ಬ್ರೇಕಿಂಗ್ ನ್ಯೂಸ್
19-02-21 10:58 am Mangalore Correspondent ಕರಾವಳಿ
ಪುತ್ತೂರು, ಫೆ.19: ರಂಗಸ್ಥಳದ ಸಿಡಿಲಮರಿ ಎಂದೇ ಖ್ಯಾತಿ ಪಡೆದಿದ್ದ ಹಿರಿಯ ಯಕ್ಷಗಾನ ಕಲಾವಿದ, ರಾಜ್ಯೋತ್ಸವ ಪುರಸ್ಕೃತ ಪುತ್ತೂರು ಶ್ರೀಧರ ಭಂಡಾರಿ (73) ಇಂದು ಮುಂಜಾನೆ ನಿಧನರಾಗಿದ್ದಾರೆ. ತೆಂಕು ತಿಟ್ಟು ಯಕ್ಷಗಾನ ಕ್ಷೇತ್ರದಲ್ಲಿ ಸುದೀರ್ಘ ಆರು ದಶಕಗಳ ಕಾಲ ಸೇವೆ ಸಲ್ಲಿಸಿ, ರಾಜ್ಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ಧಿ ಗಳಿಸಿದ್ದರು.
ಅವರು ಪತ್ನಿ, ಪುತ್ರ, ಮೂವರು ಪುತ್ರಿಯರು ಹಾಗೂ ಅಪಾರ ಯಕ್ಷಾಭಿಮಾನಿಗಳನ್ನು ಅಗಲಿದ್ದಾರೆ. ತಮ್ಮ 12ನೇ ವಯಸ್ಸಿನಲ್ಲೇ ಯಕ್ಷಗಾನ ಕಲಿತು, 15ನೇ ವಯಸ್ಸಿನಲ್ಲಿ ರಂಗಸ್ಥಳ ಏರಿದ್ದ ಶ್ರೀಧರ ಭಂಡಾರಿಗೆ ತೆಂಕುತಿಟ್ಟಿನಲ್ಲಿ ಸಾಟಿಯಾಗಬಲ್ಲ ಇನ್ನೊಬ್ಬ ವೇಷಧಾರಿಯೇ ಇರಲಿಲ್ಲ. ನಾಟ್ಯ, ಲಯಬದ್ಧ ಮಾತುಗಾರಿಕೆ, ಇಳಿವಯಸ್ಸಿನಲ್ಲೂ ರಂಗಸ್ಥಳವನ್ನು ಗಿರಗಿಟ್ಟೆ ಮಾಡುವಂತೆ ಕುಣಿಯುತ್ತಿದ್ದ ಛಾತಿ ಭಂಡಾರಿಗೆ ಭಂಡಾರಿಯೇ ಸಾಟಿ. ವಿಶೇಷವಾಗಿ ಅಭಿಮನ್ಯು ಪಾತ್ರಕ್ಕೆ ಯಕ್ಷಗಾನದಲ್ಲಿ ಮಿಂಚು ಹರಿಸಿದ್ದೇ ಭಂಡಾರಿ. ಚಕ್ರವ್ಯೂಹ ಪ್ರಸಂಗದಲ್ಲಿ ಅಭಿಮನ್ಯು ಚಕ್ರವ್ಯೂಹ ಭೇದಿಸುವ ಪರಿಯನ್ನು ಪ್ರೇಕ್ಷಕರಿಗೆ ಮಹಾಭಾರತ ನೋಡಿದ ರೀತಿಯಲ್ಲೇ ಕಟ್ಟಿಕೊಟ್ಟಿದ್ದು ಶ್ರೀಧರ ಭಂಡಾರಿ. ಮೊಣಕಾಲು ಊರಿಕೊಂಡು ಗಿರಗಿಟ್ಟೆ ತಿರುಗುತ್ತಿದ್ದ ಪರಿ ನೋಡುಗರಲ್ಲಿ ಮಿಂಚಿನ ಸಂಚಾರ ಮೂಡಿಸುತ್ತಿತ್ತು. 60ರ ಇಳಿವಯಸ್ಸಲ್ಲೂ ಮೊಣಕಾಲಿನಲ್ಲಿ ತಿರುಗುತ್ತಿದ್ದ ಏಕೈಕ ಪಾತ್ರಧಾರಿಯೂ ಅವರೇ ಆಗಿದ್ದರು.
