತ್ಯ ವಾಹನ ಸವಾರರು ಕಸ ಎಸೆದು ಹೋಗುವ ಕುರಿತು ಮಾಹಿತಿ ನೀಡಿದ್ದರು. ಹಲವಾರು ಬಾರಿ ಸ್ಥಳವನ್ನು ಸ್ವಚ್ಛಗೊಳಿಸಿದರು ತ್ಯಾಜ್ಯ ಎಸೆಯುವುದು ನಿಂತಿರಲಿಲ್ಲ. ಇತ್ತೀಚೆಗೆ ಕಳೆದ ಕೆಲ ಸಮಯದಿಂದ ಹಸಿರು ದಳ ಸಂಸ್ಥೆಯ ಸದಸ್ಯರು ಈ ಜಾಗದಲ್ಲಿ ಪ್ಲೆಕಾರ್ಡ್ ಹಿಡಿದು ಜಾಗೃತಿ ಮೂಡಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಅವರ ಕಾರ್ಯ ಶ್ಲಾಘನೀಯ ಎಂದು ಶಾಸಕ ಕಾಮತ್ ಹೇಳಿದರು.

ಸ್ವಚ್ಚತಾ ಕಾರ್ಯಗಳು ಸೀಮಿತ ಸಂಸ್ಥೆಗಳು ಅಥವಾ ವ್ಯಕ್ತಿಯಿಂದ ಆಗುವಂತದ್ದಲ್ಲ. ಪ್ರತಿಯೊಬ್ಬ ನಾಗರಿಕರಿಗೂ ತನ್ನದೇ ಆದ ಜವಬ್ದಾರಿಗಳಿರುತ್ತವೆ. ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದು, ತ್ಯಾಜ್ಯಗಳನ್ನು ಎಸೆಯುವುದರಿಂದ ವಿವಿಧ ಸಮಸ್ಯೆಗಳು ತಲೆದೋರುತ್ತವೆ. ಹಾಗಾಗಿ ಪ್ರತಿಯೊಬ್ಬರೂ ಕೂಡ ಸ್ವಚ್ಚತೆಯ ನಿಟ್ಟಿನಲ್ಲಿ ಚಿಂತಿಸಬೇಕು. ಆ ಮೂಲಕ ಸ್ವಚ್ಛ ಭಾರತದ ಪರಿಕಲ್ಪನೆ ಸಾಕಾರಗೊಳಿಸುವ ನಿಟ್ಟಿನಲ್ಲಿ ಕೈಜೋಡಿಸಬೇಕೆಂದು ಶಾಸಕ ಕಾಮತ್ ತಿಳಿಸಿದರು.
ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ದಿವಾಕರ್ ಪಾಂಡೇಶ್ವರ, ಪಾಲಿಕೆ ಸದಸ್ಯರಾದ ವೀಣಾ ಮಂಗಳ, ಬಿಜೆಪಿ ಪ್ರಮುಖರಾದ ಸುರೇಂದ್ರ ಜೆಪ್ಪಿನಮೊಗರು, ಹಸಿರು ದಳ ಸಂಸ್ಥೆಯ ಸದಸ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 06:28 pm
HK News Desk
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm