ಬ್ರೇಕಿಂಗ್ ನ್ಯೂಸ್
01-03-21 05:45 pm Mangalore Correspondent ಕರಾವಳಿ
ಬಂಟ್ವಾಳ, ಮಾ.1: ಪೆಟ್ರೋಲ್, ಡೀಸೆಲ್ ಹಾಗೂ ಗ್ಯಾಸ್ ಸಿಲಿಂಡರ್ ಬೆಲೆ ವಿಪರೀತವಾಗಿ ಏರುತ್ತಿರುವುದನ್ನು ಅಣಕಿಸಿ ಮಾಜಿ ಸಚಿವ ರಮಾನಾಥ ರೈ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ತೈಲ ಬೆಲೆ ಏರಿಕೆ ಆಗಿರುವುದರಿಂದ ವಾಹನಗಳ ಉಪಯೋಗ ಸಾಧ್ಯವಾಗದ ಸ್ಥಿತಿ ತಲುಪಿದ್ದು ಹೀಗಾಗಿ ಹಳೆಯ ಕಾಲದ ರೀತಿ ಕತ್ತೆಯಲ್ಲಿ ವಸ್ತುಗಳನ್ನು ತುಂಬಿಕೊಂಡು ಮೆರವಣಿಗೆ ನಡೆಸಲಾಯಿತು. ಇದೇ ವೇಳೆ, ಕೈಗಾಡಿಯಲ್ಲಿ ಗ್ಯಾಸ್ ಸಿಲಿಂಡರ್ ಹೇರಿಕೊಂಡು ಸ್ವತಃ ರಮಾನಾಥ ರೈ ಸೇರಿದಂತೆ ಕಾರ್ಯಕರ್ತರು ರಸ್ತೆಯುದ್ದಕ್ಕೂ ಎಳೆದುಕೊಂಡು ಮೆರವಣಿಗೆ ನಡೆಸಿದರು. ಈ ಮೂಲಕ ಜನರ ಗಮನ ಸೆಳೆಯಲಾಯಿತು.
ಬಿ.ಸಿ.ರೋಡಿನಲ್ಲಿ ಪ್ರತಿಭಟನಾ ಸಭೆ ನಡೆಸಿ, ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರಕಾರಗಳ ನೀತಿಯನ್ನು ಖಂಡಿಸಿದರು.
ಈ ವೇಳೆ ರಮಾನಾಥ ರೈ ಮಾತನಾಡಿ, ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್ ಹೀಗೆ ದಿನಬಳಕೆಯ ವಸ್ತುಗಳ ಮೇಲೆ ವಿಪರೀತ ತೆರಿಗೆ ವಿಧಿಸಿದ್ದು ಸಾಮಾನ್ಯ ಜನರ ಮೇಲೆ ಬರೆ ಹಾಕುತ್ತಿದ್ದಾರೆ. ಜನ ಸಾಮಾನ್ಯರು ಕೊರೊನಾ ಸಂದರ್ಭದಲ್ಲಿ ತೊಂದರೆ ಅನುಭವಿಸಿದರು. ಈಗ ತೈಲ ಬೆಲೆ ಹೆಸರಲ್ಲಿ ಜನರನ್ನು ಪೀಡಿಸುತ್ತಿದ್ದಾರೆ. ಇದೇ ವೇಳೆ ಬಹುರಾಷ್ಟ್ರೀಯ ಕಂಪನಿಗಳಿಗೆ ನೆರವಿನ ಪ್ಯಾಕೇಜ್ ನೀಡುತ್ತಾರೆ. ಬಡ ಜನರ ಮೇಲೆ ಹೊರೆ ಹೊರಿಸಿ ಕಾರ್ಪೊರೇಟ್ ಕಂಪನಿಗಳ ಹೊಟ್ಟೆ ತುಂಬಿಸುವ ಕೆಲಸ ಯಾಕೆ ? ಇವರು ಹಿಂದೆ ಯುಪಿಎ ಸರಕಾರ ಇದ್ದಾಗ ತೈಲ ಬೆಲೆ ಏರಿಕೆಯನ್ನೇ ಮುಂದಿಟ್ಟು ಹೋರಾಟ ಮಾಡಿ ಅಧಿಕಾರಕ್ಕೇರಿದರು. ಈಗ ಯಾಕೆ ಬಿಜೆಪಿಯವರಿಗೆ ತೈಲ ಬೆಲೆ ಇಳಿಸಲು ಆಗುತ್ತಿಲ್ಲ ಎಂದು ಪ್ರಶ್ನೆ ಮಾಡಿದರು.
ಬಂಟ್ವಾಳ ತಾಲೂಕು ಕಚೇರಿ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಸೇರಿ ಹಲವರು ಪಾಲ್ಗೊಂಡಿದ್ದರು.
Raise in petrol diesel price bantwal Congress leaders protest by making Donkeys pull bikes. Former Minister Ramanth Rai also participated in the protest
19-04-25 12:24 pm
HK News Desk
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
Chennaiyya Swamiji, Caste census: ಪರಿಶಿಷ್ಟ ಜಾ...
17-04-25 11:41 am
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 10:51 am
Mangalore Correspondent
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
Waqf Protest, Mangalore, Traffic: ಎಪ್ರಿಲ್ 18...
17-04-25 11:06 pm
Karnataka High Court, Waqf protest Mangalore...
17-04-25 10:27 pm
19-04-25 11:01 am
Bangalore Correspondent
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm
Hyderabad Murder, Mother suicide: ತೆಂಗಿನಕಾಯಿ...
18-04-25 08:14 pm
Dead Baby Found, Garbage, Bangalore crime: ಅಪ...
18-04-25 03:41 pm