ಆರಂಭದಲ್ಲಿ ಸುಬ್ರಹ್ಮಣ್ಯ ಮೇಳ, ಬಾಳಂಬೆಟ್ಟು ಮೇಳ, ಪುತ್ತೂರು ಮೇಳಗಳಲ್ಲಿ ಸೇವೆ ಸಲ್ಲಿಸಿದ ಶ್ರೀಧರ ಭಂಡಾರಿ ಅವರು, ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಮೇಳದಲ್ಲಿ ಸುದೀರ್ಘ 45 ವರ್ಷಗಳ ಕಾಲ ಪ್ರಮುಖ ವೇಷಧಾರಿಯಾಗಿ ಗುರುತಿಸಿದ್ದರು.
ಯಕ್ಷಗಾನದ ಸಿಡಿಲಮರಿ, ರಂಗಸ್ಥಳದ ರಾಜ, ಯಕ್ಷನಾಟ್ಯ ಚತುರ, ಶತ ಗಣಗಳ ರಾಜ ಇತ್ಯಾದಿ ಬಿರುದುಗಳನ್ನು ಪಡೆದಿದ್ದ ಇವರನ್ನು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಯಕ್ಷಗಾನ ಅಕಾಡೆಮಿ ಪ್ರಶಸ್ತಿಯೂ ಸೇರಿದಂತೆ ಅನೇಕ ಪ್ರಶಸ್ತಿ, ಪುರಸ್ಕಾರಗಳು ಅರಸಿ ಬಂದಿದ್ದವು. ರಾಜ್ಯ, ದೇಶ, ಅಂತಾರಾಷ್ಟ್ರೀಯ ಮಟ್ಟಗಳಲ್ಲಿ 150ಕ್ಕಿಂತಲೂ ಹೆಚ್ಚಿನ ಪುರಸ್ಕಾರಗಳನ್ನು ಇವರು ಪಡೆದಿದ್ದರು.
17-04-25 05:01 pm
Bangalore Correspondent
Chennaiyya Swamiji, Caste census: ಪರಿಶಿಷ್ಟ ಜಾ...
17-04-25 11:41 am
Shamanur, CM Siddaramaiah: ರಾಜ್ಯದಲ್ಲಿ ಲಿಂಗಾಯತ...
16-04-25 11:03 pm
ಒಂದನೇ ತರಗತಿಗೆ ಪ್ರವೇಶ ; ಈ ವರ್ಷಕ್ಕೆ ಮಾತ್ರ ಮಕ್ಕಳ...
16-04-25 09:07 pm
Bigg Boss Kannada, Rajath arrested: ರೀಲ್ಸ್ ಶೋ...
16-04-25 06:42 pm
16-04-25 03:54 pm
HK News Desk
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
ಕುರಾನ್ ಪ್ರತಿ, ಪೆನ್- ಪೇಪರ್ ಪಡೆದ ತಹಾವ್ವುರ್ ರಾಣಾ...
13-04-25 06:15 pm
17-04-25 11:06 pm
Mangalore Correspondent
Karnataka High Court, Waqf protest Mangalore...
17-04-25 10:27 pm
ಸುರತ್ಕಲ್ ಎನ್ಐಟಿಕೆ ಸಂಸ್ಥೆಯಲ್ಲಿ ಮಹತ್ತರ ಫೈಲ್ ಡಿಲ...
17-04-25 04:39 pm
Mangalore, Bantwal Accident, Melroy D’Sa: ಬಂಟ...
16-04-25 10:58 pm
Mangalore Traffic diversion, Anti Waqf bill p...
16-04-25 08:22 pm
17-04-25 09:56 pm
Mangalore Correspondent
Gang Rape, Mangalore, Ullal, Crime: ಪಶ್ಚಿಮ ಬಂ...
17-04-25 03:19 pm
Sullia, Drugs, Mangalore, Ccb Police; ದೆಹಲಿಯಿ...
17-04-25 11:39 am
Air Hostess, ICU, Sexual Harrasment: ICU ನಲ್ಲ...
15-04-25 10:24 pm
Pastor John Jebraj Arrest: ಇಬ್ಬರು ಹೆಣ್ಮಕ್ಕಳಿಗ...
15-04-25 06:17 pm