ಬ್ರೇಕಿಂಗ್ ನ್ಯೂಸ್
08-03-21 08:00 pm Mangaluru correspondent ಕರಾವಳಿ
ಮಂಗಳೂರು, ಮಾ.8: ಲಂಚ ಪಡೆದು ಸಿಕ್ಕಿಬಿದ್ದ ಮಂಗಳೂರು ತಾಲೂಕು ಕಚೇರಿಯ ಭೂದಾಖಲೆಗಳ ಸಹಾಯಕರ ಕಚೇರಿಯಲ್ಲಿ ಸರ್ವೆಯರ್ ಆಗಿ ಕೆಲಸ ಮಾಡುತ್ತಿದ್ದ ಗಂಗಾಧರ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.
ಆರೋಪಿ ಮರ ಕಡಿಯುವ ವಿಚಾರಕ್ಕೆ ಸಂಬಂಧಿಸಿ ಜಾಗವನ್ನು ಅಳತೆ ಮಾಡಿ ನಕಾಶೆಯನ್ನು ನೀಡಲು ಉಳ್ಳಾಲದ ಸೊಹೈಲ್ ಎಂಬವರಿಂದ ಲಂಚದ ರೂಪದಲ್ಲಿ ರೂ.30,000 ಬೇಡಿಕೆ ಇಟ್ಟಿದ್ದ. ಬಳಿಕ ಮಾತುಕತೆ ನಡೆದು ರೂ. 20 ಸಾವಿರಕ್ಕೆ ಒಪ್ಪಿ 3,500 ರೂ. ಮುಂಗಡ ಪಡೆದಿದ್ದ. ಈ ವೇಳೆ, ಎಸಿಬಿಗೆ ತಿಳಿಸಿದ್ದು ಉಳಿಕೆ ಹಣ ರೂ. 16,500 ಸ್ವೀಕರಿಸುತ್ತಿದ್ದಾಗ ಕಳೆದ ಫೆ.23ರಂದು ಮಂಗಳೂರಿನ ಭ್ರಷ್ಟಾಚಾರ ನಿಗ್ರಹದಳದ ಪೊಲೀಸರು ದಾಳಿ ನಡೆಸಿದ್ದರು. ಡಿವೈಎಸ್ಪಿ ಕೆ.ಸಿ.ಪ್ರಕಾಶ್ ಮತ್ತು ಇನ್ಸ್ ಪೆಕ್ಟರ್ ಶ್ಯಾಮಸುಂದರ್ ಹಾಗೂ ಗುರುರಾಜ್ ಅವರಿದ್ದ ತಂಡ ಆರೋಪಿಯನ್ನು ಬಂದಿಸಿದ್ದರು.
ಆರೋಪಿ ಗಂಗಾಧರ್ ಮಂಗಳೂರಿನ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದು ಜಾಮೀನಿಗೆ ಅರ್ಜಿ ಸಲ್ಲಿಸಿದ್ದ. ಅರ್ಜಿಯನ್ನು ವಿಚಾರಣೆ ನಡೆಸಿದ ಮಂಗಳೂರಿನ ಮೂರನೇ ಸೆಷೆನ್ಸ್ ನ್ಯಾಯಾಲಯದ ನ್ಯಾಯಾಧೀಶ ಬಿ.ಬಿ. ಜಕಾತಿ, ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದ್ದಾರೆ.
ಭ್ರಷ್ಟಾಚಾರ ನಿಗ್ರಹದಳದ ಪರ ವಕೀಲರಾದ ವಿಶೇಷ ಸರಕಾರಿ ಅಭಿಯೋಜಕ ಕೆ.ಎಸ್.ಎನ್. ರಾಜೇಶ್, ಆರೋಪಿಗಳ ಜಾಮೀನು ಅರ್ಜಿಗೆ ಪ್ರಬಲ ಆಕ್ಷೇಪ ಸಲ್ಲಿಸಿ, ಭ್ರಷ್ಟಾಚಾರದಂತಹ ಗಂಭೀರ ಪ್ರಕರಣದಲ್ಲಿ ತನಿಖೆ ಪೂರ್ಣಗೊಳ್ಳುವ ಮೊದಲು ಜಾಮೀನು ನೀಡಿದಲ್ಲಿ ಸಮಾಜಕ್ಕೆ ತಪ್ಪು ಸಂದೇಶ ರವಾನೆಯಾಗುತ್ತದೆ ಎಂದು ವಾದಿಸಿದ್ದರು.
Mangalore Bail plea of revenue surveyor who was caught over bribe charges by the ACB officials has been rejected.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 11:01 am
Bangalore Correspondent
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm
Hyderabad Murder, Mother suicide: ತೆಂಗಿನಕಾಯಿ...
18-04-25 08:14 pm
Dead Baby Found, Garbage, Bangalore crime: ಅಪ...
18-04-25 03:41 pm