ಬ್ರೇಕಿಂಗ್ ನ್ಯೂಸ್
05-02-21 08:51 pm Mangaluru Correspondent ಕರಾವಳಿ
ಮಂಗಳೂರು, ಫೆ.5: ಪೆಟ್ರೋಲ್, ಡೀಸೆಲ್ ಬೆಲೆ ವಿಪರೀತ ಏರಿಕೆ ಆಗಿರುವುದನ್ನು ವಿರೋಧಿಸಿ ಮಂಗಳೂರಿನಲ್ಲಿ ಡಿವೈಎಫ್ಐ ವತಿಯಿಂದ ಸ್ಕೂಟರನ್ನು ತಳ್ಳುಗಾಡಿಯಿಂದ ಎಳೆದು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಎ.ಬಿ.ಶೆಟ್ಟಿ ಸರ್ಕಲ್ ಬಳಿಯಿಂದ ಕ್ಲಾಕ್ ಟವರ್ ವೃತ್ತದ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಕಾರ್ಯಕರ್ತರು ಕೇಂದ್ರ ಸರಕಾರದ ವಿರುದ್ಧ ಧಿಕ್ಕಾರ ಕೂಗಿದರು. ಬಳಿಕ ಪ್ರತಿಭಟನೆಯಲ್ಲಿ ಮಾತನಾಡಿದ ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ಬಿಜೆಪಿಯವರು 2013ರಲ್ಲಿ ಪೆಟ್ರೋಲ್ ದರ 80 ರೂ. ಆಗಿದ್ದಾಗ ಭಾರತ್ ಬಂದ್ ನಡೆಸಿದ್ದರು. ತಾವು ಅಧಿಕಾರಕ್ಕೆ ಬಂದಲ್ಲಿ ಪೆಟ್ರೋಲಿಗೆ 50 ರೂ. ಮಾಡ್ತೇವೆ ಎಂದಿದ್ದರು. ಈಗ ಅಧಿಕಾರಕ್ಕೆ ಬಂದು ಆರು ವರ್ಷ ಕಳೆದಿದೆ. ಯಾಕೆ ಪೆಟ್ರೋಲ್ ದರ ಇಳಿಸಿಲ್ಲ ಎಂದು ಪ್ರಶ್ನೆ ಮಾಡಿದರು.
ಈಗಂತೂ ವಿಪರೀತವಾಗಿ ದರ ಏರಿಕೆ ಮಾಡಿದ್ದಾರೆ. ಜೊತೆಗೆ ಡೀಸೆಲ್, ಎಲ್ಪಿಜಿ ದರವನ್ನೂ ಏರಿಸಿ ಜನಸಾಮಾನ್ಯರ ಮೇಲೆ ಬರೆ ಹಾಕಿದ್ದಾರೆ. ಇವರಿಗೆ ಅಂಬಾನಿ, ಅದಾನಿಯಂತಹ ಕಂಪನಿ ಧಣಿಗಳು ಅಷ್ಟೇ ಮುಖ್ಯವಾಗಿದ್ದಾರೆ. ಕಂಪನಿಗಳ ಸಾಲಮನ್ನಾ ಮಾಡುತ್ತಾರೆ. ಕಳೆದ ಬಾರಿ 1.90 ಲಕ್ಷ ಕೋಟಿ ಸಾಲಮನ್ನಾ ಮಾಡಿದ್ದಾರೆ. ಇವರಿಗೆ ಸಾಮಾನ್ಯ ಜನರ ಮೇಲೆ ಕಾಳಜಿಯೇ ಇಲ್ಲ. ಕೊರೊನಾ ಲಾಕ್ಡೌನ್ ಸಂದರ್ಭದಲ್ಲಿ ತೈಲ ದರ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ವಿಪರೀತ ಇಳಿಕೆಯಾಗಿತ್ತು. ಆದರೆ, ಜನರಿಗೆ ಅದರ ಲಾಭ ಸಿಕ್ಕಿಲ್ಲ. ಈಗಲೂ 45 ಡಾಲರಿಗೆ ತೈಲ ಬ್ಯಾರೆಲ್ ಸಿಗುತ್ತಿದೆ. ಇವರು ಇತಿಹಾಸದಲ್ಲೇ ಅತಿ ಹೆಚ್ಚು ದರ ಪೀಕಿಸುತ್ತಿದ್ದಾರೆ ಎಂದು ಸಂತೋಷ್ ಹೇಳಿದರು.
ಪ್ರತಿಭಟನೆಯಲ್ಲಿ ಡಿವೈಎಫ್ಐ ದ.ಕ ಜಿಲ್ಲಾದ್ಯಕ್ಷ ಬಿ.ಕೆ ಇಮ್ತಿಯಾಜ್ , ಜೆಎಮ್ಎಸ್ ಜಿಲ್ಲಾ ಮುಖಂಡರಾದ ಜಯಂತಿ ಬಿ ಶೆಟ್ಟಿ, ಭಾರತಿ ಬೋಳಾರ್, ಅಸುಂತ ಡಿಸೋಜಾ, ಪ್ರಮಿಳಾ ದೇವಾಡಿಗ, ಡಿವೈಎಫ್ಐ ನಗರ ಸಮಿತಿ ಮುಖಂಡರಾದ ಎ.ಬಿ ನೌಶದ್ , ರಫೀಕ್ ಪಿ.ಜಿ, ದೀಪಕ್ ಬಜಾಲ್, ಚರಣ್ ಶೆಟ್ಟಿ ಪಂಜಿಮೊಗರು, ಹನೀಫ್ ಮುಂತಾದವರು ಉಪಸ್ಥಿತರಿದ್ದರು.
Activists today staged a protest against the steep rise in petrol and diesel prices near in Mangalore city by carrying their two-wheelers in procession, blaming the BJP-led Centre for the same.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 09:22 pm
Mangalore Correspondent
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm
Hyderabad Murder, Mother suicide: ತೆಂಗಿನಕಾಯಿ...
18-04-25 08:14 pm