ಬ್ರೇಕಿಂಗ್ ನ್ಯೂಸ್
06-02-21 01:24 pm Mangalore Correspondent ಕರಾವಳಿ
ಮಂಗಳೂರು, ಫೆ.6 : ಯುವ ಕಾಂಗ್ರೆಸ್ ದಕ್ಷಿಣ ಬ್ಲಾಕ್ ಪ್ರಧಾನ ಕಾರ್ಯದರ್ಶಿಯಾಗಿ ಸಂಜನಾ ಛಲವಾದಿ ಆಯ್ಕೆಯಾಗಿದ್ದಾರೆ. ಈ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲ ಬಾರಿಗೆ ಮಂಗಳಮುಖಿ ಒಬ್ಬರಿಗೆ ರಾಜಕೀಯ ಪಕ್ಷದಲ್ಲಿ ಪದಾಧಿಕಾರಿ ಸ್ಥಾನ ದೊರಕಿದೆ.
ಮಂಗಳೂರಿನಲ್ಲಿ ಬ್ಯೂಟಿಷಿಯನ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಪರಿವರ್ತನ್ ಟ್ರಾನ್ಸ್ ಕ್ವೀನ್-2018 ಸಂಜನಾ ಚಲವಾದಿಯವರು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ನಡೆಸಿರುವ ಯುವ ಕಾಂಗ್ರೆಸ್ ಮಂಗಳೂರು ದಕ್ಷಿಣ ಬ್ಲಾಕ್ ಅಧ್ಯಕ್ಷ ಸ್ಥಾನದ ಚುನಾವಣೆಗೆ ಮಹಿಳಾ ವಿಭಾಗದಿಂದ ಸ್ಪರ್ಧಿಸಿದ್ದರು. ಜನವರಿ 10, 11 ಮತ್ತು 12 ರಂದು ಆನ್ಲೈನ್ ಮೂಲಕ ಮತದಾನ ನಡೆದಿದ್ದು, ಇದೀಗ ಫಲಿತಾಂಶ ಪ್ರಕಟಗೊಂಡಿದೆ. ಅಧ್ಯಕ್ಷರಾಗಿ ಶಿವ, ಉಪಾಧ್ಯಕ್ಷರಾಗಿ ಸೋಹನ್, ದೀಕ್ಷಿತ್ ಪೂಜಾರಿ ಮತ್ತು ದಕ್ಷಿಣ ಬ್ಲಾಕ್ ಪ್ರಧಾನ ಕಾರ್ಯದರ್ಶಿಯಾಗಿ ಸಂಜನಾ ಚಲವಾದಿ ಆಯ್ಕೆಯಾಗಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಂಜನಾ ಛಲವಾದಿ, ಯೂತ್ ಕಾಂಗ್ರೆಸ್ ದಕ್ಷಿಣ ಬ್ಲಾಕ್ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವುದು ಸಂತೋಷ ತಂದಿದೆ. ಮಂಗಳಮುಖಿಯರೆಂದರೆ ಬೇಡಿ ಬದುಕುವವರು, ಲೈಂಗಿಕ ಕಾರ್ಯಕರ್ತರು ಎಂಬ ಭಾವನೆಯಿದೆ. ಅವರಿಗೆ ಯಾವ ಸ್ಥಾನಮಾನವೂ ಸಿಗುತ್ತಿಲ್ಲ ಎಂಬ ಬೇಸರ ಕಾಡುತ್ತಲೇ ಇತ್ತು. ನಾನು ಇದನ್ನೆಲ್ಲಾ ದಾಟಿ ಮುಂದೆ ಬರುತ್ತೇನೆಂಬ ಛಲದಿಂದ ಹೋರಾಟ ನಡೆಸಿದ್ದರ ಫಲವಾಗಿ ರಾಜಕೀಯದಲ್ಲಿ ಸ್ಥಾನ ದೊರಕಿದೆ. ನನ್ನ ಊರಲ್ಲಿ ದೊರಕದ ಗೌರವವನ್ನು ನನಗೆ ಮಂಗಳೂರಿಗರು ನೀಡಿದ್ದಾರೆ. ಇದಕ್ಕೆ ನಾನು ಆಭಾರಿಯಾಗಿದ್ದೇನೆ ಎಂದು ಸಂಜನಾ ಸಂತಸ ವ್ಯಕ್ತಪಡಿಸಿದ್ದಾರೆ.
ನನ್ನನ್ನು ಸೇರಿಸಿ ಮಂಗಳಮುಖಿಯರಿಗೆ ಉದ್ಯೋಗ ಹಾಗೂ ವಸತಿಯ ಅಭದ್ರತೆ ಕಾಡುತ್ತಿದ್ದು, ಸಮಾಜದಲ್ಲಿ ಎಲ್ಲರಂತೆ ಮಂಗಳಮುಖಿಯರಿಗೂ ಸಮಾನ ಅವಕಾಶ, ಸ್ಥಾನಮಾನ ದೊರೆಯುವಂತೆ ಹೋರಾಟ ಮಾಡುತ್ತೇನೆ ಎಂದು ಹೇಳಿದರು.
Congress gives position of Block Congress Secretary to Sanjana a Transgender which is first in Dakshina Kannada.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 08:49 pm
HK News Desk
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm