ಬ್ರೇಕಿಂಗ್ ನ್ಯೂಸ್
23-01-21 05:29 pm Mangalore Correspondent ಕರಾವಳಿ
ಮಂಗಳೂರು, ಜ.23 : ಮಂಗಳೂರು ಬಹಳ ಸಾಮರಸ್ಯದಿಂದ ಇರುವ ನಗರ. ಇತರ ರಾಜ್ಯಗಳಲ್ಲದೆ, ದೇಶ -ವಿದೇಶಗಳಿಂದಲೂ ಬಂದು ಜನರು ಇಲ್ಲಿ ವಾಸಿಸುತ್ತಿದ್ದಾರೆ. ಕಿಡಿಗೇಡಿಗಳ ಕೆಲವು ಕೃತ್ಯದಿಂದಾಗಿ ಮಂಗಳೂರಿನ ಹೆಸರು ಹಾಳಾಗಬಾರದು ಎಂದು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಎನ್. ಹೇಳಿದರು.
ಈ ಬಗ್ಗೆ ವಿಡಿಯೋ ಬಿಡುಗಡೆ ಮಾಡಿರುವ ಕಮಿಷನರ್, ಮಂಗಳೂರಿನಲ್ಲಿ ಇತ್ತೀಚೆಗೆ ಧಾರ್ಮಿಕ ಕೇಂದ್ರಗಳ ಹುಂಡಿಯಲ್ಲಿ ಅನುಚಿತ ವಸ್ತುಗಳು ಹಾಗೂ ಅಸಹ್ಯಕರ ರೀತಿಯಲ್ಲಿ ಬರೆದ ಕಾಗದಗಳನ್ನು ಹಾಕಿದ್ದು ಪೊಲೀಸ್ ಇಲಾಖೆಯ ಗಮನಕ್ಕೆ ಬಂದಿದೆ. ಇದಕ್ಕೆ ಸಂಬಂಧಿಸಿದಂತೆ ನಾಲ್ಕೈದು ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ ಎಂದರು.
ಈ ರೀತಿಯ ಕೃತ್ಯಗಳಲ್ಲಿ ತೊಡಗಿಸಿಕೊಂಡವರು ತಕ್ಷಣ ಇದನ್ನು ನಿಲ್ಲಿಸಬೇಕು. ಅಲ್ಲದೆ ಇದಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಪತ್ತೆಹಚ್ಚುವ ಕೆಲಸ ಶೀಘ್ರ ಮಾಡಲಿದ್ದೇವೆ. ಯಾವುದೇ ಧರ್ಮದ ಧಾರ್ಮಿಕ ಕೇಂದ್ರಗಳು ಇರಬಹುದು, ಅಲ್ಲಿನ ಆಡಳಿತ ಸಮಿತಿ ಇಂತಹ ಕಡೆಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸುವುದು. ಸೂಕ್ತವಾದ ಭದ್ರತಾ ವ್ಯವಸ್ಥೆ ನಿಯೋಜಿಸುವ ಕಾರ್ಯ ಮಾಡಬೇಕೆಂದು ಕಮಿಷನರ್ ಮನವಿ ಮಾಡಿದರು.
ಸಾರ್ವಜನಿಕರು ಇಂತಹ ಕೃತ್ಯಗಳ ಬಗ್ಗೆ ಮಾಹಿತಿ ಇದ್ದಲ್ಲಿ ಪೊಲೀಸ್ ಇಲಾಖೆ ಅಥವಾ ನೇರವಾಗಿ ನನಗೂ ಮಾಹಿತಿ ನೀಡಬಹುದು. ಈ ಮೂಲಕ ಇಂತಹ ಕೃತ್ಯ ನಡೆಸುವ ಕಿಡಿಗೇಡಿಗಳನ್ನು ಕಾನೂನಿನ ಚೌಕಟ್ಟಿನಲ್ಲಿ ಬಂಧಿಸಲು ಸಹಕಾರಿಯಾಗುತ್ತದೆ. ಸಾರ್ವಜನಿಕರು ಈ ಬಗ್ಗೆ ಮಾಹಿತಿ ಇದ್ದಲ್ಲಿ ಪೊಲೀಸ್ ಕಂಟ್ರೋಲ್ ದೂರವಾಣಿ ಸಂಖ್ಯೆ 9480802300ಗೆ ವಾಟ್ಸ್ ಆ್ಯಪ್ ಅಥವಾ ಮೆಸೇಜ್ ಮೂಲಕ ತಿಳಿಸಬಹುದು ಎಂದು ಪೊಲೀಸ್ ಕಮಿಷನರ್ ವಿನಂತಿಸಿಕೊಂಡರು.
(1/2)Appeal to people of Mangaluru Commisionerate to share information regarding any untoward developments in your neighborhood. pic.twitter.com/DvWTMB3PUz
— N. Shashi Kumar CP Mangaluru City (@compolmlr) January 23, 2021
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 06:28 pm
HK News Desk
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm