ಬ್ರೇಕಿಂಗ್ ನ್ಯೂಸ್
25-01-21 03:05 pm Mangalore Correspondent ಕರಾವಳಿ
ಉಳ್ಳಾಲ, ಜ.25 : ಉಳ್ಳಾಲ ಕೊರಗಜ್ಜನ ಕಟ್ಟೆ ಮತ್ತು ಕೊಣಾಜೆ ಮುಲಾರ ಗೋಪಾಲಕೃಷ್ಣ ಮಂದಿರದಲ್ಲಿ ಕಿಡಿಗೇಡಿಗಳು ವಿಕೃತ ಅಟ್ಟಹಾಸ ಮೆರೆದಿದ್ದು ಇನ್ನೂ ಆರೋಪಿಗಳ ಬಂಧನ ಸಾಧ್ಯವಾಗಿಲ್ಲ. ಹಿಂದು ಸಂಘಟನೆಗಳು ಈಗ ಪ್ರತಿಭಟನೆಗೆ ಮುಂದಾಗಿದ್ದು ಕೇಳಿದ್ದೇನೆ. ಆದರೆ, ಅವರು ತೊಕ್ಕೊಟ್ಟಿನಲ್ಲಿ ಪ್ರತಿಭಟನೆ ನಡೆಸುವುದಲ್ಲ. ಪ್ರತಿಭಟನೆಗೆ ಈ ಜಾಗ ಸೂಕ್ತವಲ್ಲ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮನೆ ಮುಂದೆ ಪ್ರತಿಭಟಿಸಲಿ ಎಂದು ಇಂಟಕ್ ಮುಖಂಡ ದಿನಕರ್ ಶೆಟ್ಟಿ ವ್ಯಂಗ್ಯವಾಡಿದ್ದಾರೆ.

ಉಳ್ಳಾಲ ಕೊರಗಜ್ಜನ ಕಟ್ಟೆ ಹಾಗೂ ಕೊಣಾಜೆ ಮುಲಾರ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಅಪವಿತ್ರ, ಅತ್ತಾವರ ಬಬ್ಬುಸ್ವಾಮಿಯ ಕಾಣಿಕೆ ಹುಂಡಿಗೂ ಅವಮಾನ, ತೊಕ್ಕೊಟ್ಟಿನ ಬೀಫ್ ಸ್ಟಾಲ್ ಗೆ ಕಿಡಿಗೇಡಿಗಳಿಂದ ಬೆಂಕಿ ಹಚ್ಚಿ ಜಿಲ್ಲೆಯಲ್ಲಿ ಶಾಂತಿ ಕದಡಿಸುವ ಹುನ್ನಾರ ನಡೆಯುತ್ತಿದ್ದು, ಕ್ಷೇತ್ರದಲ್ಲಿ ಕೋಮು ಸೌಹಾರ್ದವನ್ನು ಹಾಳು ಮಾಡಲು ಪ್ರಯತ್ನಿಸಿದ ಆರೋಪಿಗಳನ್ನು ಶೀಘ್ರ ಪತ್ತೆ ಹಚ್ಚಬೇಕೆಂದು ಆಗ್ರಹಿಸಿ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ವತಿಯಿಂದ ತೊಕ್ಕೊಟ್ಟು ಕೇಂದ್ರ ಬಸ್ ನಿಲ್ದಾಣದಲ್ಲಿ ಇಂದು ನಡೆದ ಪ್ರತಿಭಟನೆಯನ್ನುದ್ದೇಶಿಸಿ ಅವರು ಮಾತನಾಡಿದರು.

ಕೊರಗಜ್ಜನ ಕ್ಷೇತ್ರಕ್ಕೆ ಧಕ್ಕೆ ಉಂಟು ಮಾಡಿದರೆ ಕ್ಷೇತ್ರದ ಶಾಸಕ ಖಾದರ್ ಸುಮ್ಮನೆ ಇರೋರಲ್ಲ. ಅವರ ಮುತುವರ್ಜಿಯಿಂದ ನಾವೆಲ್ಲ ಇಲ್ಲಿ ಸೇರಿದ್ದೇವೆ, ಹೊರತು ರಾಜಕೀಯ ಮಾಡಲು ಅಲ್ಲ. ರಾಜಕೀಯ ಮಾಡಲು, ಸಂಘಟನೆಗಳ ಮುಖಾಂತರ ಪ್ರತಿಭಟನೆ ನಡೆಸೋರು ಜಿಲ್ಲಾ ಉಸ್ತುವಾರಿ ಸಚಿವರ ಮನೆ ಮುಂದೆ ಪ್ರತಿಭಟಿಸೋದೆ ಸೂಕ್ತ ಎಂದರು. ರಾಜ್ಯದಲ್ಲಿ ನಿಮ್ಮದೇ ಸರಕಾರ ಇರುವಾಗ ತೊಕ್ಕೊಟ್ಟಿನಲ್ಲಿ ಇಂತಹ ಪ್ರತಿಭಟನೆಗಳ ಅಗತ್ಯ ಇದೆಯೇ ಎಂದು ಪ್ರಶ್ನಿಸಿದರು.
Miscreants Cruel act in temples in Ullal and Konaje congress Dinesh Sheety Slams at BJP for showing Negligence.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 06:28 pm
HK News Desk
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm