ಬ್ರೇಕಿಂಗ್ ನ್ಯೂಸ್
07-02-21 09:45 pm Mangaluru Correspondent ಕರಾವಳಿ
ಮೂಡುಬಿದ್ರೆ, ಫೆ.7: ಎಸ್ ಡಿಪಿಐ ಮುಖಂಡ ರಿಯಾಜ್ ಫರಂಗಿಪೇಟೆ ಸಮಾಜದಲ್ಲಿ ದ್ವೇಷ , ಕೋಮು ಗಲಭೆಯನ್ನು ಎಬ್ಬಿಸಬೇಕೆನ್ನುವ ದೃಷ್ಟಿಯಿಂದ ತನ್ನ ಕಾರ್ಯಕರ್ತರನ್ನು ಸಂಘ ಪರಿವಾರದ ವಿರುದ್ಧ ಎತ್ತಿ ಕಟ್ಟುತ್ತಿದ್ದಾರೆ. ಸಾರ್ವಜನಿಕ ಭಾಷಣದಲ್ಲಿ ಮತ್ತೊಮ್ಮೆ ತಾಂಟ್ ರೇ ತಾಂಟ್ ಹೇಳಿಕೆ ನೀಡಿದ್ದು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು ಅಶಾಂತಿಗೆ ಕಾರಣವಾಗುತ್ತಿದ್ದಾರೆ. ಇವರ ವಿರುದ್ಧ ಎಫ್ಐಆರ್ ದಾಖಲಿಸಿ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಹಿಂದು ಜಾಗರಣ ವೇದಿಕೆಯಿಂದ ಮೂಡುಬಿದ್ರೆ ಠಾಣೆಗೆ ದೂರು ನೀಡಲಾಗಿದೆ.
ಕೊಣಾಜೆ ಬಳಿಯ ಪಜೀರಿನಲ್ಲಿ ರಿಯಾಜ್ ಮತ್ತೆ ಪ್ರಚೋದನಕಾರಿ ಭಾಷಣ ಮಾಡಿದ್ದು ಯುವಕರನ್ನು ಗಲ್ಲಿ ಗಲ್ಲಿಯಲ್ಲಿ ಛೂ ಬಿಡುತ್ತೇನೆ. ಒಂದಲ್ಲ ಹತ್ತು ಸಾರಿ ಹೇಳುತ್ತೇನೆ, ತಾಂಟ್ ರೇ ಬಾ ತಾಂಟ್ ಎನ್ನುವ ಮೂಲಕ ತನ್ನ ಪಕ್ಷದ ಕಾರ್ಯಕರ್ತರನ್ನು ಸಂಘ ಪರಿವಾರದ ವಿರುದ್ಧ ಎತ್ತಿ ಕಟ್ಟುತ್ತಿದ್ದಾರೆ. ರಿಯಾಜ್ ನೀಡಿರುವ ಇಂತಹ ಹೇಳಿಕೆಗಳಿಂದ ಸಮಾಜದ ಶಾಂತಿಗೆ ಭಂಗ ಉಂಟಾಗುವ ಸಾಧ್ಯತೆ ಇದೆ. ಕೋಮು ಗಲಭೆಯನ್ನು ಹಬ್ಬಿಸುವ ಉದ್ದೇಶದಿಂದ ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ. ಆದ್ದರಿಂದ ರಿಯಾಜ್ ಪರಂಗಿಪೇಟೆ ವಿರುದ್ಧ ಕಲಂ 153 ಎ ಮತ್ತು 505 (1) ಮತ್ತು 505 (2) ರ ಅಡಿಯಲ್ಲಿ ಪ್ರಕರಣ ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳುವಂತೆ ಜಾಗರಣ ವೇದಿಕೆ ಮುಖಂಡರು ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಮೂಡುಬಿದ್ರೆ ಹಿಂದು ಜಾಗರಣ ವೇದಿಕೆ ತಾಲೂಕು ಅಧ್ಯಕ್ಷ ಸಮಿತ್ ರಾಜ್ ದರೆಗುಡ್ಡೆ , ಉಪಾಧ್ಯಕ್ಷ ನಾಗೇಶ್ ಕುಲಾಲ್, ಹಿಂದು ಯುವವಾಹಿನಿ ಸಂಯೋಜಕ ಸಂದೀಪ ಸುವರ್ಣ ಕೆಲ್ಲಪುತ್ತಿಗೆ, ಕಾರ್ಯದರ್ಶಿ ಸಂದೀಪ್ ಹೆಗ್ಡೆ, ನಗರ ಪ್ರಮುಖರಾದ ನರೇಶ್ ಶೆಟ್ಟಿ ಉಪಸ್ಥಿತರಿದ್ದರು.
Ullal Hindu Jagarana Vedike Demands sting action against Riyaz Farangipete for his provocative speech in Mangalore.
04-04-25 12:00 pm
Bangalore Correspondent
MLC Vishwanath, Siddaramaiah: ಫ್ರೀ ಬಸ್ ಕೊಟ್ಟ...
04-04-25 10:28 am
Mandya Mysuru Bangalore Accident, KSRTC, Car:...
03-04-25 09:44 pm
Hubballi student suicide attempt: ಯುವತಿಯ ಖಾಸಗ...
02-04-25 10:48 pm
Accident in Chitradurga: ಚಿತ್ರದುರ್ಗ ; 15ಕ್ಕೂ...
02-04-25 09:54 pm
04-04-25 12:44 pm
HK News Desk
Mangalore MP Brijesh Chowta: ನಿವೃತ್ತ ಸೈನಿಕರ ಅ...
03-04-25 11:10 pm
Waqf Bill, Amit Shah; ಸುದೀರ್ಘ ಚರ್ಚೆ ಬಳಿಕ ಸಂಸತ...
03-04-25 01:04 pm
ವಕ್ಫ್ ತಿದ್ದುಪಡಿ ವಿಧೇಯಕ ಸಂಸತ್ತಿನಲ್ಲಿ ಮಂಡನೆ ; ವ...
02-04-25 07:35 pm
ಇತಿಹಾಸವನ್ನು ಚರಿತ್ರೆ ಪುಸ್ತಕಗಳಿಂದ ತಿಳಿಯಬೇಕೇ ವಿನ...
31-03-25 09:34 pm
04-04-25 01:39 pm
Mangalore Correspondent
Mangalore Police, Inspector Balakrishna: ಪ್ರಕ...
03-04-25 10:14 pm
Mangalore Court, Lawyers Protest, Judge: ಜಡ್ಜ...
03-04-25 04:04 pm
Belthangady, Head Constable Praveen, Cm Medal...
03-04-25 03:09 pm
Sdpi Protest Mangalore: ವಕ್ಫ್ ತಿದ್ದುಪಡಿ ಮಸೂದೆ...
02-04-25 11:02 pm
04-04-25 03:03 pm
Mangalore Correspondent
Kalaburagi Murder, Three killed: ಕೌಟುಂಬಿಕ ಕಲಹ...
03-04-25 05:01 pm
Mandya Marriage Fraud: ಒಬ್ಬರಲ್ಲ, ಮೂವರು ಯುವಕರ...
03-04-25 01:02 pm
Mangalore police, Cow trafficking, Kaikamba,...
02-04-25 05:49 pm
Chikkamagaluru murder, Three Killed: ಪತ್ನಿ ಬಿ...
02-04-25 01:11 pm