ಬ್ರೇಕಿಂಗ್ ನ್ಯೂಸ್
03-02-21 10:38 am Mangalore Correspondent ಕರಾವಳಿ
ಸುಬ್ರಹ್ಮಣ್ಯ, ಫೆ.3: ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಕೈಕಂಬ ಎಂಬಲ್ಲಿ ಮನೆಯ ಟಾಯ್ಲೆಟ್ ಕೋಣೆಯ ಒಳಗೆ ಚಿರತೆ ಮತ್ತು ನಾಯಿ ಬಂಧಿಯಾಗಿದ್ದು ಸಾರ್ವಜನಿಕರ ಕುತೂಹಲಕ್ಕೆ ಕಾರಣವಾಗಿದೆ.
ಸುಬ್ರಹ್ಮಣ್ಯ ಸಮೀಪದ ಕೈಕಂಬ ರೇಗಪ್ಪ ಎಂಬವರ ಮನೆಯಲ್ಲಿ ಘಟನೆ ನಡೆದಿದೆ. ಮನೆಯ ನಾಯಿಯನ್ನು ಹಿಡಿಯಲು ಚಿರತೆ ಓಡಿಸಿಕೊಂಡು ಬಂದಿದ್ದು ನಾಯಿ ಹೆದರಿ ಟಾಯ್ಲೆಟ್ ಕೋಣೆಗೆ ನುಗ್ಗಿದೆ. ಅಟ್ಟಿಸಿಕೊಂಡು ಹೋದ ಚಿರತೆಯೂ ಅದರ ಒಳಕ್ಕೆ ಹೋಗಿದೆ. ಅಷ್ಟರಲ್ಲಿ ಮನೆಯ ಮಹಿಳೆ ಹಿಂಬಾಲಿಸಿಕೊಂಡು ಬಂದಿದ್ದು ಟಾಯ್ಲೆಟ್ ಬಾಗಿಲು ಹಾಕಿದ್ದಾರೆ.


ಹೀಗಾಗಿ ಚಿರತೆ ಮತ್ತು ನಾಯಿ ಎರಡೂ ಟಾಯ್ಲೆಟ್ ಒಳಗೆ ಸಿಕ್ಕಿಬಿದ್ದಿದೆ. ನಾಯಿ ಭಯದಿಂದ ನಡುಗುತ್ತಿದ್ದರೆ, ಚಿರತೆ ಆರಾಮದಲ್ಲಿ ಮಲಗಿಬಿಟ್ಟಿದೆ. ಬಳಿಕ ಸ್ಥಳೀಯರು ಸೇರಿ, ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಅರಿವಳಿಕೆ ನೀಡಿ ಚಿರತೆಯನ್ನು ಹಿಡಿಯಲು ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ.
ಇನ್ನು ಸಾರ್ವಜನಿಕರು ಸ್ಥಳಕ್ಕೆ ಜಮಾಯಿಸಿದ್ದು, ಚಿರತೆಯನ್ನು ಕೆರಳಿಸದಂತೆ ಅರಣ್ಯ ಅಧಿಕಾರಿಗಳು ವಿನಂತಿ ಮಾಡಿದ್ದಾರೆ. ಸ್ಥಳದಲ್ಲಿ ಸುಬ್ರಹ್ಮಣ್ಯ ಪೊಲೀಸರು ಭದ್ರತೆ ಏರ್ಪಡಿಸಿದ್ದಾರೆ.
Video:
A Cheetah which was chasing a dog for hunt finally ended up sticking in the toilet of a house in Subramanya, Mangalore. The forest officials have rushed to the spot.
22-12-25 06:29 pm
HK News Desk
ಸ್ಥಳೀಯ ಮಟ್ಟದಲ್ಲೇ ಗೊಂದಲ ಬಗೆಹರಿಸಿಕೊಳ್ಳಿ, ಎಲ್ಲದಕ...
21-12-25 05:33 pm
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
22-12-25 06:32 pm
HK News Desk
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
22-12-25 06:36 pm
Mangalore Correspondent
ಕೋಳಿ ಅಂಕದಲ್ಲಿ ಪೆಟ್ಟು ಕೊಡಲು ಇವರ ಅಪ್ಪನ ಜಾಗವಾ?...
22-12-25 12:26 pm
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
22-12-25 04:00 pm
Mangalore Correspondent
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm