ಬ್ರೇಕಿಂಗ್ ನ್ಯೂಸ್

Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿಂಗರತಿ ಲೈಂಗಿಕ ದೌರ್ಜನ್ಯ ; ಬೇಕಲ ಶಿಕ್ಷಣಾಧಿಕಾರಿ, ರೈಲ್ವೇ ಉದ್ಯೋಗಿ, ಜಮಾತೆ ಇಸ್ಲಾಮಿ, ಲೀಗ್ ಕಾರ್ಯಕರ್ತರು ಸೇರಿ ಹತ್ತು ಮಂದಿ ಪೊಲೀಸ್ ಬಲೆಗೆ, ಕಾಸರಗೋಡಿನಲ್ಲಿ ಸಂಚಲನ ಮೂಡಿಸಿದ ಪ್ರಕರಣ     |    ಬಂಗ್ಲೆಗುಡ್ಡೆ ಕಾಡಿನಲ್ಲಿ 9 ಕಡೆ ಮನುಷ್ಯನ ಎಲುಬು, ಬುರುಡೆಗಳು ಪತ್ತೆ, ಧರ್ಮಸ್ಥಳ ಪ್ರಕರಣಕ್ಕೆ ಮತ್ತೆ ತಿರುವು, ಎಸ್ಐಟಿ ಶೋಧ ಕಾರ್ಯ ಮುಂದುವರಿಕೆಬಂಗ್ಲೆಗುಡ್ಡೆ ಕಾಡಿನಲ್ಲಿ 9 ಕಡೆ ಮನುಷ್ಯನ ಎಲುಬು, ಬುರುಡೆಗಳು ಪತ್ತೆ, ಧರ್ಮಸ್ಥಳ ಪ್ರಕರಣಕ್ಕೆ ಮತ್ತೆ ತಿರುವು, ಎಸ್ಐಟಿ ಶೋಧ ಕಾರ್ಯ ಮುಂದುವರಿಕೆ    |    Mahesh Shetty Timarodi, Arms, FIR: ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿಯಲ್ಲಿ ಮತ್ತೊಂದು ಎಫ್ಐಆರ್, ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಕೇಸು ದಾಖಲು    |   

ಬಿಎ ಉದ್ಯಮ ಸಂಸ್ಥೆಗಳ ಸ್ಥಾಪಕ ಡಾ.ಬಿ.ಎ. ಮೊಹಿದ್ದೀನ್ ನಿಧನ 

16-08-20 03:43 pm       Mangalore Reporter   ಕರಾವಳಿ

ಬಿಎ ಗ್ರೂಪ್ ಉದ್ಯಮ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷ ಡಾ.ಬಿ.ಎ. ಮೊಹಿದ್ದೀನ್ (86) ಅಲ್ಪಕಾಲದ ಅಸೌಖ್ಯದ ಬಳಿಕ ಇಂದು ಬೆಳಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 

ಮಂಗಳೂರು, ಆಗಸ್ಟ್ 16: ಬಿಎ ಗ್ರೂಪ್ ಉದ್ಯಮ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷ ಡಾ.ಬಿ.ಎ. ಮೊಹಿದ್ದೀನ್ (86) ಅಲ್ಪಕಾಲದ ಅಸೌಖ್ಯದ ಬಳಿಕ ಇಂದು ಬೆಳಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 

ಮೊಹಿದ್ದೀನ್ ಅವರ ಪಾರ್ಥಿವ ಶರೀರವನ್ನು ಮಂಗಳೂರಿನ ತುಂಬೆ ಪಿಯು ಕಾಲೇಜಿನಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗಿದ್ದು ತುಂಬೆ ಮಸೀದಿಯಲ್ಲಿ ಇಂದು ಸಂಜೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. 

ತುಂಬೆಯಲ್ಲಿ 1957ರಲ್ಲಿ ಬಿಎ ಗ್ರೂಪ್ ಹೆಸರಲ್ಲಿ ಟಿಂಬರ್ ವ್ಯಾಪಾರ ಸಂಸ್ಥೆ ಹುಟ್ಟುಹಾಕಿದ್ದ ಅಹ್ಮದ್ ಹಾಜಿಯವರು ಐದು ದಶಕಗಳ ಕಾಲ ಮರದ ವ್ಯಾಪಾರಿಯಾಗಿ, ಹಲವೆಡೆ ಮರದ ಕಾರ್ಖಾನೆಗಳನ್ನು ಸ್ಥಾಪಿಸಿದ್ದರು.  ಇದೇ ವೇಳೆ, ರಿಯಲ್ ಎಸ್ಟೇಟ್, ಶಿಕ್ಷಣ ಸಂಸ್ಥೆಗಳಲ್ಲಿಯೂ ತೊಡಗಿಸಿಕೊಂಡ ಅಹ್ಮದ್ ಹಾಜಿ, ಕುಗ್ರಾಮವಾಗಿದ್ದ ತುಂಬೆಯಲ್ಲಿ ಐಟಿಐ, ಇಂಗ್ಲಿಷ್ - ಕನ್ನಡ ಮೀಡಿಯಂ ಸ್ಕೂಲ್, ಇಂಜಿನಿಯರಿಂಗ್ ಕಾಲೇಜು ಆರಂಭಿಸಿ ಹೆಸರು ಮಾಡಿದ್ದಾರೆ. ಮಂಗಳೂರಿನಲ್ಲಿ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ಟ್ರಸ್ಟಿಯಾಗಿ, ಅಧ್ಯಕ್ಷರಾಗಿದ್ದ ಅಹ್ಮದ್ ಹಾಜಿಯವರ ಬಿಎ ಗ್ರೂಪ್ ಈಗ ದುಬೈ ಮತ್ತು ಭಾರತದಲ್ಲಿ ದೊಡ್ಡ ಉದ್ಯಮ ಸಂಸ್ಥೆಯಾಗಿ ಬೆಳೆದಿದೆ. ಹಾಜಿಯವರ ನಾಲ್ವರು ಮಕ್ಕಳು ಸಂಸ್ಥೆಯನ್ನು ಮುನ್ನಡೆಸುತ್ತಿದ್ದಾರೆ.