ಬ್ರೇಕಿಂಗ್ ನ್ಯೂಸ್
04-02-21 05:03 pm Mangalore Correspondent ಕರಾವಳಿ
ಮಂಗಳೂರು, ಫೆ.4 : ಇಲ್ಲಿನ ಬೈಕಂಪಾಡಿಯಲ್ಲಿ ಇರುವ ಮಂಗಳೂರು ಎಪಿಎಂಸಿ ಯಾರ್ಡಿನ ಗೋದಾಮು ಹಂಚಿಕೆಯ ಪ್ರಕ್ರಿಯೆಗೆ ರಾಜ್ಯ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಮಂಗಳೂರು ಸೆಂಟ್ರಲ್ ಮಾರ್ಕೆಟ್ನಲ್ಲಿದ್ದ ಹಣ್ಣು ಮತ್ತು ತರಕಾರಿ ಸಹಿತ ಸುಮಾರು 200ಕ್ಕೂ ಅಧಿಕ ವ್ಯಾಪಾರಿಗಳಿಗೆ 390 ಗೋದಾಮುಗಳನ್ನು ಹಂಚಿಕೆ ಮಾಡಲಾಗಿತ್ತು. ಜೇಷ್ಠತೆಯ ಆಧಾರದ ಹಂಚಿಕೆಯಲ್ಲಿ ಆಗಿರುವ ಲೋಪಗಳು ಮತ್ತು ವ್ಯಾಪಾರಕ್ಕೆ ಯೋಗ್ಯವಲ್ಲದ ಗೋದಾಮುಗಳನ್ನು ಹಂಚಿಕೆ ಮಾಡಿರುವುದು, ಪರಿಶಿಷ್ಟ ಜಾತಿ/ಪಂಗಡಕ್ಕೆ ಮೀಸಲಿಟ್ಟಿರುವ ಗೋದಾಮುಗಳನ್ನು ನಿಯಮಬಾಹಿರವಾಗಿ ಸಾಮಾನ್ಯ ವರ್ಗದ ಬಲಾಢ್ಯ ವರ್ತಕರಿಗೆ ಹಂಚಿಕೆ ಮಾಡಿರುವುದು, ಕಾರ್ನರ್ ಅಂಗಡಿಗಳನ್ನು ಹರಾಜಿಗಿಡದೆ ನೇರವಾಗಿ ಹಂಚಿಕೆ ಮಾಡಲಾಗಿದೆ ಎಂದು ಆರೋಪಿಸಿದ್ದ ಮಂಗಳೂರು ಎಪಿಎಂಸಿ ವರ್ತಕರ ಸಂಘವು ಮಂಗಳೂರು ಎಪಿಎಂಸಿ ಅಧಿಕಾರಿಗಳ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್ನಲ್ಲಿ ದಾವೆ ಹೂಡಿತ್ತು.

ಅದಲ್ಲದೆ ಎಪಿಎಂಸಿಯ ಸುಮಾರು 170ಕ್ಕೂ ಅಧಿಕ ವರ್ತಕರು, ನಿಗದಿತ ಡಿಡಿ ಪಾವತಿಸದೆ ಗೋದಾಮು ಹಂಚಿಕೆ ಪ್ರಕ್ರಿಯೆಯನ್ನು ವಿರೋಧಿಸಿ ಕಾನೂನು ಹೋರಾಟ ನಡೆಸುವ ತೀರ್ಮಾನ ಕೈಗೊಂಡಿದ್ದರು.
ದೂರಿನಂತೆ ವಿಚಾರಣೆಗೆ ಕೈಗೆತ್ತಿಕೊಂಡ ಹೈಕೋರ್ಟ್ ಮಂಗಳೂರು ಎಪಿಎಂಸಿ ಅಧಿಕಾರಿಗಳ ಲೋಪವನ್ನು ಗುರುತಿಸಿ ಗೋದಾಮು ಹಂಚಿಕೆ ಪ್ರಕ್ರಿಯೆಗೆ ತಡೆಯಾಜ್ಞೆ ನೀಡಿ ಆದೇಶ ನೀಡಿದೆ.
ಗೋದಾಮು ಹಂಚಿಕೆ ಪ್ರಕ್ರಿಯೆಗೆ ರಾಜ್ಯ ಹೈಕೋರ್ಟ್ ನೀಡಿದ ತೀರ್ಪನ್ನು ಮಂಗಳೂರು ಎಪಿಎಂಸಿ ವರ್ತಕರ ಸಂಘದ ಅಧ್ಯಕ್ಷ ಭರತ್ ರಾಜ್ ಮತ್ತು ಪ್ರಧಾನ ಕಾರ್ಯದರ್ಶಿ ಬಿ.ಕೆ.ಇಮ್ತಿಯಾಝ್ ಸ್ವಾಗತಿಸಿದ್ದಾರೆ. ವರ್ತಕರಿಗೆ ನ್ಯಾಯ ಸಿಗುವವರೆಗೆ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.
Mangalore Irregularities in distribution of cashews by ampc the district court issues stay order on Apmc.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 08:49 pm
HK News Desk
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm