ಬ್ರೇಕಿಂಗ್ ನ್ಯೂಸ್
26-02-21 02:04 pm Mangalore Correspondent ಕರಾವಳಿ
ಮಂಗಳೂರು, ಫೆ.26 : ಕರ್ನಾಟಕ ಉಚ್ಚ ನ್ಯಾಯಾಲಯದ 2020ನೇ ಸಾಲಿನ ಸಿವಿಲ್ ಜಡ್ಜ್ ನ್ಯಾಯಾಧೀಶರ ಪರೀಕ್ಷೆಯಲ್ಲಿ ಧರ್ಮಸ್ಥಳ ಮೂಲದ ಹಳ್ಳಿಗಾಡಿನ ಯುವತಿ ಚೇತನಾ ಉತ್ತೀರ್ಣರಾಗಿದ್ದು ಕಿರಿಯ ವಯಸ್ಸಿನಲ್ಲಿ ಸಿವಿಲ್ ನ್ಯಾಯಾಧೀಶೆಯ ಹುದ್ದೆಗೇರಿದ್ದಾರೆ.
29ರ ಹರೆಯದ ಚೇತನಾ, ಧರ್ಮಸ್ಥಳ ಗ್ರಾಮದ ನಾರ್ಯ ನಿವಾಸಿಯಾಗಿದ್ದು ರಾಮಣ್ಣ ಪೂಜಾರಿ ಮತ್ತು ಸೀತಾ ದಂಪತಿಯ ನಾಲ್ವರು ಮಕ್ಕಳ ಪೈಕಿ ಎರಡನೆಯವರು. ತಮ್ಮ ಪ್ರಾಥಮಿಕ ವಿದ್ಯಾಭ್ಯಾಸವನ್ನು ಉಪ್ಪಿನಂಗಡಿ ಸಮೀಪದ ಸರಕಾರಿ ಪೆರ್ನೆ ಕನ್ನಡ ಮಾಧ್ಯಮ ಶಾಲೆಯಲ್ಲಿ ಮುಗಿಸಿದ ಅವರು ಏಳನೇ ತರಗತಿ ಶಿಕ್ಷಣವನ್ನು ಕನ್ಯಾಡಿ ಸರಕಾರಿ ಶಾಲೆಯಲ್ಲಿ ಪೂರೈಸಿದ್ದರು. ಪ್ರೌಢಶಾಲಾ ಶಿಕ್ಷಣವನ್ನು ಧರ್ಮಸ್ಥಳದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸೆಕೆಂಡರಿ ಶಾಲೆಯಲ್ಲಿ ಪಡೆದರೆ, ಪದವಿ ಪೂರ್ವ ಶಿಕ್ಷಣವನ್ನು ಬೆಳ್ತಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮುಗಿಸಿದ್ದರು. ಬಳಿಕ ಮಂಗಳೂರಿನ ಎಸ್.ಡಿ.ಎಂ. ಕಾನೂನು ಕಾಲೇಜಿನಲ್ಲಿ 2016ನೇ ಇಸವಿಯಲ್ಲಿ ಕಾನೂನು ಪದವಿ ಮುಗಿಸಿದ್ದರು.
ಕಾನೂನು ಪದವಿ ಬಳಿಕ ಬೆಳ್ತಂಗಡಿಯ ವಕೀಲ ಕೇಶವ ಪಿ. ಬೆಳಾಲು ಅವರ ಕಚೇರಿಯಲ್ಲಿ ವಕೀಲಿ ವೃತ್ತಿ ಆರಂಭಿಸಿದರು. ನಂತರ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶ ಬಿ. ಎ. ಪಾಟೀಲ್ ಅವರ ಜೊತೆ ಲಾ ಕ್ಲಾರ್ಕ್ ರೀಸರ್ಚ್ ಅಸಿಸ್ಟೆಂಟ್ ಆಗಿ ಮೂರು ವರ್ಷ ಸೇವೆ ಸಲ್ಲಿಸಿದರು. ಕಳೆದ ಒಂದು ವರ್ಷದಿಂದ ಬೆಂಗಳೂರಿನ ನ್ಯಾಯವಾದಿ ಶಿವಪ್ರಸಾದ್ ಶಾಂತನಗೌಡರ್ ಅವರ ಕಚೇರಿಯಲ್ಲಿ ಕಿರಿಯ ವಕೀಲರಾಗಿ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ವೃತ್ತಿ ಜೀವನ ನಡೆಸುತ್ತಿದ್ದರು. ಈ ಬಾರಿ ಸಿವಿಲ್ ಜಡ್ಜ್ ಪರೀಕ್ಷೆ ಬರೆದು ನ್ಯಾಯಾಧೀಶರಾಗಿ ಆಯ್ಕೆಯಾಗಿದ್ದಾರೆ.
Two woman advocates, Sparsha M D'Souza, Chethana from Dakshian Kannada district, have been chosen as civil judges after clearing the examination held recently for recruitment as judges.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm