ಬ್ರೇಕಿಂಗ್ ನ್ಯೂಸ್
19-08-20 11:05 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 20: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ ಹಾಕಿದ್ದ ಆರೋಪಿಯನ್ನು ಬಜಪೆ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಉಡುಪಿ ಜಿಲ್ಲೆಯ ಕಾರ್ಕಳದ ಮುರಾಡಿ ನಿವಾಸಿ ವಸಂತ್ (33) ಬಂಧಿತ ಆರೋಪಿ. ಈತ ನಿನ್ನೆ ಮಧ್ಯಾಹ್ನ ಮಂಗಳೂರು ವಿಮಾನ ನಿಲ್ದಾಣದ ಮಾಜಿ ನಿರ್ದೇಶಕ ವಾಸುದೇವ ರಾವ್ ಅವರಿಗೆ ಕರೆ ಮಾಡಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಿದ್ದ.
ಇತ್ತ ಬೆದರಿಕೆ ಕರೆ ಆಗಮಿಸುತ್ತಿದಂತೆ ವಾಸುದೇವ ರಾವ್ ಅವರು ವಿಮಾನ ನಿಲ್ದಾಣ ಭದ್ರತಾ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಕೂಡಲೇ ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ಪರಿಶೀಲನೆ ನಡೆಸಲಾಗಿತ್ತು. ಆ ಬಳಿಕ ಫೋನ್ ಕರೆ ಹುಸಿ ಬೆದರಿಕೆ ಎಂಬುವುದು ಖಚಿತವಾಗಿತ್ತು.
ಘಟನೆ ಸಂಬಂಧ ವಿಮಾನ ನಿಲ್ದಾಣದ ಅಧಿಕಾರಿಗಳು ಪೊಲೀಸ್ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಪೊಲೀಸರು ಮೊಬೈಲ್ ನಂಬರ್ ಆಧರಿಸಿ ಟ್ರ್ಯಾಕ್ ಮಾಡಿ ಆರೋಪಿಯನ್ನು ಪತ್ತೆ ಮಾಡಿದ್ದರು. ಸದ್ಯ ಬಂಧಿತ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದಾನೆ ಎಂಬ ಮಾಹಿತಿ ಲಭಿಸಿದೆ. ಈ ಕುರಿತಂತೆ ಬಜಪೆ ಠಾಣಾ ಪೊಲೀಸರಿಂದ ಪ್ರಕರಣ ದಾಖಲಾಗಿದೆ.
ಆರು ತಿಂಗಳ ಹಿಂದೆ ಆದಿತ್ಯ ರಾವ್ ಎಂಬಾತ ಇದೇ ರೀತಿ ಬಾಂಬ್ ಬೆದರಿಕೆ ಹಾಕಿದ್ದ. ಬಳಿಕ ತಪಾಸಣೆ ನಡೆಸಿದಾಗ ಏರ್ಪೋರ್ಟ್ ಆವರಣದಲ್ಲಿ ಸಜೀವ ಬಾಂಬ್ ಪತ್ತೆಯಾಗಿತ್ತು. ಪೊಲೀಸರು ಸಿಸಿಟಿವಿ ಆಧರಿಸಿ ತನಿಖೆ ಕೈಗೊಂಡಿದ್ದಾಗಲೇ ಆದಿತ್ಯ ರಾವ್ ಬೆಂಗಳೂರಿಗೆ ತೆರಳಿ ಶರಣಾಗಿದ್ದ.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
21-09-26 08:21 pm
HK News Staffer
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm